LIVE TV StateNationalPoliticsCrimeEntertainmentSportsEducationFINANCE & TAXATION
Districts Chitradurga

ಮೊಳಕಾಲ್ಮೂರು ಕ್ಷೇತ್ರದಲ್ಲಿ ಹಿಂದುಳಿದ ವರ್ಗಕ್ಕೆ ಅನ್ಯಾಯ: ಪ್ರಭಾಕರ ಮ್ಯಾಸನಾಯಕ ಆಕ್ರೋಶ

ಮೊಳಕಾಲ್ಮೂರು: ಹಾಲುಮತಸ್ಥರು, ಯಾದವರು ಸೇರಿದಂತೆ ಹಿಂದುಳಿದ ವರ್ಗ ‘ಅ’ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ಮೊಳಕಾಲ್ಮೂರು ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯಿತಿ ಮೀಸಲಾತಿಯಲ್ಲಿ ಒಂದೇ ಒಂದು ಸ್ಥಾನವನ್ನೂ ನೀಡದೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದೆ ಎಂದು ಪ್ರಭಾಕರ ಮ್ಯಾಸನಾಯಕ ಆರೋಪಿಸಿದ್ದಾರೆ.

 

ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿ ಹೊಂದಿರುವ ಮೊಳಕಾಲ್ಮೂರಿನಲ್ಲಿ ಹಿಂದುಳಿದ ವರ್ಗದವರಿಗೆ ಸಾಮಾಜಿಕ ನ್ಯಾಯ ಹಾಗೂ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಬೇಕಿತ್ತು. ಎಸ್‌ಸಿ–ಎಸ್‌ಟಿ ಸಮುದಾಯಗಳಿಗೆ ನೀಡಿದ ರೀತಿಯಲ್ಲಿ ಹಿಂದುಳಿದ ವರ್ಗಕ್ಕೂ ನ್ಯಾಯಯುತ ಮೀಸಲಾತಿ ನೀಡಬೇಕಾಗಿತ್ತು ಎಂದು ಅವರು ಆಗ್ರಹಿಸಿದರು.

 

ಸರ್ಕಾರದ ಈ ಮೀಸಲಾತಿ ಹಂಚಿಕೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿ, ಹಿಂದುಳಿದ ವರ್ಗದವರ ಹಕ್ಕಿಗಾಗಿ ಸಮುದಾಯಗಳ ಮುಖಂಡರ ಜತೆ ಚರ್ಚಿಸಿ ಕಾನೂನು ಹೋರಾಟ ನಡೆಸುವುದಾಗಿ ಪ್ರಭಾಕರ ಮ್ಯಾಸನಾಯಕ ಸ್ಪಷ್ಟಪಡಿಸಿದ್ದಾರೆ. 

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯ ದಶಮಿಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ದಸರಾ ಹಾಗೂ ಆಯುಧ ಪೂಜೆಜಾತಿಭೇದವಿಲ್ಲದೆ ದಲಿತರ ಮನೆಯಲ್ಲಿ ಊಟ ಸವಿದ ಡಾ. ಬಿ. ಯೋಗೇಶ್ ಡಿಸ್ಕವರಿ ವಾಹಿನಿಯಲ್ಲಿ ಕೆಐಐಟಿ ಸಾಧನೆ ಬಣ್ಣನೆ ಕನ್ನಡಿಗರು ವಿಶಾಲತೆ, ಸಾಮರಸ್ಯ ಉಳ್ಳವರಾಗಿರುವುದರಿಂದಲೇ ಕನ್ನಡಕ್ಕೆ ಕಂಟಕ!ಹಾಡಿನ ಚಿತ್ರೀಕರಣದೊಂದಿಗೆ ‘ಚಂದ್ರಗಿರಿ’ ಚಿತ್ರೀಕರಣ ಮುಕ್ತಾಯಸರ್ವೋದಯ ಮಹಾವಿದ್ಯಾಲಯದ ಸೌಕರ್ಯ, ಶೈಕ್ಷಣಿಕ ಸಾಧನೆಗೆ ದಾವಣಗೆರೆ ವಿವಿ ಉಪಕುಲಪತಿ ಮೆಚ್ಚುಗೆಬಡತನ ನಿರ್ಮೂಲನೆಗಾಗಿ ಅಂತರರಾಷ್ಟ್ರೀಯ ದಿನಾಚರಣೆ ಬೆಂಗಳೂರಿನಲ್ಲಿ ಐಸಿಎಸ್ಐ ಇನ್ವೆಸ್ಟ್ ಇಂಡಿಯಾ ಶೃಂಗಸಭೆ ಆಯೋಜನೆಎಚ್.ಡಿ. ಕುಮಾರಸ್ವಾಮಿ ವಿವಾದಾತ್ಮಕ ಮಾತುಗಳಿಗೆ ಖಂಡನೆ, ಕ್ಷಮೆಯಾಚನೆಗೆ ಆಗ್ರಹ: ರಾಷ್ಟ್ರೀಯ ಅಂಬೇಡ್ಕರ್ ಸೇನೆಯ ಅರ್ಜುನ್ ಗೋಪಾಲಯ್ಯ