LIVE TV StateNationalPoliticsInternationalCrimeEntertainmentSportsEducationFINANCE & TAXATION
Districts Davanagere

ಗ್ರಂಥಾಲಯ ದಿನಾಚರಣೆ: ಓದುವ ಸಂಸ್ಕೃತಿ ಬೆಳೆಸಿಕೊಳ್ಳಲು ಕರೆ

ಜಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಜಗಳೂರು ಇಲ್ಲಿ ಇಂದು ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

 

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳು ಮಾತನಾಡಿದ ಪ್ರೊ ವೆಂಕಟೇಶ್ ಬಾಬು ಅವರು ಗ್ರಂಥಾಲಯ ದಿನಾಚರಣೆಯ ಮಹತ್ವ, ಪುಸ್ತಕಗಳ ಮಹತ್ವ ಹಾಗೂ ವಿದ್ಯಾರ್ಥಿಗಳ ಜೀವನದಲ್ಲಿ ಓದುವ ಹವ್ಯಾಸದ ಅಗತ್ಯತೆಯನ್ನು ವಿವರಿಸಿದರು. ಓದು ಮತ್ತು ಗ್ರಂಥಾಲಯ ಪರಸ್ಪರ ಪೂರಕವಾಗಿದ್ದು, ವಿದ್ಯಾರ್ಥಿಗಳು ಕಾಲೇಜಿನ ಗ್ರಂಥಾಲಯವನ್ನು ಉತ್ತಮವಾಗಿ ಬಳಸಿಕೊಂಡಾಗ ತಮ್ಮ ಜ್ಞಾನವನ್ನು ಹತ್ತಾರು ಪಟ್ಟು ಹೆಚ್ಚಿಸಿಕೊಳ್ಳಲು ಸಾಧ್ಯ ಎಂದು ಪ್ರೇರಣಾದಾಯಕವಾಗಿ ನುಡಿದರು.

 

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಪ್ರೊ ರಾಜೇಶ್ವರಿ ಪೂಜಾರಿ ರವರು ಮಾತನಾಡುತ್ತಾ ಪುಸ್ತಕಗಳು ಕೇವಲ ಮಾಹಿತಿಯ ಮೂಲಗಳಲ್ಲ; ಅವು ವಿದ್ಯಾರ್ಥಿಗಳ ಚಿಂತನಾ ಶಕ್ತಿ, ವಿಶ್ಲೇಷಣಾ ಸಾಮರ್ಥ್ಯ, ವ್ಯಕ್ತಿತ್ವ ವಿಕಸನ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಪ್ರಮುಖ ಸಾಧನಗಳಾಗಿವೆ. ಆದ್ದರಿಂದ ವಿದ್ಯಾರ್ಥಿಗಳು ಪ್ರತಿನಿತ್ಯ ಸ್ವಲ್ಪ ಸಮಯವನ್ನು ಓದಿಗೆ ಮೀಸಲಿಟ್ಟು, ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಕರೆ ನೀಡಿದರು.

 

ಗ್ರಂಥಪಾಲಕಾರದ ಶ್ರೀ ಅನಿಲ್ ಬೋರಯ್ಯ ಅವರು ಗ್ರಂಥಾಲಯ ದಿನಾಚರಣೆಯ ಕುರಿತು ಉಪನ್ಯಾಸ ನೀಡಿದರು

 

ಕಾರ್ಯಕ್ರಮದಲ್ಲಿ  ಪ್ರೊ ಸತೀಶ್,  ಪ್ರೊ ಮಹಾಂತೇಶ್, ಪ್ರೊ ಬಸವರಾಜ್ ಸೇರಿದಂತೆ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಮತ್ತು ಗ್ರಂಥಾಲಯ ಬಳಕೆಯ ಕುರಿತು ಜಾಗೃತಿ ಮೂಡಿಸುವ ಮೂಲಕ ಯಶಸ್ವಿಯಾಗಿ ನಡೆಯಿತು.

 

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
“ಅಮೋಘ” ಚಲನಚಿತ್ರದ ಹಾಡು ಬಿಡುಗಡೆಬಳ್ಳಾರಿ ಜಿಲ್ಲೆಯ ಎಸ್ಐಆರ್ ಕರಡು ಮತದಾರರ ಪಟ್ಟಿ ಪ್ರಕಟನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿಗಳ ದರ್ಶನ ಪಡೆದ ಮಾಜಿ ಶಾಸಕ ಸುರೇಶ್ ಬಾಬುಅಂಬೇಡ್ಕರ್ ಕೇವಲ ವ್ಯಕ್ತಿಯಲ್ಲ, ಅದೊಂದು ವಿಚಾರಧಾರೆ: ಪ್ರೊ. ಎನ್.ಎಂ. ಸಾಲಿಸಾಂಸಾರಿಕ ಜೀವನ ಪ್ರವೇಶಿಸಿದ ಸ್ಪೈಡರ್ ಮ್ಯಾನ್ನಾಗೇಂದ್ರಗೆ ಮತ್ತೊಂದು ಮಹತ್ವದ ಹೊಣೆ: ಕಲ್ಯಾಣ ಕರ್ನಾಟಕ ಸಚಿವಾಲಯದ ಜವಾಬ್ದಾರಿಸಂಸ್ಕೃತ ವಿಶ್ವವ್ಯಾಪಿ ಜ್ಞಾನಭಾಷೆ, ಸಂಶೋಧನೆಗೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಲಿಕಲ್ಲೂರು- ಶಿಶು ಪಾಲನಾ ಕೇಂದ್ರದಲ್ಲಿ ತಾಯಂದಿರಿಗೆ ಜಾಗೃತಿ. ಹೊನ್ನಳ್ಳಿ ತಾಂಡಾದಲ್ಲಿ ಶ್ರೀಗುರು ಅಜ್ಜಯ್ಯನ ದ್ವಿತೀಯ ದಶಮಾನೋತ್ಸವ ವಿಶೇಷ ಪೂಜಾ ಕಾರ್ಯಕ್ರಮಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ