LIVE TV StateNationalPoliticsInternationalCrimeEntertainmentSportsEducationFINANCE & TAXATION
State News

ಐಸಿಎಫ್ಎಐ ನಲ್ಲಿ ಕಾನೂನು ಸೇವೆಗಳ ಕ್ಲಿನಿಕ್ ಉದ್ಘಾಟನೆ

ಬೆಂಗಳೂರು: ಕಾನೂನು ವಿದ್ಯಾರ್ಥಿಗಳಿಗೆ ಸಾಮಾಜಿಕ ಜವಾಬ್ದಾರಿ ಇರಬೇಕು. ಸಮಾಜದ ಸ್ವಾಸ್ತ್ಯ ಕಾಪಾಡುವ ಕೆಲಸದಲ್ಲಿ ನಿರತರಾಗಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಶೈಲ್ ಭೀಮಶೇನ್ ಬಗಾಡಿ ಹೇಳಿದ್ದಾರೆ.

 

ನಗರದ ಐಸಿಎಫ್ಎಐ ಕಾನೂನು ಶಾಲೆ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಐಸಿಎಫ್ಎಐ ಕಾನೂನು ಶಾಲೆಯ ಲೀಗಲ್ ಏಡ್ ಕ್ಲಿನಿಕ್ನಲ್ಲಿ ಕಾನೂನು ಸೇವೆಗಳ ಕ್ಲಿನಿಕ್ ಅನ್ನು ಉದ್ಘಾಟಿಸಿ, ಪ್ರಸಕ್ತ ಸಾಲಿನ ಬಿ.ಬಿ.., ಎಲ್.ಎಲ್.ಬಿ. ವಿದ್ಯಾರ್ಥಿಗಳದೀಕ್ಷಾರಂಭಶೈಕ್ಷಣಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕಾನೂನು ನೆರವಿನ ಮಹತ್ವದ ಬಗ್ಗೆ ತಿಳಿದುಕೊಳ್ಳಬೇಕು. ಪ್ರತಿಯೊಬ್ಬರಿಗೂ ಸಮಾನ ನ್ಯಾಯ ದೊರೆಯುವಂತಹ ವ್ಯವಸ್ಥೆ ರೂಪಿಸಲು ಶ್ರಮಿಸಬೇಕು. ನ್ಯಾಯದಾನ ಅತ್ಯಂತ ಮಹತ್ದ ಜವಾಬ್ದಾರಿಯಾಗಿದೆ ಎಂದರು.

 news_1785258786_1_285.webp

 

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ವೆಂಕಟೇಶ್ ಮಾತನಾಡಿ, ವಿದ್ಯಾರ್ಥಿಗಳು ಈಗಿನಿಂದಲೇ ಸಾಮಾನ್ಯ ಕಾನೂನುಗಳ ಬಗ್ಗೆ ತಿಳಿದುಕೊಳ್ಳಬೇಕು. ಸಮಾಜದ ಜೊತೆ ಒಡನಾಟವಿದ್ದರೆ ವ್ಯಾಜ್ಯಗಳನ್ನು ಬಹುಬೇಗ ಇತ್ಯರ್ಥಪಡಿಸುವ ಚಾಕಚಕ್ಯತೆ ಬರುತ್ತದೆ ಎಂದರು.

ಕಾನೂನು ಸೇವೆಗಳ ಕ್ಲಿನಿಕ್ ಉದ್ಘಾಟನೆಯೊಂದಿಗೆ ಕಾನೂನು ಅರಿವು, ಉಚಿತ ಕಾನೂನು ನೆರವು ಹಾಗೂ ಸಮಾಜಸೇವಾ ಚಟುವಟಿಕೆಗಳಿಗೆ ಅಧಿಕೃತ ಚಾಲನೆ ದೊರೆಯಿತು. ವಿದ್ಯಾರ್ಥಿ ಸಂಚಾಲಕರಾದ ಎಸ್.ವಿ. ವರ್ಷಾ ನೇತೃತ್ವದ ತಂಡದ ಸಂಯೋಜಕರಾಗಿ ಕಾರ್ಯನಿರ್ವಹಿಸಿತು. 

 

ಐಎಫ್ಎಚ್ ಕುಲಪತಿ ಪ್ರೊ. ಮುದ್ದು ವಿನಯ್, ಐಸಿಎಫ್ಎಐ ಕಾನೂನು ಶಾಲೆ ಹಾಗೂ ಬೆಂಗಳೂರು ಕ್ಯಾಂಪಸ್ ವಿಭಾಗದ ಮುಖ್ಯಸ್ಥರಾದ ಪ್ರೊ. ಡಾ. ವಿನಯ್ ಜೋಶಿ,, ಐಎಫ್ಎಚ್ ಡಾ. ರಾಜಶ್ರೀ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗೇಂದ್ರಗೆ ಮತ್ತೊಂದು ಮಹತ್ವದ ಹೊಣೆ: ಕಲ್ಯಾಣ ಕರ್ನಾಟಕ ಸಚಿವಾಲಯದ ಜವಾಬ್ದಾರಿಸಂಸ್ಕೃತ ವಿಶ್ವವ್ಯಾಪಿ ಜ್ಞಾನಭಾಷೆ, ಸಂಶೋಧನೆಗೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಲಿಕಲ್ಲೂರು- ಶಿಶು ಪಾಲನಾ ಕೇಂದ್ರದಲ್ಲಿ ತಾಯಂದಿರಿಗೆ ಜಾಗೃತಿ. ಹೊನ್ನಳ್ಳಿ ತಾಂಡಾದಲ್ಲಿ ಶ್ರೀಗುರು ಅಜ್ಜಯ್ಯನ ದ್ವಿತೀಯ ದಶಮಾನೋತ್ಸವ ವಿಶೇಷ ಪೂಜಾ ಕಾರ್ಯಕ್ರಮಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆಬಳ್ಳಾರಿಯಲ್ಲಿ ದಿವಂಗತ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆಬಳ್ಳಾರಿಯಲ್ಲಿ ರಾಜ್ಯ ಮಟ್ಟದ ಪರಿಷತ್ ಸಭೆ ಹಾಗೂ ನಶಾಮುಕ್ತ ಭಾರತ ಅಭಿಯಾನಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡಿ: ಸಿಎಂ ಡಿ ಕೆ ಶಿವಕುಮಾರ್ ಒತ್ತಾಯಯಾರಿಗೆ ಒಲೆಯುತ್ತೆ ಬಿಜೆಪಿ ಟಿಕೆಟ್ ರಾಜೀವ್ ಗಾಂಧಿ ಹಾದಿಯಲ್ಲಿ ರಾಹುಲ್ ಗಾಂಧಿ