LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗಟ್ಟಿದೆ : ಪ್ರಭಾಕರ

ಚಿತ್ರದುರ್ಗ : ಬೆಂಗಳೂರಿನ ಪ್ರಜಾಸತ್ತಾತ್ಮಕ ಸರ್ಕಾರದ ಕೇಂದ್ರ ಸ್ಥಾನವಾದ ವಿಧಾನಸೌಧದ ಎದಿರೇ ಎರಡು ಗುಂಪುಗಳು ಹೊಡೆದಾಡಿದ ಮರುದಿನವೇ ಬೆಂಗಳೂರಿನಂತ ಜನ ನಿಬಿಡ ಪ್ರದೇಶದಲ್ಲಿ  ಹಾಡು ಹಗಲೇ ಎಟಿಎಂಗೆ ಸಾಗಿಸುವ ಟ್ರಕ್  ಹೈಜಾಕ್ ಮಾಡಿ ಸುಮಾರು ಏಳು ಕೋಟಿಗೂ ಅಧಿಕ ಹಣದೋಚುತ್ತಾರೆ ಎಂದರೆ ಏನರ್ಥ. ಇವೆಲ್ಲವನ್ನೂ ನೋಡುತ್ತಿದ್ದರೆ ರಾಜ್ಯದಲ್ಲಿ ಸರ್ಕಾರ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದಾಗಿ ಬಿಜೆಪಿ ಮುಖಂಡ ಪ್ರಭಾಕರ ಗಂಭೀರವಾಗಿ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರವು ಕೇವಲ ಅಧಿಕಾರ ಹಂಚಿಕೆಯಲ್ಲಿ ಕಾಲಹರಣ ಮಾಡುತ್ತಿದೆ ಬಿಟ್ಟರೆ ರಾಜ್ಯದ ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಯ ಕಡೆಗೆ ಗಮನ ಹರಿಸಿಲ್ಲದಿರುವುದು ಕಂಡು ಬರುತ್ತಿದೆ ಎಂದು ಪ್ರಭಾಕರ ಹೇಳಿದ್ದಾರೆ.

 

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಶೂನ್ಯವಾಗಿದೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಸರ್ಕಾರ ನಿಸ್ತೇಜವಾಗಿದೆ ಎಂದರು. ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ  ಮೂಲಭೂತ ಸೌಕರ್ಯಗಳು ಇಲ್ಲದೆ ಜನ ಪರದಾಡುವಂಥಾಗಿದೆ ಒಂದು ಹೊಸ ರಸ್ತೆ ಇಲ್ಲ, ಹೊಸ ಯೋಜನೆಯಿಲ್ಲ, ಇರುವಂತ ಚರಂಡಿಗಳ ಸ್ವಚ್ಛತೆ ಮಾಡಿಸಿಲ್ಲ. ಚರಂಡಿಗಳು ಸ್ವಚ್ಛತೆ ಇಲ್ಲದೆ ಸಾಂಕ್ರಾಮಿಕ ರೋಗಗಳು ಯಥೇಚ್ಛವಾಗಿ ಹರಡುವ ಭೀತಿ ಎದುರಾಗಿದೆ.

 

ಮೊಳಕಾಲ್ಮುರು ಕ್ಷೇತ್ರದ ಮಾನ್ಯ ಶಾಸಕರು ಮಂತ್ರಿಯಾಗುವ ಬಗ್ಗೆ ಹಗಲು ಗನಸು ಕಾಣುತ್ತಾ ಅಭಿವೃದ್ಧಿಯ ಕಡೆಗೆ ಗಮನಹರಿಸದೆ ಇರುವುದು ಕೂಡ ಕ್ಷೇತ್ರದ ಹಿನ್ನೆಡೆಗೆ ಕಾರಣವಾಗಿದೆ. ಕೆಲ ಕಾಮಗಾರಿಗಳ ಶಂಕುಸ್ಥಾಪನೆ ಮಾಡಿದ್ದರೂ ಅದು ಮೊಳಕಾಲ್ಮೂರು ಹೋಬಳಿಯಲ್ಲಿ ಮಾತ್ರ. ತಳಕು, ನಾಯಕನಹಟ್ಟಿ  ಹೋಬಳಿಗಳನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ನಾನು ಅತ್ಯಂತ ಹಿರಿಯ ಶಾಸಕ ಎಂಬ ಅಹಂನಲ್ಲಿರುವ ಗೋಪಾಲಕೃಷ್ಣ ಅವರು ಮಂತ್ರಿಗಳ ಬಳಿ ಹೋಗಿ ಅಭಿವೃದ್ಧಿಗೆ ಪತ್ರ ನೀಡಿರುವುದಂತೂ ನಾನಂತೂ ಕಂಡಿಲ್ಲ ಎಂದು ಪ್ರಭಾಕರ ಹೇಳಿದ್ದಾರೆ.

 

ಇತ್ತೀಚೆಗೆ ನಾನು ದೇವಸಮುದ್ರ ಗ್ರಾಮ ಪಂಚಾಯಿತಿಯಲ್ಲಿ ಪ್ರವಾಸ ಮಾಡಿ ಅಲ್ಲಿನ ಚರಂಡಿ ಸ್ವಚ್ಛತೆ ಮಾಡಿಲ್ಲದಿರುವ ಬಗ್ಗೆ ಪಿಡಿಒ ಅಮಾನತಿಗೆ ಆಗ್ರಹಿಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರು ನೀಡಿರುವ ವಿಚಾರವಾಗಿ  7 ಬಾರಿ ಶಾಸಕರಾಗಿರುವ ಗೋಪಾಲಕೃಷ್ಣ ಅವರು ಗೌರವ ಇಲ್ಲದೆ ನನ್ನ ಬಗ್ಗೆ ಕೇವಲವಾಗಿ ಮಾತನಾಡಿರುವುದು ಅವರಿಗೆ ಶೋಭೆ ತರುವಂತಹ ಸಂಗತಿಯಲ್ಲ ನಮ್ಮಂತ ಯುವಕರು ಮುಂದಿನ  ದಿನಗಳಲ್ಲಿ ಶಾಸಕರಾಗಬೇಕೆಂಬ ಹಂಬಲದೊಂದಿಗೆ ಕೆಲಸ ಮಾಡುವ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಪ್ರವಾಸ ಮಾಡಿದರೆ  ಗೋಪಾಲಕೃಷ್ಣ ಅವರು ಇನ್ನಿಲ್ಲದ ರೀತಿಯಲ್ಲಿ ಪದಗಳನ್ನು ಬಳಕೆ ಮಾಡಿ ಮಾತನಾಡುವುದು ಅತ್ಯಂತ ಖಂಡನೀಯ ಎಂದು ಪ್ರಭಾಕರ ಹೇಳಿದ್ದಾರೆ.

ಹಿರಿಯ ಶಾಸಕರಾಗಿರುವ ಎನ್.ವೈ.ಗೋಪಾಲಕೃಷ್ಣ ಅವರು ಕ್ಷೇತ್ರದ ಅಭಿವೃದ್ಧಿ ಕಡೆ ಗಮನಹರಿಸಲಿ ಎಂದು ಪ್ರಭಾಕರ್ ಆಗ್ರಹಿಸಿದ್ದಾರೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ