LIVE TV StateNationalPoliticsInternationalCrimeEntertainmentSportsEducationFINANCE & TAXATION
Crime News

ಸಹೋದರಿಯರಿಬ್ಬರ ಕೊಲೆ : ಆರೋಪಿ ಪತ್ತೆಗೆ ಬಲೆ ಬೀಸಿದ ಪೊಲೀಸರು

ಬೆಂಗಳೂರು:   ಅಕ್ಕ-ತಂಗಿಯರನ್ನು ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಬೆಚ್ಚಿ ಬೀಳಿಸುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿನಗರದ ಜೆ.ಜೆ. ಕಾಲೋನಿಯಲ್ಲಿ ನಡೆದಿದೆ.

ಚಿಂತಾಮಣಿನಗರದ ಜೆ.ಜೆ. ಕಾಲೋನಿಯ ಶಮಾ(೨೪) ಹಾಗೂ ರೇಷ್ಮಾ(೨೧) ಕೊಲೆಯಾದ ಅಕ್ಕ-ತಂಗಿ ಮಹಿಳೆಯರು. ಮಾಹಿತಿ ತಿಳಿಯುತ್ತಿದ್ದಂತೆ ಚಿಂತಾಮಣಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದರು ಎಂದು ತಿಳಿದುಬಂದಿದೆ

ಮೃತ ಶಮಾ ಅವರ ಪತಿ ಏಜಾಜ್ ಮೇಲೆಯೇ ಕೊಲೆ ಶಂಕೆ ವ್ಯಕ್ತವಾಗಿದೆ. ಪತ್ನಿ ಹಾಗೂ ನಾದಿನಿಯ ಕತ್ತು ಕೊಯ್ದು ಹತ್ಯೆ ಮಾಡಿರುವ ಶಂಕೆ ಇದ್ದು, ಘಟನೆ ಬಳಿಕ ಮೂವರು ಮಕ್ಕಳನ್ನು ಕರೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ.

ಗಾಂಜಾ ಮತ್ತಿನಲ್ಲೇ ಕೃತ್ಯ ನಡೆದಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಚಿಂತಾಮಣಿ ನಗರದಲ್ಲಿ ಗಾಂಜಾ ಮಾರಾಟ ಹೆಚ್ಚಾಗಿದ್ದು, ಪೊಲೀಸರು ಇದನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಚಿಂತಾಮಣಿ ನಗರ ಪೊಲೀಸರು ಆರೋಪಿಯ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದು, ಕೊಲೆಗೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿಜೆಪಿ ಬೃಹತ್ ಸಾರ್ವಜನಿಕ ಸಮಾವೇಶಕ್ಕೆ ಅನುಮತಿ : ಭರದ ಸಿದ್ದತೆವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿಸತತ ಪುನರ್ವಸತಿ ಮತ್ತು ಫಿಸಿಯೋಥೆರಪಿಯ ಮೂಲಕ ರೋಗಿ ಸಂಪೂರ್ಣ ಗುಣಮುಖಅಪಾಯಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯ. ಕಾಡಿನ ಜ್ಞಾನ ನಾಡಿಗೆ ಹಂಚಿದ ಕಾಡಿನ ಸಂತ ತೇಜಸ್ವಿ: ಗೊರೂರು ಶಿವೇಶ್ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ -2026 ಪಾದಯಾತ್ರೆ ಕೇವಲ ರಾಜಕೀಯ ಹೋರಾಟವಲ್ಲ; ಜನರ ಬದುಕಿನ ಪ್ರಶ್ನೆಗಳಿಗಾಗಿ ನಡೆಯುತ್ತಿರುವ ಜನಾಂದೋಲನ ವಿಜಯೇಂದ್ರ‘ಸಾಕ್ಷಿ ‘ ಕಿರುಚಿತ್ರ ಚಿತ್ರೀಕರಣ ಮುಕ್ತಾಯಮಲೆ ಮಾದೇಶ್ವರ ಬೆಟ್ಟದ ದೇವರ ದರ್ಶನ ಪಡೆದ ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷ ಸಿ. ನರೇಂದ್ರಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ