LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ

ಬೆಂಗಳೂರು : ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು  ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.

 

  ಇಂದು  ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ರುವ ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿ ಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು.



ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ,  ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18 ರ ಅವಧಿಯಲ್ಲಿ ನಮ್ಮ  ಸರ್ಕಾರ ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಚರ್ಚೆ ಮಾಡಿ ಜನ್ಮದಿನಾಂಕವನ್ನು ತಿಳಿದು, ಅಂದಿನಿಂದ ನಿರಂತರವಾಗಿ ಸರ್ಕಾರ ಕೆಂಪೇಗೌಡ  ಜಯಂತಿಯನ್ನು ಆಚರಣೆ ಮಾಡುತ್ತಿದೆ.  ಬೆಂಗಳೂರು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು ಎಂದರು

ಅವರನ್ನು ಸ್ಮರಿಸುವ ಕೆಲಸವನ್ನು  ಸರ್ಕಾರ ಮಾಡಿದೆ. ಬೆಂಗಳೂರಿನ ನಾಲ್ಕು ಭಾಗದಲ್ಲಿ ಗೋಪುರಗಳನ್ನು ಕಟ್ಟಿಸಿದ ಕೆಂಪೇಗೌಡರು  ಅಂದೇ ಬೆಂಗಳೂರಿನ ಆಡಳಿತ ಹೇಗಿರಬೇಕೆಂದು ಅರಿತು ವೃತ್ತಿ ಆಧಾರಿತವಾಗಿ  ನಗರತ್ ಪೇಟೆ, ಚಿಕ್ಕಪೇಟೆ, ಬಳೆಪೇಟೆ ಸೇರಿದಂತೆ ಅನೇಕ ಪೇಟೆಗಳನ್ನು ತಮ್ಮ ಆಡಳಿತಾವಧಿಯಲ್ಲಿ ನಿರ್ಮಿಸಿದ್ದರು. ಅವರ ಆಡಳಿತ ನಮಗೆಲ್ಲರಿಗೂ ಮಾದರಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.



ಸರ್ಕಾರ ಬೆಂಗಳೂರು ಅಭಿವೃದ್ಧಿ ಗೊಳಿಸುವ  ಕನಸನ್ನು ನನಸು ಮಾಡಲಿದೆ

ಬೆಂಗಳೂರು ಅಭಿವೃದ್ಧಿ ಮಾಡುವ ಕನಸನ್ನು ನನಸು ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಸುಮನಹಳ್ಳಿಯ ಜಗಜೀವನ್ ರಾಮ್ ನಗರದಲ್ಲಿ  ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ.

 ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು  ವಿಮಾನನಿಲ್ದಾಣದ ಬಳಿ ಇರುವ  ಕೆಂಪೇಗೌಡರ ಪ್ರತಿಮೆಗೆ  ಮಾಲಾರ್ಪಣೆ ಮಾಡಿದ್ದಾರೆ ಎಂದು ತಿಳಿಸಿದರು.

ಹುಲಿಗಳ ಸಾವು: ತನಿಖಾ ವರದಿಯ ನಂತರ ಕ್ರಮ

ಚಾಮರಾಜನಗರದಲ್ಲಿ ಐದು ಹುಲಿಗಳು ಸಾವಿಗೀಡಾಗಿದ್ದು ಈ ಬಗ್ಗೆ ತನಿಖೆ ಕೈಗೊಳ್ಳಲು ಆದೇಶಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

 
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ