22 Nov 2026, 06:20:56 PM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
LIVE TV StateNationalPoliticsCrimeEntertainmentSportsEducationFINANCE & TAXATION
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Districts

ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೀವನ ಮೌಲ್ಯ ಅಳವಡಿಸಿಕೊಳ್ಳೋಣ

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹದ್ದೂರ್‌ಶಾಸ್ತ್ರಿ ಜಯಂತಿ ಆಚರಣೆ

ಬಳ್ಳಾರಿ :  ಮಹತ್ಮಾ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರು ನಮ್ಮ ದೇಶವು ಸದಾ ಗೌರವಿಸುವ ಎರಡು ಮೇರು ವ್ಯಕ್ತಿತ್ವಗಳು, ಇವರ ಸ್ಮರಣೆ ಇಂದಿನ ಕಾಲಘಟ್ಟದಲ್ಲಿ ಅಗತ್ಯವಿದೆ. ಅವರ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳೋಣ ಎಂದು ವಿಶ್ರೀಕೃ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ ಮುನಿರಾಜು ಅವರು ಹೇಳಿದರು.

ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ  ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಗುರುವಾರ ಆಚರಿಸಿದ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವಿಶ್ವವಿದ್ಯಾಲಯದ ಕುಲಸಚಿವ ನಾಗರಾಜು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಾತ್ಮ ಗಾಂಧೀಜಿ ಅವರ ಜೀವನವೇ ಒಂದು ಸಂದೇಶ ಆ ಸಂದೇಶವು ನಮಗೆಲ್ಲರಿಗೂ ಮಾದರಿಯಾಗಿದೆ. ಶಾಸ್ತ್ರಿ ಜಿಯವರ ಸರಳತೆಯನ್ನು ಅವರ ಜೀವನದ ಕೆಲವು ಘಟನೆಗಳನ್ನು ವಿವರಿಸುವ ಮೂಲಕ ಸ್ಮರಿಸಿದರು. ಆ ಮೂಲಕ ಸರಳತೆಯ ಮಹತ್ವವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಮತ್ತು ಅದರ ಮೌಲ್ಯವನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.



ವಿಶ್ವವಿದ್ಯಾಲಯದ ಆಂಗ್ಲ ವಿಭಾಗದ ಪ್ರಾಧ್ಯಾಪಕ ಪ್ರೊ. ರಾಬರ್ಟ್ ಜೋಸ್ ಅವರು ಮಾತನಾಡಿ, ಗಾಂಧೀಜಿ ಮತ್ತು ಶಾಸ್ತ್ರಿಜಿಯವರ ಜೀವನ ಮತ್ತು ಅವರು ಅನುಸರಿಸಿದ ಮಾರ್ಗಗಳನ್ನು ತಿಳಿದು ಅದನ್ನು ಪಾಲಿಸುವುದು ಇಂದಿನ ಯುವ ಪೀಳಿಗೆಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ.ಕುಮಾರ್ ಕಾರ್ಯಕ್ರಮವನ್ನು ನಿರ್ವಹಿಸಿದರು. ಕಾರ್ಯಕ್ರಮದ ನಂತರ ಸಸಿ ನೆಡುವ ಕಾರ್ಯಕ್ರಮವನ್ನು ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಬೋಧಕರು ಮತ್ತು ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೀಪಗಳ ಹಬ್ಬದ ಮಹತ್ವ, ಆಚರಣೆಯ ವಿಧಿ ವಿಧಾನ ಇಲ್ಲಿದೆಕೋಡಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಇಟಲಿಯ ಹೈಡ್ರೋನಿಕ್' ಸಂಸ್ಥೆ ಹಾಗೂ 'ಲಿಫ್ಟ್ ಎಕ್ಸ್ಪೋಗೆ' ಡಾ. ಬಿ.ಎಂ. ಉಮೇಶ್ ಕುಮಾರ್ ಭೇಟಿಮಕ್ಕಳನ್ನು ಮೊಬೈಲ್ನಿಂದ ದೂರವಿಟ್ಟು ಕ್ರೀಡೆಗಳಲ್ಲಿ ತೊಡಗಿಸಿ: ಬಸವರಾಜ್ ಶೀಲವಂತರ್ ಕರೆನಕಲಿ ಮತದಾರರಿಗೆ ರಕ್ಷಣೆ ನೀಡುವುದೇ ಎಸ್ಐಆರ್ ವಿರೋಧಿಗಳ ಅಜೆಂಡಾ ಅಲ್ಲವೇ?” – ಪ್ರಭಾಕರ್ ರಾಗಿ ಅಂಗಡಿಗೆ ಬಂದವರನ್ನು ಪ್ರೀತಿಯಿಂದ ಮಾತನಾಡಿಸುತ್ತಾರೆಹಳ್ಳಿ-ಹಳ್ಳಿಗೆ ತೆರಳಿ ಕಾಂಗ್ರೆಸ್ ಭದ್ರಕೋಟೆ ನಿರ್ಮಿಸುತ್ತಿರುವ ಡಾ. ಯೋಗೇಶ್ ಬಾಬುವಾಲ್ಮೀಕಿನಾಯಕ ಸಮಾಜದವರು ಖಡ್ಗದ ಬದಲಾಗಿ ಶಿಕ್ಷಣದ ಅಸ್ತ್ರಹಿಡಿಯಿರಿಚಲನಚಿತ್ರ ನಟ, ನಿರ್ದೇಶಕ ಚಂದ್ರಹಾಸ ಆಳ್ವರಿಗೆ ಸನ್ಮಾನಶ್ರೀ ಕೃಷ್ಣ ರುಕ್ಮಿಣಿ ಸ್ಕೂಲ್ ಆಫ್ ಲಾದಲ್ಲಿ ಫ್ರೆಷರ್ಸ್ ಡೇ ಹಾಗೂ ಕನ್ನಡ ರಾಜ್ಯೋತ್ಸವ