LIVE TV StateNationalPoliticsCrimeEntertainmentSportsEducationFINANCE & TAXATION
Districts Bellary

ಉನ್ನತ ಮಟ್ಟದ ತನಿಖೆಗೆ KRS ಆಗ್ರಹ

ಸಿರುಗುಪ್ಪ ಉಪನೋಂದಣಿ ಕಚೇರಿಯ ಅವ್ಯವಸ್ಥೆ ಹಾಗೂ ಕೆ.ಎಸ್. ಖಾದರ್ ಮೇಲಿನ ಹಲ್ಲೆ ಪ್ರಕರಣ

ಸಿರುಗುಪ್ಪ: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಉಪನೋಂದಣಿ ಕಚೇರಿಯಲ್ಲಿನ ಅವ್ಯವಸ್ಥೆ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ರಾಜ್ಯ ಯುವ ಘಟಕದ ಕಾರ್ಯದರ್ಶಿ ಕೆ.ಎಸ್. ಖಾದರ್ ಅವರ ಮೇಲಿನ ಹಲ್ಲೆ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ KRS ಪಕ್ಷದ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

 

ನಗರದ ಹೈಸ್ಕೂಲ್ ಮೈದಾನದಿಂದ ಆರಂಭವಾದ ಬೃಹತ್ ಪಾದಯಾತ್ರೆ ತಹಶೀಲ್ದಾರ್ ಕಚೇರಿಗೆ ತಲುಪಿತು. ಅಲ್ಲಿ ಪ್ರತಿಭಟನೆ ನಡೆಸಿದ ಪಕ್ಷದ ಮುಖಂಡರು,ಸಿರುಗುಪ್ಪ ತಾಲೂಕು ದಂಡಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.

 news_1791732033_0_889.webp

 

ಉಪನೋಂದಣಿ ಕಚೇರಿಯ ಕಾರ್ಯವೈಖರಿ ಕುರಿತು ವ್ಯಕ್ತವಾಗಿರುವ ದೂರುಗಳನ್ನು ಪರಿಶೀಲಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕು. ಕೆ.ಎಸ್. ಖಾದರ್ ಅವರ ಮೇಲಿನ ಹಲ್ಲೆ ಪ್ರಕರಣದ ಸತ್ಯಾಂಶವನ್ನು ನಿಷ್ಪಕ್ಷಪಾತ ತನಿಖೆಯ ಮೂಲಕ ಬಹಿರಂಗಪಡಿಸಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನುಬದ್ಧ ಕ್ರಮ ಕೈಗೊಂಡು, ಸಾರ್ವಜನಿಕರು ಹಾಗೂ ರೈತರು ಸರ್ಕಾರಿ ಕಚೇರಿಗಳಲ್ಲಿ ವಿಳಂಬ, ಕಿರುಕುಳವಿಲ್ಲದೆ ಪಾರದರ್ಶಕ ಸೇವೆ ಪಡೆಯುವಂತೆ ಕ್ರಮ ವಹಿಸಬೇಕು ಎಂದು KRS ಮುಖಂಡರು ಒತ್ತಾಯಿಸಿದರು. ಜೊತೆಗೆ ದೂರುದಾರರ ರಕ್ಷಣೆ ಹಾಗೂ ಸಾರ್ವಜನಿಕರ ಹಕ್ಕುಗಳ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಆಗ್ರಹಿಸಲಾಯಿತು.

 

ಪ್ರತಿಭಟನೆಯಲ್ಲಿ  ಪಕ್ಷದ ರಾಜ್ಯ ಎಸ್ಸಿ-ಎಸ್ಟಿ ಘಟಕದ ಅಧ್ಯಕ್ಷ ಪಾ.ಯ. ಗಣೇಶ್, ರಾಜ್ಯ ಯುವ ಘಟಕದ ಕಾರ್ಯದರ್ಶಿ ಕೆ.ಎಸ್. ಖಾದರ್, ದ್ಯಾವಣ್ಣ, ರೈತ ಘಟಕದ ರಾಜ್ಯ ಕಾರ್ಯದರ್ಶಿ ಕನಕಪ್ಪ ಉಡೆಜಾಲಿ, ಬಳ್ಳಾರಿ ಜಿಲ್ಲಾ ಕಾರ್ಯದರ್ಶಿ ಗೋನಾಳ ರವಿ, ತಾಲೂಕು ಅಧ್ಯಕ್ಷ ಎರಿಸ್ವಾಮಿ, ಉಪಾಧ್ಯಕ್ಷ ಮಹಭಾಷಾ, ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಉಪಾಧ್ಯಕ್ಷ ಇಮಾಮ್ ಹುಸೇನ್, ಯುವ ಘಟಕದ ಪ್ರಧಾನ ಕಾರ್ಯದರ್ಶಿ ರಾಮಚಂದ್ರ, ಕೊಪ್ಪಳ ಜಿಲ್ಲಾಧ್ಯಕ್ಷ ಗಣೇಶ ಅಮೃತ್, ನಿರುಪಾದಿ ಕೆ. ಗೋಮರ್ಸಿ ಸೇರಿದಂತೆ ವಿವಿಧ ಜಿಲ್ಲಾ ಸಮಿತಿಗಳ ಪದಾಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಅಭಿಮಾನಿಗಳು ಸೇರಿ ನೂರಾರು ಮಂದಿ ಭಾಗವಹಿಸಿದ್ದರು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯ ದಶಮಿಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ದಸರಾ ಹಾಗೂ ಆಯುಧ ಪೂಜೆಜಾತಿಭೇದವಿಲ್ಲದೆ ದಲಿತರ ಮನೆಯಲ್ಲಿ ಊಟ ಸವಿದ ಡಾ. ಬಿ. ಯೋಗೇಶ್ ಡಿಸ್ಕವರಿ ವಾಹಿನಿಯಲ್ಲಿ ಕೆಐಐಟಿ ಸಾಧನೆ ಬಣ್ಣನೆ ಕನ್ನಡಿಗರು ವಿಶಾಲತೆ, ಸಾಮರಸ್ಯ ಉಳ್ಳವರಾಗಿರುವುದರಿಂದಲೇ ಕನ್ನಡಕ್ಕೆ ಕಂಟಕ!ಹಾಡಿನ ಚಿತ್ರೀಕರಣದೊಂದಿಗೆ ‘ಚಂದ್ರಗಿರಿ’ ಚಿತ್ರೀಕರಣ ಮುಕ್ತಾಯಸರ್ವೋದಯ ಮಹಾವಿದ್ಯಾಲಯದ ಸೌಕರ್ಯ, ಶೈಕ್ಷಣಿಕ ಸಾಧನೆಗೆ ದಾವಣಗೆರೆ ವಿವಿ ಉಪಕುಲಪತಿ ಮೆಚ್ಚುಗೆಬಡತನ ನಿರ್ಮೂಲನೆಗಾಗಿ ಅಂತರರಾಷ್ಟ್ರೀಯ ದಿನಾಚರಣೆ ಬೆಂಗಳೂರಿನಲ್ಲಿ ಐಸಿಎಸ್ಐ ಇನ್ವೆಸ್ಟ್ ಇಂಡಿಯಾ ಶೃಂಗಸಭೆ ಆಯೋಜನೆಎಚ್.ಡಿ. ಕುಮಾರಸ್ವಾಮಿ ವಿವಾದಾತ್ಮಕ ಮಾತುಗಳಿಗೆ ಖಂಡನೆ, ಕ್ಷಮೆಯಾಚನೆಗೆ ಆಗ್ರಹ: ರಾಷ್ಟ್ರೀಯ ಅಂಬೇಡ್ಕರ್ ಸೇನೆಯ ಅರ್ಜುನ್ ಗೋಪಾಲಯ್ಯ