ಬೆಂಗಳೂರು: ನಗರದ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ವಿತ್ತಾಧಿಕಾರಿ ಎಂ.ಎಸ್.ಚೇತನ್ ಕುಮಾರ್ ಅವರಿಂದ ನಿರಂತರ ಮಾನಸಿಕ ಕಿರುಕುಳಕ್ಕೆ ಒಳಗಾದ ವಿದ್ಯಾರ್ಥಿನಿಯರು ಹಾಗೂ ಅತಿಥಿ ಉಪನ್ಯಾಸಕಿಯರು ಹಾಗೂ ಮಹಿಳಾ ಸಿಬ್ಬಂದಿಗಳು ಒಟ್ಟುಗೂಡಿ ಕುಲಪತಿಗಳ ಕಚೇರಿ ಮುಂಭಾಗ ತಮಗೆ ಆಗಿರುವ ಅನ್ಯಾಯಗಳನ್ನು ಪ್ರತಿಭಟನೆಯ ಮುಖಾಂತರ ಪ್ರತಿಭಟಿಸಿ ಸರ್ಕಾರದ ಗಮನ ಸಳೆಯಲು, ತಮ್ಮ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಲು ರಾಷ್ಟ್ರೀಯ ಅಂಬೇಡ್ಕರ್ ಸೇನೆಯ ಬೆಂಬಲದೊಂದಿಗೆ ಹೋರಾಟ ಮಾಡುವುದಾಗಿ ಪ್ರಕಟಣೆಯಲ್ಲಿ ಹೇಳಲಾಗಿದೆ.
ವಿದ್ಯಾರ್ಥಿನಿಯರ ಕ್ಷೇಮಾಭಿವೃದ್ಧಿ ಒಕ್ಕೂಟ ಹಾಗೂ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಜಂಟಿಯಾಗಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ,ವಿತ್ತಾಧಿಕಾರಿಯನ್ನು ತಕ್ಷಣ ಅಮಾನತುಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಹಾಗೆಯೇ ಇಬ್ಬರು ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ ಕಳೆದ ಆರು ತಿಂಗಳಿನಿಂದ ನಿರಂತರ ದಿನನಿತ್ಯ ಕಿರುಕುಳ ನೀಡಲಾಗುತ್ತಿದೆ. ಮಹಿಳಾ ಸಿಬ್ಬಂದಿಯನ್ನು ಚೇಂಬರ್ಗೆ ಒಂಟಿಯಾಗಿ ಕರೆಸಿಕೊಂಡು ಅಸಭ್ಯವಾಗಿ ವರ್ತಿಸುವುದು, ಮಾನಸಿಕ ಒತ್ತಡ ಹೇರುವುದು ನಡೆಯುತ್ತಿದೆ ಎಂದು ಸಂಘಟನೆಗಳ ಪದಾಧಿಕಾರಿಗಳು ದೂರಿದ್ದಾರೆ.
ಅತಿಥಿ ಉಪನ್ಯಾಸಕರ ಸಂಬಳದ ಬಿಲ್ ಪಾಸ್ ಮಾಡಲು ಲಂಚದ ಬೇಡಿಕೆ ಇಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಕುರಿತು ರಾಜ್ಯ ಮಹಿಳಾ ಆಯೋಗಕ್ಕೂ ದೂರು ಸಹ ಈಗಾಗಲೇ ಸಲ್ಲಿಸಲಾಗಿದೆ ಎಂದು ರಾಷ್ಟ್ರೀಯ ಅಂಬೇಡ್ಕರ್ ಸೇನೆಯ ರಾಷ್ಟ್ರಾಧ್ಯಕ್ಷ ಅಧ್ಯಕ್ಷರಾದ ಅರ್ಜುನ್ ಗೋಪಾಲಯ್ಯ ಅವರು ತಿಳಿಸಿದ್ದಾರೆ.
ಅತಿಥಿ ಉಪನ್ಯಾಸಕರ ಸಂಬಳದ ಬಿಲ್ ಪಾಸ್ ಮಾಡಲು ಲಂಚದ ಬೇಡಿಕೆ, ಮತ್ತಿತರ ವಿಷಯಗಳ ಆರೋಪವೂ ಕೇಳಿಬಂದಿದೆ. ಈಗಾಗಲೇ ರಾಜ್ಯ ಮಹಿಳಾ ಆಯೋಗಕ್ಕೂ ದೂರು ಸಲ್ಲಿಸಲಾಗಿದೆ.
- ಶ್ರೀ ಅರ್ಜುನ್ ಗೋಪಾಲಯ್ಯ, ರಾಷ್ಟ್ರಾಧ್ಯಕ್ಷರು, ರಾಷ್ಟ್ರೀಯ ಅಂಬೇಡ್ಕರ್ ಸೇನೆ