ನಾಯಕನಹಟ್ಟಿ : ಪ್ರಜಾಪ್ರಭುತ್ವ ಎಂದರೆ ಜನರಿಂದ ಜನರಿಗಾಗಿ ಮತ್ತು ಜನರಿಗೊಸ್ಕರ ಇರುವ ವ್ಯವಸ್ಥೆ ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಕಛೇರಿಗೆ ಅಲೆದಾಡುವ ಬದಲು ಸರ್ಕಾರವೇ ಅವರ ಬಳಿಗೆ ತೆರಳಿ ಅಹವಾಲುಗಳನ್ನು ಸ್ವೀಕರಿಸಿ ಪರಿಹರಿಸುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು.
ಪಟ್ಟಣದ ಶನಿವಾರ ಪ್ರಜಾಸೇವೆ ಅಭಿಯಾನ ಸಸಿಗೆ ನೀರು ಹಾಕುವ ಮೂಲಕ ನಂತರ ಮಾತನಾಡಿದ ಅವರು ಜನರ ಸಮಸ್ಯೆಗಳನ್ನು ಪಾಲಿಸಿ ಪರಿಹರಿಸುವುದಕ್ಕಾಗಿ ಇರಬೇಕು. ಈ ಉದ್ದೇಶದಿಂದಲೆ ಪ್ರಜಾಸೇವ ಅಭಿಯಾನವನ್ನು ಆರಂಭಿಸಲಾಗಿದ್ದು, ಸರ್ಕಾರವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಹಿಂದೆ ಜನರು ಅರ್ಜಿ ಸಲ್ಲಿಸಿದ ಬಳಿಕ ಅದರ ಸ್ಥಿತಿ ಏನಾಯಿತು ಎಂಬುವುದನ್ನು ತಿಳಿದುಕೊಳ್ಳಲು ಕಛೇರಿಗೆ ಅಲೆದಾಡಬೇಕಿತ್ತು. ಆದರೆ ಪ್ರಜಾಸೇವೆ ಇಲಾಖೆಯ ಮೂಲಕ ಜನರಿಂದ ಸ್ವೀಕರಿಸುವ ಪ್ರತಿಯೊಂದು ಅರ್ಜಿಗೂ ನಿಗದಿತ ಅವಧಿಯೊಳಗಡೆ ಸ್ಪಂದನೆ ನೀಡಲಾಗುವುದು. ಅರ್ಜಿ ಪುರಸ್ಕೃತವಾಗಿದೆಯೆ, ತಿರಸ್ಕೃತವಾಗಿದೆಯೆ ಅಥವಾ ಯಾವ ಹಂತದಲ್ಲಿದೆ ಎಂಬುವುದರ ಕುರಿತು ಅರ್ಜಿದಾರರಿಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಪ್ರಜಾಸೇವಾ ಇಲಾಖೆಯನ್ನು ಹೊಸದಾಗಿ ಪರಿಚಯಿಸುವ ಮೂಲಕ ಸರಕಾರವನ್ನೇ ರಾಜ್ಯದ ಜನಸಾಮಾನ್ಯರ ಮನೆ-ಬಾಗಿಲಿಗೆ ಕೊಂಡೊಯ್ದು, ಅವರ ದುಃಖ-ದುಮ್ಮಾನ, ದೂರು, ನೋವುಗಳಿಗೆ ಕಾನೂನಿನ ಚೌಕಟ್ಟಿನಡಿ ಸ್ಥಳದಲ್ಲೇ ಸೂಕ್ತ ಪರಿಹಾರ ಕಲ್ಪಿಸುವ ಜನ ಸ್ನೇಹಿ ಆಡಳಿತಕ್ಕೆ ಹೊಸ ಆಂದೋಲನವನ್ನೇ ಆರಂಭಿಸಿದ್ದಾರೆ. ಇದು ರಾಜ್ಯದ ಜನತೆಯಲ್ಲಿ ಹೊಸ ಆಶಾಕಿರಣ ಮೂಡಿಸಿದೆ ಎಂದರು.
ಸಮಾಜ ಕಟ್ಟಕಡೆಯ ಬಡ ಹಾಗೂ ಸಾಮಾನ್ಯ ಜನರಿಗೆ ಸ್ವಾಭಿಮಾನದ ಬದುಕು ರೂಪಿಸಿಕೊಡುವಂತ ರಾಜ್ಯ ಸರ್ಕಾರ ಸದಾ ಬದ್ದವಾಗಿದೆ. ವಿಶೇಷವಾಗಿ ಬಡವರು ಹಾಗೂ ಸಾಮಾನ್ಯ ಜನರ ಕುಂದು ಕೊರತೆಗಳಿಗೆ ಸ್ಥಳದಲ್ಲೆ ಪರಿಹಾರ ಕಲ್ಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ರಾಜ್ಯ ಸರ್ಕಾರ ಜನ ಸ್ನೇಹಿ ಆಡಳಿತ ನೀಡುವ ಗುರಿಯೊಂದಿಗೆ ಪಂಚ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು. ಇದೀಗ ಪ್ರಜಾಸೇವಾ ಮೂಲಕ ಜನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸುವ ವ್ಯವಸ್ಥೆ ರೂಪಿಸಲಾಗಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಮನ್ವಯದಿಂದ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗಿದ್ದಾರೆ. ಅಧಿಕಾರಿಗಳು ಜನಗಳನ್ನು ಪ್ರತಿದಿನ ಅಲೆದಾಡಿಸಬೇಡಿ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಪ್ರಾಸ್ತವಿಕ ನುಡಿ ಮಾತಾಡಿದ ತಹಶಿಲ್ದಾರ್ ರೆಹನ್ ಪಾಷ ಮಾತನಾಡಿ ಜನರ ಬಳಿಗೆ ಜನಪರ ಆಡಳಿತವನ್ನು ಕೊಂಡೊಯ್ಯುವ ಹಾಗೂ ಸರ್ಕಾರಿ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಜಾಸೇವಾ ಆಂದೋಲನ ಜಾರಿಗೊಳಿಸಿದೆ. ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವುದು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ನಿಗದಿತ ಸಮಯದಲ್ಲಿ ತಲುಪಿಸುವುದೇ ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದರು.
ಪ್ರತಿ ತಿಂಗಳು ನಿಗದಿತ ದಿನ ಮತ್ತು ನಿಗದಿತ ಸ್ಥಳದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಲ್ಪಿಸಲಿದ್ದಾರೆ. ಸಾರ್ವಜನಿಕರು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದರೆ ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉಪಸ್ಥಿತರಾದ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮಂಜುಳ ಶ್ರೀಕಾಂತ್, ಉಪಾಧ್ಯಕ್ಷೆ ಬೋಸಮ್ಮ ಮಂಜುನಾಥ, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ಅನ್ವರ್, ಪಟ್ಟಣ ಪಂಚಾಯಿತಿ ಸದಸ್ಯೆ ಸುನಿತಾ ಮುದಿಯಪ್ಪ, ಈರಮ್ಮ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರುಗಳು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಓ.ಶ್ರೀನಿವಾಸ್, ಚಳ್ಳಕೆರೆ ಡಿವೈಎಸ್‌ಪಿ ಸತ್ಯನಾರಾಯಣ, ನಾಯಕನಹಟ್ಟಿ ಪಿಎಸ್‌ಐ ಪಾಂಡುರ0ಗಪ್ಪ, ಇ.ಓ ಶಶಿಧರ, ಜಾಕಿರ್ ಹುಸೇನ್, ವಿವಿಧ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಗೂ ಇನ್ನೂಇತರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.