LIVE TV StateNationalPoliticsCrimeEntertainmentSportsEducationFINANCE & TAXATION
State News

ನೂತನ ಕೆಪಿಸಿಸಿ ಅಧ್ಯಕ್ಷರಿಗೆ ಅಭಿನಂದಿಸಿದ ಶಾಸಕ ನಾರಾ ಭರತ್ ರೆಡ್ಡಿ

ಬೆಂಗಳೂರು/ಬಳ್ಳಾರಿ:  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ನೇಮಕಗೊಂಡ ಬಿ.ಕೆ. ಹರಿಪ್ರಸಾದ್ ಅವರನ್ನು ಬಳ್ಳಾರಿ ನಗರ ಶಾಸಕ ನಾರಾ ಭರತ್ ಅಭಿನಂದಿಸಿ, ಶುಭ ಹಾರೈಸಿದ್ದಾರೆ.

 

ಸಂದರ್ಭ ಬಳ್ಳಾರಿ ಜಿಲ್ಲೆಯ ಭವಿಷ್ಯದ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಯಿತು ಎಂದು ಅವರು ತಿಳಿಸಿದ್ದಾರೆ.

 

ಹೊಸದಾಗಿ ನೇಮಕಗೊಂಡ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಯಿತು ಮತ್ತು ಅವರ ನಾಯಕತ್ವದಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷವು ಇನ್ನಷ್ಟು ಬಲಪಡುತ್ತದೆ ಮತ್ತು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ, ವಿಶೇಷವಾಗಿ ಬಳ್ಳಾರಿ ಜಿಲ್ಲೆಯಲ್ಲಿ ಅಭಿವೃದ್ಧಿ ಮತ್ತು ಜನಸೇವೆಯ ಹೊಸ ಅಧ್ಯಾಯ ಆರಂಭವಾಗುತ್ತದೆ ಎಂಬ ವಿಶ್ವಾಸವನ್ನು ಶಾಸಕ ನಾರಾ ಭರತ್ ರೆಡ್ಡಿ ವ್ಯಕ್ತಪಡಿಸಿದ್ದಾರೆ.

news_1780831731_0_470.webp

 

ಭೇಟಿ ವೇಳೆ ಬಳ್ಳಾರಿ ಜಿಲ್ಲೆಯ ರಾಜಕೀಯ ಪರಿಸ್ಥಿತಿ, ಪಕ್ಷದ ಸಂಘಟನಾತ್ಮಕ ಬಲವರ್ಧನೆ, ಅಭಿವೃದ್ಧಿ ಯೋಜನೆಗಳು ಮತ್ತು ಭವಿಷ್ಯದ ಕಾರ್ಯಯೋಜನೆಗಳ ಬಗ್ಗೆ ವಿವರವಾದ ಚರ್ಚೆ ನಡೆಯಿತು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಸಬಲಗೊಳಿಸುವುದು ಮತ್ತು ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರ ನಡುವಿನ ಸಂಬಂಧವನ್ನು ಗಟ್ಟಿಗೊಳಿಸುವುದು ಚರ್ಚೆಯ ಮುಖ್ಯ ಅಂಶಗಳಾಗಿದ್ದವು ಎಂದು ಶಾಸಕರು ತಿಳಿಸಿದ್ದಾರೆ.

 

ಬಿ.ಕೆ. ಹರಿಪ್ರಸಾದ್ ಅವರ ಅನುಭವ ಮತ್ತು ನಾಯಕತ್ವವು ಪಕ್ಷಕ್ಕೆ ಮಾರ್ಗದರ್ಶನವಾಗುತ್ತದೆ ಎಂದು ನನ್ನ ಭಾವನೆ, ಅವರ ಯಶಸ್ವಿ ನಾಯಕತ್ವಕ್ಕೆ ಶುಭಕಾಮನೆ ಸಲ್ಲಿಸಿದೆ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆಆರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ತಡೆಗಟ್ಟಬಹುದು-ಡಾ. ನಿಗ್ಗುಡಗಿವಿಜಯರಾಘವೆಂದ್ರ ಅಭಿನಯದ “ರುದ್ರಾಭಿಷೇಕಂ’ ಚಿತ್ರದ ಟ್ರೈಲರ್ ಬಿಡುಗಡೆ ಪಠ್ಯದ ಜೊತೆಗೆ ಮೌಲ್ಯವರ್ಧಿತ ಕೋರ್ಸಗಳ ಆಯ್ಕೆ ಬಹುಮುಖ್ಯ-ಯಡ್ರಾಮಿ