LIVE TV StateNationalPoliticsCrimeEntertainmentSportsEducationFINANCE & TAXATION
Districts Bellary

ಅಭಿವೃದ್ಧಿಯ ಸಂಕಲ್ಪದೊಂದಿಗೆ ಕಲ್ಯಾಣ ಕರ್ನಾಟಕ ಉತ್ಸವ

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ವತಿಯಿಂದ ಆಚರಣೆ

ಬಳ್ಳಾರಿ:  ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ವತಿಯಿಂದ ‘ಕಲ್ಯಾಣ ಕರ್ನಾಟಕ ಉತ್ಸವ’ವನ್ನು ಸಂಸ್ಥೆಯ ಆವರಣದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.

 

ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಬಳಿಕ ಸಂಸ್ಥೆಯ ಅಧ್ಯಕ್ಷ ಅವ್ವಾರು ಮಂಜುನಾಥ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

 

ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಅವ್ವಾರು ಮಂಜುನಾಥ್ ಅವರು, ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಲ್ಲಿ ಬಳ್ಳಾರಿ ಜಿಲ್ಲೆಯು ತನ್ನದೇ ಆದ ಪ್ರಮುಖ ಸ್ಥಾನವನ್ನು ಹೊಂದಿದ್ದು, ಕೈಗಾರಿಕೆ, ವಾಣಿಜ್ಯ, ಕೃಷಿ ಹಾಗೂ ಉದ್ಯಮಶೀಲತೆಯ ಕ್ಷೇತ್ರಗಳಲ್ಲಿ ಮತ್ತಷ್ಟು ಪ್ರಗತಿ ಸಾಧಿಸುವ ಮೂಲಕ ಈ ಭಾಗದ ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡಬೇಕಾಗಿದೆ ಎಂದು ಅವರು ಹೇಳಿದರು

 

ಕಾರ್ಯಕ್ರಮದಲ್ಲಿ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಎಸ್. ದೊಡ್ಡನಗೌಡ, ಉಪಾಧ್ಯಕ್ಷರಾದ ಸೊಂತ ಗಿರಿಧರ ಹಾಗೂ ಪಿ. ಪಾಲಣ್ಣ, ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ, ಮಾಜಿ ಅಧ್ಯಕ್ಷರಾದ, ಬಿ.ಮಹಾರುದ್ರಗೌಡ ವಿ.ರವಿಕುಮಾರ, ನೇಕಾರನಾಗರಾಜ್, ಚೇರ್ಮನ್, ಇವೆಂಟ್ಸ್ ಕಮಿಟಿಮ ಟಿ.ಶ್ರೀನಿವಾಸ್ ರಾವ್, ಪತ್ರಿಕಾ ಹಾಗೂ ಮಾಧ್ಯಮಮ ಚೇರ್ಮನ್, ಪಿ.ವೇಣುಗೋಪಾಲಗುಪ್ತಾ, ಚೇರ್ಮನ್ ಐ.ಟಿ, ಕಮಿಟಿ, ವಿವಿಧ ಉಪಸಮಿತಿಗಳ ಚೇರ್ಮನ್‌ಗಳು, ಕಾರ್ಯಕಾರಿ ಸಮಿತಿ ಸದಸ್ಯರು, ವಿಶೇಷ ಆಹ್ವಾನಿತರು ಹಾಗೂ ವಿಶೇಷ ಸಮನ್ವಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆಆರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ತಡೆಗಟ್ಟಬಹುದು-ಡಾ. ನಿಗ್ಗುಡಗಿವಿಜಯರಾಘವೆಂದ್ರ ಅಭಿನಯದ “ರುದ್ರಾಭಿಷೇಕಂ’ ಚಿತ್ರದ ಟ್ರೈಲರ್ ಬಿಡುಗಡೆ ಪಠ್ಯದ ಜೊತೆಗೆ ಮೌಲ್ಯವರ್ಧಿತ ಕೋರ್ಸಗಳ ಆಯ್ಕೆ ಬಹುಮುಖ್ಯ-ಯಡ್ರಾಮಿ