LIVE TV StateNationalPoliticsCrimeEntertainmentSportsEducationFINANCE & TAXATION
Entertainment News

ಆಸ್ಟ್ರೇಲಿಯಾದ ಮೆಲ್ಬೋರ್ನ್ ಚಲನಚಿತ್ರೋತ್ಸವಕ್ಕೆ ಕನ್ನಡದ “ಪುಟ್ಟಣ್ಣನ ಕತ್ತೆ!”

ಬೆಂಗಳೂರು : ಅತ್ಯಂತ ಸೂಕ್ಷ್ಮ ಕಥಾನಕಗಳ ಮೂಲಕವೇ  ನಿರ್ದೇಶಕರಾಗಿ ನೆಲೆ ಕಂಡುಕೊಂಡಿರುವ “ಸಿದ್ದು ಪೂರ್ಣಚಂದ್ರ” ಇದೀಗ  `ಪುಟ್ಟಣ್ಣನ ಕತ್ತೆ' ಎಂಬ ಚಿತ್ರದ ಮೂಲಕ ಮತ್ತೆ ಪ್ರೇಕ್ಷಕರನ್ನು  ಮುಖಾಮುಖಿಯಾಗುವ ಸನ್ನಾಹದಲ್ಲಿದ್ದಾರೆ. ಈ ಚಿತ್ರವೀಗ ಪ್ರತಿಷ್ಠಿತ  ಮೆಲ್ಬೋರ್ನ್ ಫಿಲಂ ಫೆಸ್ಟಿವಲ್‌ಗೆ ಆಯ್ಕೆಯಾಗಿದೆ.

ಆಸ್ಟ್ರೇಲಿಯಾದ  ಮೆಲ್ಬೋರ್ನ್ ದಲ್ಲಿ ನಡೆಯಲಿರುವ ಈ ಸಿನಿಮೋತ್ಸವದಲ್ಲಿ ವಿಶಿಷ್ಟ ಕಥೆ  ಹೊಂದಿರೋ ‘ಪುಟ್ಟಣ್ಣನ ಕತ್ತೆ’ ಚಿತ್ರ ಪ್ರದರ್ಶನಗೊಳ್ಳಲಿದೆ. ಮೆಲ್ಬೋರ್ನ್ ಫಿಲಂ ಫೆಸ್ಟಿವಲ್‌ಗೆ ಜಾಗತಿಕ ಮಟ್ಟದಲ್ಲಿ ಘನತೆ ಗೌರವಗಳಿವೆ.  ಆ ಸಿನಿಮೋತ್ಸವದಲ್ಲಿ ಸಿನಿಮಾವೊಂದು ಆಯ್ಕೆಯಾಗೋದೇ ಪ್ರಶಸ್ತಿಗೆ ಸಮ  ಎಂಬಂಥಾ ವಾತಾವರಣವೂ ಇದೆ. ಯಾಕೆಂದರೆ, ಜಾಗತಿಕ ಮಟ್ಟದ ತುರುಸಿನ ಸ್ಪರ್ಧೆ ದಾಟಿಕೊಂಡು ಆಯ್ಕೆಯಾಗೋದು ಗುಣಮಟ್ಟದ ಕಂಟೆಂಟ್ ಹೊಂದಿದ್ದರೆ ಮಾತ್ರವೇ ಸಾಧ್ಯವಾಗುವ ಸಂಗತಿ. ಈ ನಿಟ್ಟಿನಲ್ಲಿ ಕನ್ನಡ ಸಿನಿಮಾ ‘ಪುಟ್ಟಣ್ಣನ ಕತ್ತೆ’ ಈ ಸಿನಿಮೋತ್ಸವಕ್ಕೆ ಆಯ್ಕೆಯಾಗಿರುವುದು ಕನ್ನಡ ಚಿತ್ರರಂಗಕ್ಕೂ ಹೆಮ್ಮೆ ತರುವ ವಿಚಾರ.

news_1789617571_1_361.webp

 

ಕನ್ನಡದ ಮಟ್ಟಿಗೆ ಕತ್ತೆಯೊಂದನ್ನು ಕೇಂದ್ರವಾಗಿಟ್ಟುಕೊಂಡು  ರೂಪುಗೊಂಡ ಮೊದಲ ಚಿತ್ರವೆಂಬ ಹೆಗ್ಗಳಿಕೆಗೂ ಪುಟ್ಟಣ್ಣನ ಕತ್ತೆ ಚಿತ್ರ  ಪಾತ್ರವಾಗುತ್ತದೆ. ಬೆಂಗಳೂರಿನಂಥಾ ನಗರಗಳಲ್ಲಿ ಕತ್ತೆ ಹಾಲು  ಮಾರುವವರು ಆಗಾಗ ಕಾಣಿಸಿಕೊಳ್ಳುತ್ತಾರೆ. ಅದ್ಯಾವುದೋ ಹಳ್ಳಿಯೊಂದರಿಂದ ಹಾಗೆ ಕತ್ತೆಯೊಂದಿಗೆ ಪಟ್ಟಣ ಸೇರಿಕೊಂಡವನ ಸುತ್ತ ಘಟಿಸುವ ಆಸಕ್ತಿದಾಯಕ ಕಥೆ ಈ ಸಿನಿಮಾದ ಆಂತರ್ಯದಲ್ಲಿದೆ. ಭೀಮೇಶ್ ಗೌಡ ಈ ಕಥನದ ಆತ್ಮದಂಥಾ ಪುಟ್ಟಣ್ಣನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅನೀಶ್ ಆರ್ಯನ್ ಈ ಸಿನಿಮಾದ ನಾಯಕನಾಗಿ, ಸಂಕೀರ್ಣವಾದೊಂದು ಪಾತ್ರದಲ್ಲಿ ನಟಿಸಿದ್ದಾರೆ. ಪೂರ್ಣಚಂದ್ರ ಫಿಲಂಸ್ ಬ್ಯಾನರಿನಡಿಯಲ್ಲಿ ತನ್ಮಯ್ ಎಸ್ ಗೌಡ ನಿರ್ಮಾಣ ಮಾಡಿರುವ, ಸಿದ್ದು ಪೂರ್ಣಚಂದ್ರ ಕಥೆ ಚಿತ್ರಕಥೆ, ಸಂಭಾಷಣೆಯೊಂದಿಗೆ ನಿರ್ದೇಶನ ಮಾಡಿದ್ದಾರೆ. ತಾರಾಗಣ್ರದಲ್ಲಿ ಅನೀಶ್ ಆರ್ಯನ್, ಭೀಮೇಶ್ ಗೌಡ, ಎನ್.ಟಿ ರಾಮಸ್ವಾಮಿ, ಕವಿತಾ ಕಂಬಾರ್, ವಿಭಾ, ಕಲಾರತಿ ಮಹದೇವ್, ರೋಹಿಣಿ, ರಶ್ಮಿ ಮೈಸೂರ್, ಲಕ್ಕಿ ಶಂಕರ್, ವಾಸು, ರಾಕಿ, ಮಂಡ್ಯ ಸಿದ್ದು ಮೊದಲಾದವರಿದ್ದಾರೆ.

news_1789617571_2_220.webp

 

ರಾಜು ಹೆಮ್ಮಿಗೆಪುರ ಛಾಯಾಗ್ರಹಣ, ಅನಂತ್ ಆರ್ಯನ್ ಸಂಗೀತ ನಿರ್ದೇಶನ, ದೀಪು ಸಿ.ಎಸ್ ಸಂಕಲನ, ಸುಧೀಂದ್ರ ವೆಂಕಟೇಶ, ಡಾ.ಪ್ರಭು ಗಂಜಿಹಾಳ, ಡಾ.ವೀರೇಶ ಹಂಡಿಗಿ ಪಿಆರ್ ಓ ಆಗಿದ್ದಾರೆ.ಈಗಾಗಲೇ ರಿಯಾವುದಯ್ಯ ವೈಕುಂಟಕ್ಕೆ, ಬ್ರಹ್ಮಕಮಲ, ಈ ಪಾದ ಪುಣ್ಯ ಪಾದ ವಿಶಿಷ್ಟ ಕಥಾ ಚಿತ್ರಗಳನ್ನು ನೀಡಿದ ಸಿದ್ದು ಪೂರ್ಣಚಂದ್ರ ಅವರಿಗೆ ಪತ್ರಿಕೆಯ ಮೂಲಕ ಶುಭ ಹಾರೈಸೋಣ

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆಆರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ತಡೆಗಟ್ಟಬಹುದು-ಡಾ. ನಿಗ್ಗುಡಗಿವಿಜಯರಾಘವೆಂದ್ರ ಅಭಿನಯದ “ರುದ್ರಾಭಿಷೇಕಂ’ ಚಿತ್ರದ ಟ್ರೈಲರ್ ಬಿಡುಗಡೆ ಪಠ್ಯದ ಜೊತೆಗೆ ಮೌಲ್ಯವರ್ಧಿತ ಕೋರ್ಸಗಳ ಆಯ್ಕೆ ಬಹುಮುಖ್ಯ-ಯಡ್ರಾಮಿ