LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ : ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿಯವರು ಶನಿವಾರ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ವಾರ್ಡುಗಳಲ್ಲಿ ವಿವಿಧ ಕಾಮಗಾರಿಗಳಿಗ ಭೂಮಿ ಪೂಜೆ ನೆರವೇರಿಸಿದರು.

 

ಬಳ್ಳಾರಿ ನಗರದ 23ನೇ ವಾರ್ಡಿನ ಮಹಾನಂದಿಕೊಟ್ಟಂ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಅಂದಾಜು 1.32 ಕೋಟಿ ರೂ.ಗಳ ವೆಚ್ಚದಲ್ಲಿ ಮರು ನಿರ್ಮಾಣ ಮಾಡಲಾಗಿದ್ದು, 5 ನೂತನ ಕೊಠಡಿಗಳನ್ನು ಉದ್ಘಾಟಿಸಿದರು. 5 ಕೊಠಡಿಗಳು, ಒಂದು ಅಡುಗೆ ಕೋಣೆ, ಶೌಚಾಲಯ ಹಾಗೂ ಕಾಂಪೌಂಡ್, ಪೇವರ್ಸ್ ಅಳವಡಿಕೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸುಸಜ್ಜಿತವಾಗಿ ನಿರ್ಮಿಸಲಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ಮೇಯರ್ ಗಾದೆಪ್ಪ, ಆಯುಕ್ತರಾದ ಮಂಜುನಾಥ್, ವಾರ್ಡ್ ಪ್ರಮುಖರಾದ ಸೋಮಶೇಖರ್, ಗೌತಮ್, ಬ್ರಹ್ಮಯ್ಯ, ಹುಲಿಗೆಪ್ಪ, ಕೆಂಚಪ್ಪ, ಮಾಜಿ ಮೇಯರ್ ಎಂ.ರಾಜೇಶ್ವರಿ, ಕಾಂಗ್ರೆಸ್ ಮುಖಂಡರಾದ ಸುಬ್ಬರಾಯುಡು, ಪರಶುರಾಮುಡು, ಥಿಯೇಟರ್ ಶಿವು ಮತ್ತಿತರರು ಹಾಜರಿದ್ದರು.

 

ನಗರದ 35ನೇ ವಾರ್ಡ್ ವ್ಯಾಪ್ತಿಯ ರಾಜೇಶ್ವರಿ ನಗರದಲ್ಲಿ ಅಂದಾಜು ವೆಚ್ಚ 20 ಲಕ್ಷ ರೂ.ಗಳಲ್ಲಿ ಮೇದಾರ ಸಮದಾಯ ಭವನದ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ವಾರ್ಡಿನ ಸದಸ್ಯ ಮಿಂಚು ಶ್ರೀನಿವಾಸ, ಪಾಲಿಕೆಯ ಸದಸ್ಯರಾದ ಕುಬೇರಾ, ಮಾಜಿ ಮೇಯರ್ ರಾಜೇಶ್ವರಿ, ಕಾಂಗ್ರೆಸ್ ಮುಖಂಡರಾದ ಎಲ್.ಮಾರೆಣ್ಣ, ಶೇಖಣ್ಣ, ರಾಮಾಂಜನೇಯ, ದಾನಪ್ಪ, ಬಾನಕ್ಕ, ಪ್ರಸಾದ್, ಮಂಜು, ಶ್ಯಾಮ್, ದೇಗಲಪಾಡು ನಾರಾಯಣ ಸೇರಿದಂತೆ ಹಲವರು ಹಾಜರಿದ್ದರು.



ವಾರ್ಡ್ ಸಂಖ್ಯೆ 3ರ ಭತ್ರಿ ಪ್ರದೇಶದಲ್ಲಿ 20 ಲಕ್ಷ ರೂ.ಗಳ ವೆಚ್ಚದಲ್ಲಿ ಅಂಗನವಾಡಿ ಕೇಂದ್ರ ನಂ.01ರ ನಿರ್ಮಾಣ ಕಾಮಗಾರಿಗೆ ಶಾಸಕ ನಾರಾ ಭರತ್ ರೆಡ್ಡಿಯವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

 

ಈ ಸಂದರ್ಭ ವಾರ್ಡಿನ ಸದಸ್ಯರೂ ಮಾಜಿ ಮೇಯರ್ ಎಂ.ರಾಜೇಶ್ವರಿ, ಕಾಂಗ್ರೆಸ್ ಮುಖಂಡರಾದ ವಿಷ್ಣು ಬೋಯಪಾಟಿ, ಪರಶುರಾಮುಡು, ಸುಬ್ಬರಾಯುಡು, ಭತ್ರಿ ಮಂಜು, ಸೋಮಪ್ಪ ಮತ್ತಿತರರು ಹಾಜರಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ