LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ನಡೆ-ನುಡಿಯಲ್ಲಿ ವ್ಯತ್ಯಾಸ:ಸಿದ್ಧಯ್ಯನಕೋಟೆ ಶ್ರೀ ಆತಂಕ

ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ ಕಾರ್ಯಕ್ರಮ

ಹೊಳಲ್ಕೆರೆ :  ಅನಾದಿ ಕಾಲದಿಂದಲೂ ಬೇರೂರಿದ್ದ ಮೌಢ್ಯ, ಕಂದಾಚಾರ, ಅಸ್ಪೃಶ್ಯತೆ ವಿರುದ್ಧ ಜನಾಂದೋಲನ ರೂಪಿಸಿ ಕ್ರಾಂತಿಕಾರಿ ಚಳವಳಿ ನಡೆಸಿದ 12ನೇ ಶತಮಾನದ ಬಸವಾದಿ ಶರಣ ಸಿದ್ಧಾಂತವನ್ನು ಪಾಲಿಸುವಲ್ಲಿ ಜನ ನಿರಾಸಕ್ತಿ ಪ್ರದರ್ಶಿಸುತ್ತಿದ್ದಾರೆ ಎಂದು ಸಿದ್ಧಯ್ಯನಕೋಟೆ ಮಠದ ಶ್ರೀ ಬಸವಲಿಂಗ ಸ್ವಾಮೀಜಿ ಬೇಸರಿಸಿದರು.

 

ಪಟ್ಟಣದಲ್ಲಿ ಆಯೋಜಿಸಿದ್ದ ಮಾದಿಗ ಸಮುದಾಯದ ಮುಖಂಡ ಭಾನುಮೂರ್ತಿ ನುಡಿನಮನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, ಬಸವಣ್ಣನ ಯುಗದಲ್ಲಿ ಬೇಡುವವರು ಇರಲಿಲ್ಲ, ನೀಡುವವರು ಇದ್ದರು. ಆದರೆ, ಈಗ ಅಂತಹ ಪರಿಸ್ಥಿತಿ ಬದಲಾಗಿದೆ ಎಂದರು.

ಜಗತ್ತಿನಲ್ಲಿ ಅನೇಕರು ಹುಟ್ಟಿ ಕಣ್ಮರೆ ಆಗಿದ್ದಾರೆ. ಆದರೆ, ನಿಸ್ವಾರ್ಥ ಸೇವೆ ಮೂಲಕ ಬದುಕಿದವರು ನಿಧನದ ಬಳಿಕವೂ ಜೀವಂತವಾಗಿದ್ದಾರೆ. ಆದರೆ, ಈಗಿನ ಜನರಲ್ಲಿ ಬಹುತೇಕ ಬದ್ಧತೆ, ಸೇವಾ ಮನೋಭಾವ, ಪರೋಪಕಾರಿ ಗುಣ ಕಣ್ಮರೆ ಆಗುತ್ತಿದೆ ಎಂದು ಬೇಸರಿಸಿದರು.

ಯಾರೂ ತಮಗಾಗಿ ಜೀವನ ಕಟ್ಟಿಕೊಳ್ಳುತ್ತಾರೆ ಅವರು ನೆಮ್ಮದಿ ಆಗಿರುತ್ತಾರೆ. ಅವರ ಕುರಿತು ಆಕ್ಷೇಪಣೆ ಇಲ್ಲ. ಆದರೆ, ಮತ್ತೊಬ್ಬರ ಬದುಕಿನಲ್ಲಿ ವಿಷ ಬೀಜ ಬಿತ್ತುವ ಕಾರ್ಯ ನಡೆಸುವವರು ಅತ್ಯಂತ ಅಪಾಯಕಾರಿಗಳು. ಇವರ ಕುರಿತು ಸದಾ ಎಚ್ಚರಿಕೆಯಿಂದರಬೇಕೆಂದು ಬಸವಾದಿ ಶರಣರು ಸೇರಿ ಎಲ್ಲ ಮಹಾತ್ಮರು ಎಚ್ಚರಿಸಿದ್ದಾರೆ ಎಂದು ಹೇಳಿದರು.

ಮತ್ತೊಬ್ಬರ ಸಂಕಷ್ಟಕ್ಕೆ ಸ್ಪಂದಿಸುವವರು ಸದಾ ಜನ ನಾಯಕರಾಗಿ ಹೊರಹೊಮ್ಮಲಿದ್ದಾರೆ. ಭಾನುಮೂರ್ತಿ ತೆರಿಗೆ ಇಲಾಖೆಯಲ್ಲಿ ಅಧಿಕಾರಿಯಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಜೊತೆಗೆ ಮಾದಿಗ ಹಾಗೂ ಇತರ ಎಲ್ಲ ಸಮುದಾಯಗಳ ಪ್ರಗತಿಗೆ ಶ್ರಮಿಸಿದ್ದಾರೆ. ಅವರ ಸೇವಾ ಮನೋಭಾವವನ್ನು ಈಗಿನ ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.

ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ನಾವು ಯಾವುದೇ ಕ್ಷೇತ್ರದಲ್ಲಿ ಇರಲಿ, ಜನಪರ ಚಿಂತನೆ ಬೆಳೆಸಿಕೊಳ್ಳಬೇಕು. ಇಲ್ಲದಿದ್ದರೆ ಜೀವನ ನಶ್ವರ ಎಂದು ಹೇಳಿದರು.

ಭಾನುಮೂರ್ತಿ ತೆರಿಗೆ ಇಲಾಖೆಯಲ್ಲಿ ಅಧಿಕಾರಿ ಆಗಿದ್ದರೂ ಒಳಮೀಸಲಾತಿ ಹೋರಾಟದಲ್ಲಿ ಸಕ್ರಿಯರಾಗಿದ್ದರು. ಜೊತೆಗೆ ಅನೇಕ ಜನಪರ ಚಳವಳಿಗೆ ಬೆನ್ನೆಲುಬು ಆಗಿದ್ದರು. ಜನಪರ ಕಾರ್ಯಕ್ರಮಗಳಿಗೆ ಆರ್ಥಿಕ ಸಹಾಯದ ಜೊತೆಗೆ ನೈತಿಕವಾಗಿ ಬೆಂಬಲವಾಗಿ ನಿಲ್ಲುವ ಗುಣ ಮಾದರಿ ಆಗಿತ್ತು ಎಂದು ಸ್ಮರಿಸಿದರು.

ತೆರಿಗೆ ಇಲಾಖೆ ನಿವೃತ್ತ ಅಧಿಕಾರಿ ತೇಗನೂರು ಮಾತನಾಡಿ, ನಮ್ಮ ಇಲಾಖೆಯಲ್ಲಿ ಅಧಿಕಾರಿಯಾಗಿದ್ದ ಭಾನುಮೂರ್ತಿ ಅವರ ಸೇವಾಮನೋಭಾವ ಮಾದರಿ. ಅವರು ಸದಾ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದರು ಎಂದರು.

ಅನೇಕ ಸಂಘಟನೆಗಳ ಚಳವಳಿಗೆ ಆರ್ಥಿಕ ಸಹಾಯದ ಜೊತೆಗೆ ಹೋರಾಟವನ್ನು ಹೇಗೆ ಮುನ್ನಡಿಸಿಕೊಂಡು ಹೋಗಿ ಬೇಡಿಕೆ ಈಡೇರಿಸಿಕೊಳ್ಳಬೇಕೆಂಬ ವಿಷಯದಲ್ಲಿ ಮಾರ್ಗದರ್ಶನ ನೀಡುತ್ತಿದ್ದರು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆಶೋಕ್ ಕುಮಾರ್ ಸೇರಿ ವಿವಿಧ ಕ್ಷೇತ್ರದ ಮುಖಂಡರು, ಹೋರಾಟಗಾರರು ಪಾಲ್ಗೊಂಡಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ