LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಕಕರಸಾ ನಿಗಮ ಬಳ್ಳಾರಿ ವಿಭಾಗ : ಕಾರ್ಯಾಚರಣೆ ವಿಸ್ತರಣೆ

ಬಳ್ಳಾರಿ: ಆಂಧ್ರಪ್ರದೇಶದ ಆದೋನಿ ಹಾಗೂ ಆದೋನಿ ಮೂಲಕ ಸಂಚರಿಸುವ ಕರಾರಸಾ ನಿಗಮದ ಸಾರಿಗೆಗಳ ಕಾರ್ಯಾಚರಣೆಯನ್ನು ಆ.31 ರಿಂದ ಆದೋನಿ ಎ.ಪಿ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ವಿಸ್ತರಣೆ ಮಾಡಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

 

ಕಕರಸಾ ನಿಗಮ, ಕರಾರಸಾ ನಿಗಮ ಮತ್ತು ವಾಕರಸಾ ಸಂಸ್ಥೆಯಿಂದ ಕಾರ್ಯಾಚರಣೆಯಾಗುವ ಮಂತ್ರಾಲಯ, ರಾಯಚೂರು, ಎಮ್ಮಿಗನೂರು, ಶ್ರೀಶೈಲಂ ವಯಾ ಆದೋನಿ ಹಾಗೂ ಆದೋನಿ ಸಾರಿಗೆಗಳ ಕಾರ್ಯಾಚರಣೆಯನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಆದೋನಿ ಪಟ್ಟಣದ ಎ.ಪಿ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ವಿಸ್ತರಣೆ ಮಾಡಲಾಗಿದೆ.



ಹಾಗೆಯೇ ಆದೋನಿ ಪಟ್ಟಣದಲ್ಲಿ ಪ್ರಯಾಣಿಕರು ಇಳಿಯಲು, ಹತ್ತಲು ಪ್ರಸ್ತುತ ನೀಡುತ್ತಿರುವ ನಿಲುಗಡೆಗಳೊಂದಿಗೆ ಹೆಚ್ಚುವರಿಯಾಗಿ ಆದೋನಿ ಪಟ್ಟಣದ ನಿರ್ಮಲ್ ಟಾಕೀಸ್ ಹತ್ತಿರ, ಸರ್ಕಾರಿ ಜನರಲ್ ಆಸ್ಪತ್ರೆ ಹತ್ತಿರ ಹತ್ತಲು, ಇಳಿಯಲು ಪ್ರಯಾಣಿಕರ ಅನುಕೂಲಕ್ಕಾಗಿ ನಿಲುಗಡೆಗಳನ್ನು ಕಲ್ಪಿಸಲಾಗಿದೆ. ಸಾರ್ವಜನಿಕ ಪ್ರಯಾಣಿಕರು ಈ ಸಾರಿಗೆ ಸೇವೆಯನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ