LIVE TV StateNationalPoliticsCrimeEntertainmentSportsEducationFINANCE & TAXATION
Districts

ಪಕ್ಷವನ್ನು ಸಂಘಟಿಸಲು ಮಧು ಬಂಗಾರಪ್ಪ ಸಲಹೆ

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲ ಸಮುದಾಯದವರ ಏಳ್ಗೆಗೆ ಶ್ರಮಿಸುತ್ತಿದೆ. ವಿಶೇಷವಾಗಿ ಹಿಂದುಳಿದವರು, ದಲಿತರು ಮತ್ತು ಅಲ್ಪಸಂಖ್ಯಾತರ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು ಪಕ್ಷವನ್ನು ತಳಮಟ್ಟದಲ್ಲಿ ಸಂಘಟಿಸಿ, ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಅಧ್ಯಕ್ಷರಾದ ಮಧು ಬಂಗಾರಪ್ಪ ಸಲಹೆ ನೀಡಿದರು.

 

ಡಾ.ಸಿದ್ರಾಮ ದಾದಾರಾವ್ ವಾಘಮಾರೆ ಅವರಿಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಉಪಾಧ್ಯಕ್ಷರನ್ನಾಗಿ ನಿಯೋಜಿಸಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಸುಲಲಿತವಾಗಿ ಮುನ್ನಡೆಯುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳು ಕೋಟ್ಯಾಂತರ ಜನರ ಬಾಳಲ್ಲಿ ಬೆಳಕು ನೀಡುತ್ತಿವೆ. ಹಿಂದುಳಿದ ಸಮುದಾಯದವರು ತಮ್ಮ ಮಕ್ಕಳಿಗೆ ಹೆಚ್ಚಿನ ಶಿಕ್ಷಣ ಒದಗಿಸಬೇಕು. ಸಮುದಾಯಗಳನ್ನು ಸಂಘಟಿಸಿ ಮುಖ್ಯ ವಾಹಿನಿಗೆ ಬರಬೇಕು. ಈ ದಿಸೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲ ರೀತಿಯಿಂದ ನೆರವಾಗಲಿದ್ದು ಡಾ.ಸಿದ್ರಾಮ ವಾಘಮಾರೆ ಅವರು ಈ ದಿಸೆಯಲ್ಲಿ ಕಾರ್ಯಪ್ರವೃತ್ತರಾಗಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.



ಬೆಂಗಳೂರಿನ ಸದಾಶಿವ ನಗರದಲ್ಲಿರುವ ನಿವಾಸದಲ್ಲಿ ಮಧುಬಂಗಾರಪ್ಪನವರನ್ನು ಭೇಟಿಯಾಗಿ ಅಭಿನಂದಿಸಿದ ಡಾ.ಸಿದ್ರಾಮ ವಾಘಮಾರೆ ಅವರಿಗೆ ಮಧು ಬಂಗಾರಪ್ಪ ಈ ಸಲಹೆ ನೀಡಿದರು. ಕಳೆದ ನಾಲ್ಕು ದಶಕಗಳಿಂದ ಡಾ.ಸಿದ್ರಾಮ ವಾಘಮಾರೆ ಅವರು ಪಕ್ಷಕ್ಕಾಗಿ ಶ್ರಮಿಸುತ್ತಿದ್ದಾರೆ. ಸಚಿವರಾದ ಈಶ್ವರ್ ಖಂಡ್ರೆ, ರಹೀಂ ಖಾನ್, ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ರಾಜಶೇಖರ ಪಾಟೀಲ್ ಸೇರಿದಂತೆ ಹಲವಾರು ನಾಯಕರೊಂದಿಗೆ ಒಡನಾಟ ಇರಿಸಿಕೊಂಡಿದ್ದಾರೆ. ಎಐಸಿಸಿ ವರಿಷ್ಠರು ಮತ್ತು ಕೆಪಿಸಿಸಿ ನಾಯಕರೊಂದಿಗೆ ಗುರುತಿಸಿಕೊಂಡಿರುವ ಇವರು ರಾಜ್ಯಮಟ್ಟದ ಜಾನಪದ ಕಲಾವಿದರು ಕೂಡ. ಇವರು ಪಕ್ಷದ ಸಂಘಟನೆಗೆ ಮತ್ತು ಪಕ್ಷದ ನಿಷ್ಠೆ ಗಮನಿಸಿ ವರಿಷ್ಠರು ಈ ಸ್ಥಾನಮಾನ ನೀಡಿದ್ದಾರೆ. ಕಲ್ಯಾಣ ಕರ್ನಾಟಕವಲ್ಲದೇ ನಾಡಿನಾದ್ಯಂತ ಸಂಚರಿಸಿ ಪಕ್ಷದ ತತ್ವ, ನಿಷ್ಠೆಗಳು ಮತ್ತು ಸರ್ಕಾರದ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿ ಕೊಡುವ ಇಂಗಿತವನ್ನು ಡಾ.ಸಿದ್ರಾಮ ವಾಘಮಾರೆ ವ್ಯಕ್ತಪಡಿಸಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ