ಬಳ್ಳಾರಿ : ನಗರದ ಜಗದ್ಗುರು ಶ್ರೀ ಕೊಟ್ಟೂರುಸ್ವಾಮಿ ಮಹಾಸಂಸ್ಥಾನ ಮಠದಲ್ಲಿ ಕಾರಣಿಕ ಯುಗಪುರುಷ ಹಾನಗಲ್ಲ ಶ್ರೀ ಗುರು ಕುಮಾರ ಮಹಾಶಿವಯೋಗಿಗಳ 159ನೇ ಜಯಂತ್ಯುತ್ಸವ ಹಾಗೂ ತ್ರಿವಿಧ ದಾಸೋಹಿ ಪೂಜ್ಯ ಶ್ರೀ ಜಗದ್ಗುರು ಡಾ. ಸಂಗನ ಬಸವ ಮಹಾಸ್ವಾಮಿಗಳ 88ನೇ ಜಯಂತ್ಯುತ್ಸವದ ಅಂಗವಾಗಿ ಆಯೋಜಿಸಿದ್ದ ಜೀವನ ದರ್ಶನ ಪ್ರವಚನ ಕಾರ್ಯಕ್ರಮದಲ್ಲಿ ನಗರ ಶಾಸಕ ನಾರಾ ಭರತ್ ರೆಡ್ಡಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಶ್ರೀ ಕೊಟ್ಟೂರು ಬಸವಲಿಂಗ ಮಹಾಸ್ವಾಮಿಗಳಿಂದ ಶಾಸಕ ನಾರಾ ಭರತ್ ರೆಡ್ಡಿ ಆಶೀರ್ವಾದ ಪಡೆದರು. ಇದೇ ವೇಳೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರು ಹಾಗೂ ಮಾಜಿ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಡಿಸಿಸಿ ಅಧ್ಯಕ್ಷ ಅಲ್ಲಂ ಪ್ರಶಾಂತ್, ಮುಖಂಡರಾದ ಸಿರಿಗೆರೆ ಪನ್ನರಾಜ್, ಚಾನಾಳ್ ಶೇಖರ್, ಬಸವನಗೌಡ ಪಾಟೀಲ್ ಸೇರಿದಂತೆ ವೀರಶೈವ ಲಿಂಗಾಯತ ಮಹಾಸಭಾದ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.