LIVE TV StateNationalPoliticsCrimeEntertainmentSportsEducationFINANCE & TAXATION
Districts

ಸಿಎಂ ನೇತೃತ್ವದಲ್ಲಿ ಕಾಮಗಾರಿಗಳ ಉದ್ಘಾಟನೆ: ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ: ಬಳ್ಳಾರಿ ನಗರದಲ್ಲಿ ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳನ್ನು ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಶೀಘ್ರ ಉದ್ಘಾಟಿಸಲಾಗುವುದು ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

 

ಮಂಗಳವಾರ ಬಳ್ಳಾರಿಯ 14ನೇ ವಾರ್ಡಿನಲ್ಲಿ ಸಲಾಂ ಬಳ್ಳಾರಿ ಹಾಗೂ ಕಿಚನ್ ಕಿಟ್ ವಿತರಣೆಗೆ ಚಾಲನೆ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

news_1781009167_2_427.webp

 

ಗಡಿಗಿ ಚನ್ನಪ್ಪ ವೃತ್ತ, ಮಹರ್ಷಿ ವಾಲ್ಮೀಕಿಯವರ ಪುತ್ಥಳಿ ಸೇರಿದಂತೆ ಈವರೆಗೆ ಪೂರ್ಣಗೊಂಡಿರುವ ರಸ್ತೆ ಮತ್ತಿತರ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಲಾಗುವುದು ಎಂದರು.

 

ಅಲ್ಲದೇ ಶಾಶ್ವತ ಕುಡಿಯುವ ನೀರಿನ ಯೋಜನೆಯ 270 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಾಥಮಿಕ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಹೇಳಿದ ಅವರು, ಪ್ರತಿ ವಾರ್ಡಿಗೆ ತಲಾ 2.50 ಕೋಟಿ ರೂ.ಗಳ ಅನುದಾನ ಮಂಜೂರಾಗಿದ್ದು, ಬಳ್ಳಾರಿಯ ಒಳ ಪ್ರದೇಶಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.

 

ಅಂಡರ್'ಪಾಸ್ ನಿರ್ಮಾಣ ಆಗಿ ಒಂದು ವರ್ಷದಲ್ಲಿ ಬಹಳ ಸಲ ಮಳೆ ಆಗಿದೆ, ಆಗ ಅಂಡರ್'ಪಾಸಿನಲ್ಲಿ ನೀರು ನಿಂತಿರಲಿಲ್ಲ, ಅದನ್ನು ಯಾರೂ ಹೇಳಲಿಲ್ಲ, ಆದರೆ ಮೊನ್ನೆ ಬಂದ ಮಳೆ ಭೀಕರವಾಗಿತ್ತು, ಆದಾಗ್ಯೂ ನೀರು ನಿಲ್ಲಬಾರದು; ನಿಂತವು, ಅದನ್ನೇ ವಿರೋಧ ಪಕ್ಷದವರು ದೊಡ್ಡದು ಮಾಡಿದ್ದಾರೆ ಎಂದರು.

 

ಮಳೆಯಿಂದ ಬಾರಿ ಭಾರೀ ಪ್ರಮಾಣದ ಹಾನಿಯಾಗಿದೆ, ಪಾಲಿಕೆಯ ಅಧಿಕಾರಿಗಳು, ಜೆಸ್ಕಾಂನ ಅಧಿಕಾರಿ ಹಾಗೂ ಸಿಬ್ಬಂದಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಹೇಳಿದ ಶಾಸಕ ನಾರಾ ಭರತ್ ರೆಡ್ಡಿ, ವಿದ್ಯುತ್ ಸಂಪರ್ಕದ ಮಾರ್ಗಗಳು, ಕಂಬಗಳು ಹಳತಾಗಿವೆ, ಶೀಘ್ರ ಬದಲಿಸಲಾಗುವುದು ಎಂದರು.

news_1781009166_1_242.webp

 

ಸಂದರ್ಭ ಪಾಲಿಕೆಯ ಸದಸ್ಯ ನೂರ್ ಮೊಹಮ್ಮದ್, ಕಾಂಗ್ರೆಸ್ ಮುಖಂಡ ಬಿಆರೆಲ್ ಸೀನಾ, ಮಹಿಳಾ ಘಟಕದ ಮಂಜುಳಾ, ಪದ್ಮಾ, ಥಿಯೇಟರ್ ಶಿವು, ರಾಕಿ ಮತ್ತಿತರರು ಹಾಜರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ