LIVE TV StateNationalPoliticsCrimeEntertainmentSportsEducationFINANCE & TAXATION
Districts

ಜೂ.23 ರಂದು ಮಿನಿ ಉದ್ಯೋಗ ಮೇಳ

ಬಳ್ಳಾರಿ:  ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂ.23 ರಂದು ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಹಟ್ಟಪ್ಪ ಅವರು ತಿಳಿಸಿದ್ದಾರೆ.

ಮೇಳದಲ್ಲಿ 3 ರಿಂದ 4 ಕಂಪನಿಗಳು ಭಾಗವಹಿಸಲಿದ್ದು, ಇವರು ತಮ್ಮಲ್ಲಿರುವ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.



ವಿದ್ಯಾರ್ಹತೆ:  ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ  ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕು. ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದು.

ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ (ಬಯೋಡೇಟಾ) ಗಳೊಂದಿಗೆ ಅಂದು ನಡೆಯುವ ನೇರ ಸಂದರ್ಶನದಲ್ಲಿ  ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ