LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಯೋಗದಿಂದ ಮಾನಸಿಕ-ದೈಹಿಕ ಶಕ್ತಿ ವೃದ್ಧಿ : ತಿಪ್ಪಣ್ಣ ನೈನಾಪೂರ

ಸಿಂಧನೂರು: ಇಂದಿನ ವಿದ್ಯಾರ್ಥಿ ಮತ್ತು ಯುವಕರಿಗೆ ಯೋಗ ಅತ್ಯಂತ ಮಹತ್ವವಾಗಿದ್ದು ಯೋಗದಿಂದ ಮಾನಸಿಕ ಮತ್ತು ದೈಹಿಕ ಶಕ್ತಿ ವೃದ್ಧಿಯಾಗುತ್ತದೆ ಎಂದು ಯೋಗಪಟು ಹಾಗೂ ಮುಳ್ಳೂರು(ಯು) ಶಾಲೆಯ ಶಿಕ್ಷಕರಾದ  ತಿಪ್ಪಣ್ಣ ನೈನಾಪೂರ ಹೇಳಿದರು.

ಅವರು ತಾಲೂಕಿನ ಕಲಮಂಗಿ ಗ್ರಾಮದಲ್ಲಿ ಸರ್ಕಾರಿ ಪ್ರೌಢ ಶಾಲೆ ಕಲಮಂಗಿ, ಶ್ರೀ ಚೆನ್ನಮಲ್ಲಿಕಾರ್ಜುನ ಗ್ರಾಮಾಭಿವೃದ್ಧಿ ಸಮಿತಿ ಹಾಗೂ ಸ್ನೇಹ ಸಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಅಂತರಾಷ್ಟ್ರೀಯ ಯೋಗ ದಿನಾಚರಣೆ' ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿ  ಮಾತನಾಡುತ್ತಾ, ಯೋಗದಿಂದ ಅನೇಕ ಲಾಭಗಳಿವೆ. ಇಂದು ಇಡೀ ಜಗತ್ತು ಇದನ್ನು ಅರ್ಥ ಮಾಡಿಕೊಂಡಿದೆ. ವಿದ್ಯಾರ್ಥಿ-ಯುವಕರು ನಿತ್ಯವೂ ಯೋಗಭ್ಯಾಸಗಳನ್ನು ಮಾಡುವುದರಿಂದ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗುತ್ತಾರೆ. ದಿನಂಪ್ರತಿ ನಿತ್ಯ ಕರ್ಮಗಳ ಜೊತೆಗೆ ಯೋಗ, ಪ್ರಾಣಾಯಾಮ ಅಭ್ಯಾಸ ಮಾಡುವ ಮೂಲಕ ನಿಮ್ಮ ಮನಸ್ಸನ್ನು ಶುದ್ಧಿಗೊಳಿಸಿಕೊಂಡು ಹತೋಟಿಯಲ್ಲಿ ಇಟ್ಟುಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.



2015 ರಲ್ಲಿ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ವಿಶ್ವಸಂಸ್ಥೆಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸುವ ಕುರಿತು ವಿಷಯವನ್ನು ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಕಳೆದ ಹತ್ತು ವರ್ಷಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿ ವರ್ಷ ಜೂನ್-21ರಂದು ದಿನಾಚರಣೆಯನ್ನು  ಆಚರಣೆಗೆ ತರಲಾಗಿದೆ. ವೇದಗಳ ಕಾಲದಿಂದಲೂ ಇದ್ದ ಯೋಗ ಶಾಸ್ತ್ರವನ್ನು ಪತಂಜಲಿ ಮುನಿಗಳು ಯೋಗ ಸೂತ್ರಗಳ ಮೂಲಕ ಪರಿಚಯಿಸಿದರು ಎಂದು  ಮುಖ್ಯಗುರು ಮಲ್ಲಪ್ಪ ಬಾದರ್ಲಿ ಹೇಳಿದರು.

ಕನ್ನಡ ಭಾಷಾ ಶಿಕ್ಷಕ ರವಿಚಂದ್ರ ಪ್ರಸ್ತಾವಿಕವಾಗಿ ಮಾತನಾಡುತ್ತಾ, ಯೋಗದಿಂದ ಅನೇಕ ಪ್ರಯೋಜನಗಳಿದ್ದು ವಿದ್ಯಾರ್ಥಿಗಳು ನಿತ್ಯವೂ ರೂಢಿ ಮಾಡುವುದರಿಂದ ಆರೋಗ್ಯದ ಜೊತೆಗೆ ಏಕಾಗ್ರತೆಯನ್ನು ಪಡೆದುಕೊಳ್ಳಬಹುದು ಎಂದರು



ಈ ಸಂದರ್ಭದಲ್ಲಿ ಶ್ರೀ ಚನ್ನಮ್ಮಲ್ಲಿಕಾರ್ಜುನ ಗ್ರಾಮಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ದಯಾನಂದ ಸ್ವಾಮಿ ಹಿರಮಠ, ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ದೇವಮ್ಮ ನಾಗಪ್ಪ, ಗ್ರಾಮದ ಹಿರಿಯರಾದ ಶರಣೆಗೌಡ ಹಳೆಮನೆ, ಶರಣೆಗೌಡ ಪೋಲಿಸ ಪಾಟೀಲ, ಸ್ನೇಹ ಸಿರಿ ಟ್ರಸ್ಟಿನ ಉಪಾಧ್ಯಕ್ಷರಾದ ಅಯ್ಯನಗೌಡ, ಗ್ರಾಮದ ಹಿರಿಯರಾದ ಶರಣೆಗೌಡ ಕುಲಕರ್ಣಿ, ಸೋಮಲಿಂಗಪ್ಪ ತಾವರಗೇರಿ, ಆಂಜನೇಯ ಶೆಟ್ಟಿ, ಶಿಕ್ಷಕರಾದ ಸುಭಾಷ ಪತ್ತಾರ, ವೀರೇಶ ಗೋನವಾರ, ಎಂ.ಮಾರುತಿ, ರೂಪಾ,  ಶರಣಬಸವ ಕುಲಕರ್ಣಿ, ಮಂಹಾಂತೇಶ ಕುಲಕರ್ಣಿ, ನಾಗರಾಜ ಸೇರಿದಂತೆ ಗ್ರಾಮದ ಹಿರಿಯರು, ಯುವಕರು ಉಪಸ್ಥಿತರಿದ್ದರು.

ಯೋಗ : ತಾವರಗೇರಿಯ ಯೋಗ ಶಿಕ್ಷಕ ತಿಪ್ಪಣ್ಣ ನೈನಾಪುರ ಇವರ ಮಾರ್ಗದರ್ಶನದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಓಂಕಾರ-ಸೂರ್ಯ ನಮಸ್ಕಾರದಿಂದ ಆರಂಭವಾಗಿ ಯೋಗದ ವಿವಿಧ ಆಸನಗಳು, ಪ್ರಾಣಾಯಾಮ ಮತ್ತು ಧ್ಯಾನವನ್ನು ಹೇಳಿಕೊಟ್ಟರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ