ಬೆಂಗಳೂರು: ಇದು ನಿಮ್ಮ ವಾಹಿನಿ ಕಲಾ ವೇದಿಕೆ (ರಿ.) ಹಾಗೂ ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಸಹಯೋಗದಲ್ಲಿ ಡಾಕ್ಟರ್ಸ್ ಡೇ, ಪತ್ರಿಕೋದ್ಯಮ ದಿನ ಹಾಗೂ ಕಾರ್ಗಿಲ್ ವಿಜಯ್ ದಿವಸ್ ಆಯೋಜಿಸುತ್ತಿದ್ದು, ಈ ಸಂದರ್ಭದಲ್ಲಿ 27ಕ್ಕೂ ಹೆಚ್ಚು 27ಕ್ಕೂ ಸಾಧಕರನ್ನು ಗೌರವಿಸಲಾಗುತ್ತಿದೆ.
ಸುದ್ದಿಗೋಷ್ಠಿಯಲ್ಲಿ ನಿಮ್ಮ ವಾಹಿನಿ ಕಲಾ ವೇದಿಕೆ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಕೆ.ಎಸ್, ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿದರು.
ಜು. 26 ರಂದು ನಗರದ ನಯನ ಸಭಾಂಗಣದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವೈದ್ಯರು, ಪತ್ರಕರ್ತರು ಹಾಗೂ ಕಾರ್ಗಿಲ್ ಯುದ್ಧದ ವೀರ ಯೋಧರ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಗಣ್ಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಲಾವೇದಿಕೆಯ ಚಂದ್ರಿಕಾ ಬಿ.ವಿ., ಎಚ್.ಎ. ನಾಗರತ್ನಮ್ಮ, ಕೆ. ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.