LIVE TV StateNationalPoliticsCrimeEntertainmentSportsEducationFINANCE & TAXATION
Districts Bangalore | State News

ಕೆಇಎ: 218 ಕಿರಿಯ ಎಂಜಿನಿಯರ್ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ನಗರ ಯೋಜನಾ ಆಯುಕ್ತಾಲಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು‌ 218 ಕಿರಿಯ ಎಂಜಿನಿಯರ್ ಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ.

 

ಉಳಿಕೆ ಮೂಲ ವೃಂದಕ್ಕೆ ಸೇರಿದ 187 ಹಾಗೂ ಕಲ್ಯಾಣ ಕರ್ನಾಟಕ ವೃಂದಕ್ಕೆ ಸೇರಿದ 31 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ನ.26 ಹಾಗೂ ಶುಲ್ಕ ಪಾವತಿಗೆ ನ. 27 ಕೊನೆ ದಿನ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

 

ಡಿಪ್ಲೊಮಾ ಅಥವಾ ತತ್ಸಮಾನ ವಿದ್ಯಾರ್ಹತೆ ಇರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಜನವರಿ ತಿಂಗಳಲ್ಲಿ ಲಿಖಿತ ಪರೀಕ್ಷೆ ಇರಲಿದೆ. ಆದರೆ ಕನ್ನಡ ಭಾಷಾ ಪರೀಕ್ಷೆ ಮಾತ್ರ ಜನವರಿ 8ರಂದು ನಡೆಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.

 

ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದಲ್ಲಿ ಖಾಲಿ ಇದ್ದ  ಸಹಾಯಕ ನಗರ ಯೋಜಕರ ಹುದ್ದೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಕೆಎಚ್ ಬಿ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ, ಅಂತರ್ಜಲ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಖನಿಜ‌ ನಿಗಮ, ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ನಿಗಮ ದಲ್ಲಿನ ಕಿರಿಯ‌ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವರಗಳಿಗೆ ವೆಬ್ ಸೈಟ್ ನೋಡಿ ಎಂದು ಅವರು ಸಲಹೆ ನೀಡಿದ್ದಾರೆ.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೀಪಗಳ ಹಬ್ಬದ ಮಹತ್ವ, ಆಚರಣೆಯ ವಿಧಿ ವಿಧಾನ ಇಲ್ಲಿದೆಕೋಡಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಇಟಲಿಯ ಹೈಡ್ರೋನಿಕ್' ಸಂಸ್ಥೆ ಹಾಗೂ 'ಲಿಫ್ಟ್ ಎಕ್ಸ್ಪೋಗೆ' ಡಾ. ಬಿ.ಎಂ. ಉಮೇಶ್ ಕುಮಾರ್ ಭೇಟಿಮಕ್ಕಳನ್ನು ಮೊಬೈಲ್ನಿಂದ ದೂರವಿಟ್ಟು ಕ್ರೀಡೆಗಳಲ್ಲಿ ತೊಡಗಿಸಿ: ಬಸವರಾಜ್ ಶೀಲವಂತರ್ ಕರೆನಕಲಿ ಮತದಾರರಿಗೆ ರಕ್ಷಣೆ ನೀಡುವುದೇ ಎಸ್ಐಆರ್ ವಿರೋಧಿಗಳ ಅಜೆಂಡಾ ಅಲ್ಲವೇ?” – ಪ್ರಭಾಕರ್ ರಾಗಿ ಅಂಗಡಿಗೆ ಬಂದವರನ್ನು ಪ್ರೀತಿಯಿಂದ ಮಾತನಾಡಿಸುತ್ತಾರೆಹಳ್ಳಿ-ಹಳ್ಳಿಗೆ ತೆರಳಿ ಕಾಂಗ್ರೆಸ್ ಭದ್ರಕೋಟೆ ನಿರ್ಮಿಸುತ್ತಿರುವ ಡಾ. ಯೋಗೇಶ್ ಬಾಬುವಾಲ್ಮೀಕಿನಾಯಕ ಸಮಾಜದವರು ಖಡ್ಗದ ಬದಲಾಗಿ ಶಿಕ್ಷಣದ ಅಸ್ತ್ರಹಿಡಿಯಿರಿಚಲನಚಿತ್ರ ನಟ, ನಿರ್ದೇಶಕ ಚಂದ್ರಹಾಸ ಆಳ್ವರಿಗೆ ಸನ್ಮಾನಶ್ರೀ ಕೃಷ್ಣ ರುಕ್ಮಿಣಿ ಸ್ಕೂಲ್ ಆಫ್ ಲಾದಲ್ಲಿ ಫ್ರೆಷರ್ಸ್ ಡೇ ಹಾಗೂ ಕನ್ನಡ ರಾಜ್ಯೋತ್ಸವ