LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಬೆಂಗಳೂರು ರಸ್ತೆಯಲ್ಲಿ ಬೀದಿ ನಾಯಿಗಳ ಹಾವಳಿ

ಸಾರ್ವಜನಿಕರಲ್ಲಿ ಆತಂಕ : ನೂರಾನಿ ಹೋಟೆಲ್ನಿಂದ ಬೆಂಕಿ ಮಾರಮ್ಮ ದೇವಸ್ಥಾನದವರೆಗೆ ಸಂಚಾರ ದುಸ್ತರ – ತಕ್ಷಣ ಕ್ರಮಕ್ಕೆ ಸಾರ್ವಜನಿಕರ ಆಗ್ರಹ

 

ಬಳ್ಳಾರಿ : ನಗರದ ಬಂಡಿಮೋಟ್ ಪ್ರದೇಶದ ಬೆಂಗಳೂರು ರಸ್ತೆಯಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕರು ಭಯಭೀತರಾಗಿದ್ದಾರೆ. ನೂರಾನಿ ಹೋಟೆಲ್ನಿಂದ ಬೆಂಕಿ ಮಾರಮ್ಮ ದೇವಸ್ಥಾನದವರೆಗೆ ಇರುವ ಪ್ರಮುಖ ರಸ್ತೆ ಭಾಗದಲ್ಲಿ ಗುಂಪುಗೂಡಿರುವ ಬೀದಿ ನಾಯಿಗಳು ಮಕ್ಕಳಿಗೆ, ವೃದ್ಧರಿಗೆ ಹಾಗೂ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ರಸ್ತೆ ನಗರದ ಪ್ರಮುಖ ಸಂಚಾರ ಮಾರ್ಗವಾಗಿದ್ದು, ಪ್ರತಿದಿನ ಸಾವಿರಾರು ವಾಹನಗಳು ಹಾಗೂ ಸಾರ್ವಜನಿಕರು ಓಡಾಡುತ್ತಾರೆ. ಬೆಳಗಿನ ಜಾವ ಮತ್ತು ರಾತ್ರಿ ವೇಳೆಯಲ್ಲಿ ನಾಯಿಗಳ ಗುಂಪುಗಳು ರಸ್ತೆಯ ಮಧ್ಯೆ ಓಡಾಡುವುದರಿಂದ ವಾಹನ ಸವಾರರು ನಿಯಂತ್ರಣ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಕೆಲ ಸಂದರ್ಭಗಳಲ್ಲಿ ಬೈಕ್ ಸವಾರರನ್ನು ಹಿಂಬಾಲಿಸುವ ಘಟನೆಗಳೂ ನಡೆಯುತ್ತಿದ್ದು, ಅಪಘಾತದ ಭೀತಿ ಹೆಚ್ಚಾಗಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

 

ಶಾಲೆಗೆ ಹೋಗುವ ಮಕ್ಕಳು ಹಾಗೂ ವೃದ್ಧರು ಹೆಚ್ಚು ಆತಂಕದಲ್ಲಿದ್ದಾರೆ. ಕೆಲ ನಾಯಿಗಳು ದಾಳಿ ಮಾಡಲು ಮುಂದಾಗುತ್ತಿರುವುದರಿಂದ ಮಹಿಳೆಯರು ಮತ್ತು ಹಿರಿಯ ನಾಗರಿಕರು ರಸ್ತೆಯಲ್ಲಿ ನಡೆದು ಹೋಗಲು ಹೆದರುತ್ತಿದ್ದಾರೆ. ರಾತ್ರಿ ವೇಳೆಯಲ್ಲಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುತ್ತಿದ್ದು, ಗುಂಪು ಗುಂಪಾಗಿ ತಿರುಗಾಡುವ ನಾಯಿಗಳಿಂದ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಸ್ಥಳೀಯರ ಪ್ರಕಾರ, ರಸ್ತೆ ಬದಿಯಲ್ಲಿ ಆಹಾರ ತ್ಯಾಜ್ಯಗಳನ್ನು ಎಸೆಯಲಾಗುತ್ತಿರುವುದು ಹಾಗೂ ನಿಯಮಿತ ಸ್ವಚ್ಛತೆ ಇಲ್ಲದಿರುವುದು ನಾಯಿಗಳ ಸಂಖ್ಯೆ ಹೆಚ್ಚಲು ಪ್ರಮುಖ ಕಾರಣವಾಗಿದೆ. ಪಾಲಿಕೆ ವತಿಯಿಂದ ನಾಯಿಗಳ ನಿಯಂತ್ರಣ ಹಾಗೂ ಸಂತಾನೋತ್ಪತ್ತಿ ತಡೆ ಕ್ರಮಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಆರೋಪವೂ ಕೇಳಿಬರುತ್ತಿದೆ.

 

ಭಾಗದಲ್ಲಿ ಈಗಾಗಲೇ ಕೆಲವರು ನಾಯಿಗಳಿಂದ ಗಾಯಗೊಂಡಿರುವ ಘಟನೆಗಳು ನಡೆದಿದ್ದರೂ, ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿ, ಬೀದಿ ನಾಯಿಗಳ ನಿಯಂತ್ರಣ, ಹಿಡಿತ ಕಾರ್ಯಾಚರಣೆ, ಲಸಿಕೆ ಹಾಗೂ ಸಂತಾನೋತ್ಪತ್ತಿ ನಿಯಂತ್ರಣ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇದಲ್ಲದೆ ರಸ್ತೆ ಬದಿಯ ಕಸದ ವಿಲೇವಾರಿ ವ್ಯವಸ್ಥೆಯನ್ನು ಸುಧಾರಿಸಿ, ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಬಳ್ಳಾರಿ ಮಹಾನಗರ ಪಾಲಿಕೆ ತಕ್ಷಣ ಎಚ್ಚೆತ್ತುಕೊಳ್ಳಬೇಕಾಗಿದೆ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಸಾರ್ವಜನಿಕರ ಸುರಕ್ಷತೆ ಮೊದಲ ಆದ್ಯತೆಯಾಗಬೇಕು. ಯಾವುದೇ ಅನಾಹುತ ಸಂಭವಿಸುವ ಮೊದಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕುಎಂದು ಸ್ಥಳೀಯರು ಮನವಿ ಮಾಡಿದ್ದಾರೆ.

Author
Rakesh V
is Digital online news channel, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ