11 Nov 2026, 12:19:36 AM|
Gold₹14266/gGold24K ₹14,266/g - 22K ₹13,065/gTap for full details
Press ID & Credential Portal
Apply / Verify  ➔
LIVE TV StateNationalPoliticsCrimeEntertainmentSportsEducationFINANCE & TAXATION
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Districts Vijayanagara

ಯುವಜನರಲ್ಲಿ ಸಹಕಾರ, ಸಹೋದರತ್ವದ ಮೌಲ್ಯಗಳು ಬೆಳೆದು ಬರಲಿ: ಡಾ.ಎಸ್.ಚಾರೇಶ್

ತಾಯಕನಹಳ್ಳಿಯಲ್ಲಿ ಮೂರು ದಿನಗಳ ಪೌರತ್ವ ತರಬೇತಿ ಶಿಬಿರಕ್ಕೆ ತೆರೆ

 ಕೂಡ್ಲಿಗಿ: ದೇಶದ ಪ್ರಗತಿಯಲ್ಲಿ ಯುವಕರ ಪಾತ್ರ ಬಹುಮುಖ್ಯವಾಗಿದ್ದು, ನಾಯಕತ್ವದ ಗುಣಗಳೊಂದಿಗೆ ಶಿಸ್ತು, ಸಹಕಾರ, ಸಹೋದರತ್ವ ಹಾಗೂ ಸಮಾನತೆಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಗುಂಡಿನಹೊಳೆಯ ಜ್ಞಾನಮಂಟಪ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎಸ್. ಚಾರೇಶ್ ತಿಳಿಸಿದರು.

ತಾಲೂಕಿನ ತಾಯಕನಹಳ್ಳಿ ಗ್ರಾಮದ ಅಲ್ಪಸಂಖ್ಯಾತ ಮೊರಾರ್ಜಿ ವಸತಿ ಶಾಲೆಯಲ್ಲಿ ಜ್ಞಾನಮಂಟಪ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಮೂರು ದಿನಗಳ ಕಾಲ ಆಯೋಜಿಸಿದ್ದ ಪೌರತ್ವ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಮೂರು ದಿನಗಳ ಶಿಬಿರವು ಪ್ರಶಿಕ್ಷಣಾರ್ಥಿಗಳಿಗೆ ಸ್ವಚ್ಛತೆ ಸೇರಿದಂತೆ ವಿವಿಧ ಶ್ರಮದಾನ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಹಾಗೂ ಗ್ರಾಮಸ್ಥರೊಂದಿಗೆ ಬೆರೆತು ಗ್ರಾಮೀಣ ಜೀವನ ಪದ್ಧತಿಯನ್ನು ಅರಿಯಲು ಉತ್ತಮ ವೇದಿಕೆಯಾಗಿದೆ. ದೇಶಪ್ರೇಮದ ಜೊತೆಗೆ ಭ್ರಾತೃತ್ವ ಮತ್ತು ಸಮಾನತೆಯನ್ನು ಎತ್ತಿಹಿಡಿಯುವ ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು. ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೂಡ್ಲಿಗಿ ತಾಲೂಕು ಅಧ್ಯಕ್ಷ ಹುಡೇಂ ಕೃಷ್ಣಮೂರ್ತಿ ಮಾತನಾಡಿ, ದೇಶವನ್ನು ಸದೃಢವಾಗಿ ಕಟ್ಟುವಲ್ಲಿ ಯುವಜನರು ಪ್ರಮುಖ ಪಾತ್ರ ವಹಿಸಬೇಕು. ಸಂವಿಧಾನದ ಆಶಯದಂತೆ ಜಾತ್ಯತೀತತೆ, ಸಮಾನತೆ ಹಾಗೂ ಸಹೋದರತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ನಾಗರಿಕರಾಗಿ ಬದುಕಬೇಕು. ಗುರುಹಿರಿಯರನ್ನು ಗೌರವಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಜ್ಞಾನಮಂಟಪ ಶಿಕ್ಷಣ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಎಚ್.ಟಿ. ರವಿಕುಮಾರ್ ಮಾತನಾಡಿ, ಪೌರತ್ವ ತರಬೇತಿ ಶಿಬಿರವು ಪ್ರಶಿಕ್ಷಣಾರ್ಥಿಗಳ ಬೌದ್ಧಿಕ ಬೆಳವಣಿಗೆ, ಸಾಮರ್ಥ್ಯ ಮತ್ತು ಪ್ರತಿಭೆಯ ಅನಾವರಣಕ್ಕೆ ಹಾಗೂ ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ. ಗ್ರಾಮೀಣ ಭಾಗದಲ್ಲಿ ಶ್ರಮದಾನದ ಜೊತೆಗೆ ವ್ಯಾಯಾಮ, ಯೋಗ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಜ್ಞಾನವಿಕಾಸಕ್ಕೆ ಪೂರಕ ವಾತಾವರಣ ನಿರ್ಮಾಣವಾಗುತ್ತದೆ. ಶಿಬಿರದಲ್ಲಿ ಕಲಿತ ಉತ್ತಮ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಟಿ.ಜಿ. ಶಿವಾನಂದಪ್ಪ, ಗೊರ್ಲಿ ನಾಗರಾಜ, ಎಚ್.ಕೆ. ಕೃಷ್ಣ ಹಾಗೂ ಬಿ.ಎಚ್. ಮಲ್ಲೇಶ್ ಮಾತನಾಡಿದರು. ಪ್ರಶಿಕ್ಷಣಾರ್ಥಿಗಳಾದ ಬೆಳಗಾವಿ ಭಾರತಿ, ಹನುಮೇಶ್, ಎಚ್. ಹುಲುಗೇಶ್, ರೇಣುಕಾ, ಆರತಿ ಹಾಗೂ ಉಮೇಶ್ ಶಿಬಿರದ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಹುಡೇಂ ಕೃಷ್ಣಮೂರ್ತಿ, ಪ್ರಾಂಶುಪಾಲ ಡಾ. ಎಸ್. ಚಾರೇಶ್ ಹಾಗೂ ಶಿಬಿರದ ಮುಖ್ಯಸ್ಥ, ಪ್ರಾಧ್ಯಾಪಕ ಮಲ್ಲೇಶ್ ಸೇರಿದಂತೆ ಗಣ್ಯರನ್ನು ಸನ್ಮಾನಿಸಲಾಯಿತು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೀಪಗಳ ಹಬ್ಬದ ಮಹತ್ವ, ಆಚರಣೆಯ ವಿಧಿ ವಿಧಾನ ಇಲ್ಲಿದೆಕೋಡಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಇಟಲಿಯ ಹೈಡ್ರೋನಿಕ್' ಸಂಸ್ಥೆ ಹಾಗೂ 'ಲಿಫ್ಟ್ ಎಕ್ಸ್ಪೋಗೆ' ಡಾ. ಬಿ.ಎಂ. ಉಮೇಶ್ ಕುಮಾರ್ ಭೇಟಿಮಕ್ಕಳನ್ನು ಮೊಬೈಲ್ನಿಂದ ದೂರವಿಟ್ಟು ಕ್ರೀಡೆಗಳಲ್ಲಿ ತೊಡಗಿಸಿ: ಬಸವರಾಜ್ ಶೀಲವಂತರ್ ಕರೆನಕಲಿ ಮತದಾರರಿಗೆ ರಕ್ಷಣೆ ನೀಡುವುದೇ ಎಸ್ಐಆರ್ ವಿರೋಧಿಗಳ ಅಜೆಂಡಾ ಅಲ್ಲವೇ?” – ಪ್ರಭಾಕರ್ ರಾಗಿ ಅಂಗಡಿಗೆ ಬಂದವರನ್ನು ಪ್ರೀತಿಯಿಂದ ಮಾತನಾಡಿಸುತ್ತಾರೆಹಳ್ಳಿ-ಹಳ್ಳಿಗೆ ತೆರಳಿ ಕಾಂಗ್ರೆಸ್ ಭದ್ರಕೋಟೆ ನಿರ್ಮಿಸುತ್ತಿರುವ ಡಾ. ಯೋಗೇಶ್ ಬಾಬುವಾಲ್ಮೀಕಿನಾಯಕ ಸಮಾಜದವರು ಖಡ್ಗದ ಬದಲಾಗಿ ಶಿಕ್ಷಣದ ಅಸ್ತ್ರಹಿಡಿಯಿರಿಚಲನಚಿತ್ರ ನಟ, ನಿರ್ದೇಶಕ ಚಂದ್ರಹಾಸ ಆಳ್ವರಿಗೆ ಸನ್ಮಾನಶ್ರೀ ಕೃಷ್ಣ ರುಕ್ಮಿಣಿ ಸ್ಕೂಲ್ ಆಫ್ ಲಾದಲ್ಲಿ ಫ್ರೆಷರ್ಸ್ ಡೇ ಹಾಗೂ ಕನ್ನಡ ರಾಜ್ಯೋತ್ಸವ