LIVE TV StateNationalPoliticsInternationalCrimeEntertainmentSportsEducationFINANCE & TAXATION
Districts Chitradurga

ಸ್ವಾತಂತ್ರ್ಯ ಕ್ಕಾಗಿ ಹೋರಾಡಿದ ಮಹನೀಯರ ಸ್ಮರಣೆ ಅಗತ್ಯ

ನಾಯಕನಹಟ್ಟಿ : ಸ್ವಾತಂತ್ರ್ಯ ಕ್ಕಾಗಿ ಹೋರಾಡಿದ ಮಹನೀಯರ ಸ್ಮರಣೆ ಅಗತ್ಯ ಎಂದು ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ಅನ್ವರ್ ಹೇಳಿದರು.

ಪಟ್ಟಣದ ಸರ್ಕಾರಿ ಉರ್ದು-ಇಂಗ್ಲೀಷ್ ಮಾದ್ಯಮ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಮೌಲಾನ ಆಜಾದ ಶಾಲೆಯವರು 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶನಿವಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ದೇಶಕ್ಕೆ ಸ್ವಾತಂತ್ರ ತಂದು ಕೊಡಲು ಹಲವಾರು ಜನರು ಹೋರಾಟ ಮಾಡಿ ತಮ್ಮ ಪ್ರಾಣ ತ್ಯಾಗಮಾಡಿ ದೇಶಕ್ಕೆ ಸ್ವಾತಂತ್ರöವನ್ನು ತಂದುಕೊಟ್ಟಿದ್ದಾರೆ. 1947ರ ಭಾರತ ದೇಶವು ಆಗಸ್ಟ್ 15ರಂದು ಸ್ವಾತಂತ್ರ್ಯವನ್ನು ಗಳಿಸಿತು. ಭಾರತದಲ್ಲಿ ಬ್ರಿಟೀಷರ ಆಳ್ವಿಕೆ ಭಾರತಕ್ಕೆ ಯೂರೋಪಿನ ವ್ಯಾಪಾರಿಗಳು ಬಂದ ನಂತರ ನಿಧಾನವಾಗಿ ಬ್ರಿಟೀಷರ ಪ್ರಭಾವ ಹೆಚ್ಚಾಯಿತು. ಈಸ್ಟ್ ಇಂಡಿಯಾ ಕಂಪನಿಯ ಮೂಲಕ ಬ್ರಿಟೀಷರು ಭಾರತದ ವಿವಿಧ ಪ್ರದೇಶಗಳಲ್ಲಿ ತಮ್ಮ ಅಧಿಕಾರವನ್ನು ವಿಸ್ತರಿಸಿಕೊಂಡರು ಎಂದರು. ಬ್ರಿಟೀಷರ ಗುಲಾಮತ್ವದಿಂದ ಇಡೀ ಭಾರತದ ಜನತೆಯನ್ನು ಮುಕ್ತಗೊಳಿಸಲು ದೇಶದ ಎಲ್ಲಾ ಜಾತಿ, ಧರ್ಮದ ಜನರು ತಮ್ಮ ತನು, ಮನ, ಧನವನ್ನು ಮತ್ತು ಪ್ರಾಣವನ್ನೂ ಸಹ ಮುಡಿಪಾಗಿಟ್ಟು ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟರು ಅಂತಹ ಮಹನೀಯರನ್ನು ನಾವು ಈ ದಿನ ನೆನಪಿಸುತ್ತಾ ದೇಶದ ಸೇವೆಗಾಗಿ ಒಗ್ಗಟ್ಟಾಗಿ ದುಡಿಯಬೇಕು ಎಂದು ಹೇಳಿದರು.

 

ಈ ಸಂದರ್ಭದಲ್ಲಿ ಉಪಸ್ಥಿತರಾದ ಉರ್ದು ಶಾಲಾ ಶಿಕ್ಷಕ, ಶಿಕ್ಷಕಿಯರು , ಎಸ್.ಡಿ.ಎಂ.ಸಿ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ಪೋಷಕರು ಮೌಲಾನಾ ಆಜಾದ್ ಶಾಲೆಯ ಶಿಕ್ಷಕವೃಂದದವರು ಹಾಗೂ ವಿದ್ಯಾರ್ಥಿಗಳು ಇದ್ದರು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗೇಂದ್ರಗೆ ಮತ್ತೊಂದು ಮಹತ್ವದ ಹೊಣೆ: ಕಲ್ಯಾಣ ಕರ್ನಾಟಕ ಸಚಿವಾಲಯದ ಜವಾಬ್ದಾರಿಸಂಸ್ಕೃತ ವಿಶ್ವವ್ಯಾಪಿ ಜ್ಞಾನಭಾಷೆ, ಸಂಶೋಧನೆಗೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಲಿಕಲ್ಲೂರು- ಶಿಶು ಪಾಲನಾ ಕೇಂದ್ರದಲ್ಲಿ ತಾಯಂದಿರಿಗೆ ಜಾಗೃತಿ. ಹೊನ್ನಳ್ಳಿ ತಾಂಡಾದಲ್ಲಿ ಶ್ರೀಗುರು ಅಜ್ಜಯ್ಯನ ದ್ವಿತೀಯ ದಶಮಾನೋತ್ಸವ ವಿಶೇಷ ಪೂಜಾ ಕಾರ್ಯಕ್ರಮಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆಬಳ್ಳಾರಿಯಲ್ಲಿ ದಿವಂಗತ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆಬಳ್ಳಾರಿಯಲ್ಲಿ ರಾಜ್ಯ ಮಟ್ಟದ ಪರಿಷತ್ ಸಭೆ ಹಾಗೂ ನಶಾಮುಕ್ತ ಭಾರತ ಅಭಿಯಾನಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡಿ: ಸಿಎಂ ಡಿ ಕೆ ಶಿವಕುಮಾರ್ ಒತ್ತಾಯಯಾರಿಗೆ ಒಲೆಯುತ್ತೆ ಬಿಜೆಪಿ ಟಿಕೆಟ್ ರಾಜೀವ್ ಗಾಂಧಿ ಹಾದಿಯಲ್ಲಿ ರಾಹುಲ್ ಗಾಂಧಿ