LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ರಾಜ್ಯದಲ್ಲಿ ಮಿನಿ ಪಾಕಿಸ್ತಾನಗಳು ಸೃಷ್ಟಿಯಾಗುತ್ತಿವೆ : ಆರ್.ಅಶೋಕ್

ಬೆಂಗಳೂರು :  ಕಾಂಗ್ರೆಸ್‌ನ ಮತಬ್ಯಾಂಕ್ ರಾಜಕಾರಣದಿಂದಾಗಿ ರಾಜ್ಯದಲ್ಲಿ ಮಿನಿ ಪಾಕಿಸ್ತಾನಗಳು ಸೃಷ್ಟಿಯಾಗುತ್ತಿವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಮದ್ದೂರಿಗೆ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಇಲ್ಲಿ ಯಾರು ಸತ್ತರೂ ತಮಟೆ ಹೊಡೆದುಕೊಂಡು ಹೋಗುವಂತಿಲ್ಲ. ಮಸೀದಿ ಮುಂದೆ ಮಾತ್ರ ಮೌನವಾಗಿ ಸಾಗಬೇಕಾಗುತ್ತದೆ. ಸಿಎಂ ಸಿದ್ದರಾಮಯ್ಯನವರಿಂದಾಗಿ ನಮ್ಮನ್ನು ಏನೂ ಮಾಡಲ್ಲ ಎಂಬ ಭಾವನೆ ಮುಸ್ಲಿಮರಿಗೆ ಬಂದಿದೆ. ರಂಜಾನ್ ಸಮಯದಲ್ಲಿ ದೇವಾಲಯದ ಮುಂಭಾಗ ಮುಸ್ಲಿಮರು ಮೆರವಣಿಗೆ ಹೋಗಬಹುದು. ಆದರೆ ಹಿಂದೂಗಳು ಮಸೀದಿ ಮುಂಭಾಗ ಮೌನವಾಗಿ ಇರಬೇಕು. ಕಾಂಗ್ರೆಸ್ ಅಧಿಕಾರದಲ್ಲೇ ಇದ್ದರೆ, ರಾಜ್ಯದೊಳಗೆ ಹಲವು ಪಾಕಿಸ್ತಾನಗಳು ಉದ್ಭವವಾಗುತ್ತದೆ ಎಂದರು.



ಕಾಂಗ್ರೆಸ್‌ನ ಮತ ಬ್ಯಾಂಕ್ ರಾಜಕಾರಣಕ್ಕಾಗಿ ಇಂತಹ ಗಲಭೆಗಳನ್ನು ಮಾಡಲಾಗುತ್ತಿದೆ. ಮುಸ್ಲಿಮರನ್ನು ಸೆಳೆಯಲು ಕಾಂಗ್ರೆಸ್ ಸರ್ಕಾರ ಅವರಿಗೆ ಬೆಂಬಲವಾಗಿ ನಿಂತಿದೆ. ಮದ್ದೂರಿನಲ್ಲಿ ಮಸೀದಿಯನ್ನು ಅಕ್ರಮವಾಗಿ ನಿರ್ಮಿಸಲಾಗಿದೆ. ಬೇರೆ ರಾಜ್ಯಗಳಿಂದಲೂ ಇಲ್ಲಿಗೆ ಜನರು ಬಂದಿದ್ದಾರೆ. ಈಗ ಕಲ್ಲು ಹೊಡೆದಿರುವವರು ಮುಂದೆ ಬಾಂಬ್ ಹಾಕುತ್ತಾರೆ. ಕಾಂಗ್ರೆಸ್ ನಾಯಕರು ಇವರು ನಮ್ಮ ಬ್ರದರ್‌ಗಳು ಎಂದು ಹೇಳುತ್ತಾರೆ. ಇಲ್ಲಿನ ಕಾಂಗ್ರೆಸ್ ಶಾಸಕರು ಕೂಡ ಅದನ್ನೇ ಹೇಳುತ್ತಾರೆ. ಆ ಬೆಂಬಲದಿಂದಲೇ ಮಿನಿ ಪಾಕಿಸ್ತಾನಗಳು ಸೃಷ್ಟಿಯಾಗಿವೆ. ಈ ತಾಲಿಬಾನ್ ಸರ್ಕಾರ ಮುಸ್ಲಿಮರಿಗೆ ಬೆಂಬಲ ನೀಡುತ್ತಿದೆ ಎಂದರು.

ಎಲ್ಲರೂ ಒಂದೇ ಎಂದು ಮಾತಿನಲ್ಲಿ ಹೇಳುತ್ತಾರೆ. ಆದರೆ ಹಿಂದೂಗಳು ಯಾವುದೇ ಸಮಾರಂಭ ಮಾಡುವಂತಿಲ್ಲ. ಇದನ್ನೇ ಜಾತ್ಯತೀತತೆ ಎಂದು ಹೇಳುತ್ತಾರೆ. ಮೆರವಣಿಗೆ ಸಮಯದಲ್ಲೇ ಹೆಚ್ಚು ಪೊಲೀಸರನ್ನು ನಿಯೋಜಿಸಬೇಕಿತ್ತು. ಅದನ್ನು ಸರ್ಕಾರ ಮಾಡಲೇ ಇಲ್ಲ. ಮಾಡಿದ್ದರೆ ಇಂತಹ ಅನಾಹುತ ಆಗುತ್ತಿರಲಿಲ್ಲ. ಕಾನೂನು ಸುವ್ಯವಸ್ಥೆ ಹಾಳಾಗಿರುವುದರಿಂದ ಇಡೀ ದೇಶ ಇತ್ತ ಕಡೆ ನೋಡುತ್ತಿದೆ. ನಾವ್ಯಾರೂ ಬರಲಿಲ್ಲ ಎಂದರೆ ಮುಸ್ಲಿಮರು ಮನೆಗಳಿಗೆ ಹೋಗಿ ಹೊಡೆಯುತ್ತಾರೆ ಎಂದರು.



ಕಲ್ಲು ಹೊಡೆದಿರುವವರು ಇಲ್ಲಿಯವರು ಅಲ್ಲ ಎಂದಾದರೆ ಅವರೇನು ಪಾಕಿಸ್ತಾನದಿಂದ ಬಂದಿದ್ದಾರಾ? ಇದು ಪೂರ್ವ ನಿಯೋಜಿತ ಕೃತ್ಯ. ಸರ್ಕಾರದ ಗುಪ್ತಚರ ಇಲಾಖೆ ಇದನ್ನು ಪತ್ತೆ ಮಾಡಬೇಕಿತ್ತು. ಗಣಪತಿ ಮೂರ್ತಿ ವಿಸರ್ಜನೆ ಸಮಯದಲ್ಲಿ ಪೊಲೀಸ್ ಇಲಾಖೆ ಸಿದ್ಧತೆ ಮಾಡಿಕೊಳ್ಳಬೇಕಿತ್ತು ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಹಿಂದೂ ಎಂದು ಹೇಳಿಕೊಳ್ಳುತ್ತಾರೆಯೇ ಹೊರತು, ಅವರಿಗೆ ಯಾವ ಅಭಿಮಾನವೂ ಇಲ್ಲ. ಅವರು ನಿರಾಶರಾಗಿದ್ದಾರೆ ಎಂದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ