LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವ

ಕರ್ನಾಟಕ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಗೌರವಪೂರ್ಣ ನಮನ ಸಮರ್ಪಣೆ

ಬೆಂಗಳೂರು : ಸರ್ವಶ್ರೇಷ್ಠ ದಾರ್ಶನಿಕ, ಅಪ್ರತಿಮ ಆಡಳಿತಗಾರ, ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಅವರ ದೂರದೃಷ್ಟಿಯುಳ್ಳ ಕ್ರಾಂತಿಕಾರಕ ಆಡಳಿತ ವೈಖರಿಯಿಂದ ಇಂದು ಬೆಂಗಳೂರು ಇಡೀ ಜಗತ್ತಿನ ಗಮನ ಸೆಳೆಯುತ್ತಿದೆ ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸಂದೇಶದಲ್ಲಿ ಬಣ್ಣಿಸಿದ್ದಾರೆ.

 

ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಉತ್ಸವದ ಅಂಗವಾಗಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಗೌರವ ನಮನ ಸಲ್ಲಿಸಿ ಮಾತನಾಡಿದ ಅವರು, ಹಂಪಿಯ ವೈಭವ ಕಂಡು ಬೆರಗಾಗಿದ್ದ ಕೆಂಪೇಗೌಡರು ದೂರದೃಷ್ಟಿಯಿಂದ ನಿರ್ಮಿಸಿರುವ ಬೆಂಗಳೂರು ನಗರ ಇಂದು ಬಹುವಾಗಿ ಬೆಳೆದು ಜಾಗತಿಕ ನಕ್ಷೆಯಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನ ಪಡೆದುಕೊಂಡಿದೆ. ಕೆಂಪೇಗೌಡರು ನಿರ್ಮಿಸಿರುವ ಕೆರೆಗಳು, ದೇವಾಲಯಗಳು, ಕೋಟೆ ಕೊತ್ತಲಗಳು ಇಂದಿಗೂ ನಮ್ಮ ಕಣ್ಣ ಮುಂದಿವೆ. ಬೆಂದಕಾಳೂರು ಎಂಬ ನಾಮದಿಂದ ಕರೆಯುತ್ತಿದ್ದ ನಗರ ಇಂದು ಬೆಂಗಳೂರು ನಗರವಾಗಿ ರೂಪುಗೊಂಡಿದ್ದು, ಕೆಂಪೇಗೌಡರ ದೂರದೃಷ್ಟಿಯ ಫಲ ಎಂದು ಶ್ರೀ ಬಸವರಾಜ ಹೊರಟ್ಟಿ ಅಭಿಮಾನದಿಂದ ತಿಳಿಸಿದರು.



ಕೆಂಪೇಗೌಡರ ಬದುಕು, ಹೋರಾಟ ಅವರ ದೂರದೃಷ್ಟಿಯುಳ್ಳ ಪರಿಣಾಮಕಾರಿ ಆಡಳಿತ ಇಂದಿಗೂ ನಮ್ಮೆಲ್ಲರಿಗೂ ಪ್ರೇರಣೆಯಾಗಿದೆ, ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಹ ಕೆಂಪೇಗೌಡರ ಅನುಯಾಯಿಯಾಗಿದ್ದು, ಅವರಿಂದ ಪ್ರೇರಣೆ ಪಡೆದು ಕೆಂಪೇಗೌಡರ ಕನಸಿನ ಬೆಂಗಳೂರು ನಗರದ ನಿರ್ಮಾಣ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದು ಶ್ಲಾಘನೀಯ, ಕೆಂಪೇಗೌಡರ ಹೆಸರನ್ನು ಸ್ವತಃ ತಮ್ಮ ಮಗನಿಗೆ ನಾಮಕರಣ ಮಾಡಿರುವ ಡಿ.ಕೆ. ಶಿವಕುಮಾರ್, ಕೆಂಪೇಗೌಡರ ಬಗೆಗೆ ತಮಗಿರುವ ಭಕ್ತಿ, ಶ್ರದ್ದೆ ಹಾಗೂ ಬದ್ಧತೆಯನ್ನು ಸಾಕ್ಷೀಕರಿಸಿದ್ದಾರೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅಭಿಮಾನ ವ್ಯಕ್ತಪಡಿಸಿದರು.

 

ಸಾವಿರ ಕೆರೆಗಳ ನಾಡು ಎಂದು ಖ್ಯಾತಿ ಪಡೆದಿರುವ ಬೆಂಗಳೂರನ್ನು ವ್ಯವಸ್ಥಿತ ನಗರವನ್ನಾಗಿ ಬೆಳೆಸುವ ಕನಸು ಹೊತ್ತಿದ್ದ ಕೆಂಪೇಗೌಡರ ದೂರದರ್ಶಿತ್ವ ಇಂದು ನಮಗೆಲ್ಲರಿಗೂ ಮೇಲ್ಪಂಕ್ತಿಯಾಗಿದ್ದು ಕೆಂಪೇಗೌಡರ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಬೇಕಾಗಿರುವುದು ಇಂದಿನ ತುರ್ತು ಅಗತ್ಯವಾಗಿದೆ, ಬೆಂಗಳೂರಿನ ಸೌಂದರ್ಯವನ್ನು ಉಳಿಸಿ ಅಚ್ಚುಕಟ್ಟಾಗಿ ಬೆಳೆಸುವ ಮೂಲಕ ಕೆಂಪೇಗೌಡರ ಕನಸನ್ನು ನನಸನ್ನಾಗಿಸುವುದು ನಾವೆಲ್ಲರೂ ನಾಡಪ್ರಭುಗಳಿಗೆ ಸಲ್ಲಿಸುವ ನೈಜ ಗೌರವವಾಗಿದೆ. ಈ ನಿಟ್ಟಿನಲ್ಲಿ ಇಂದಿನ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು ಮುಂದಡಿ ಇಟ್ಟಿದ್ದಾರೆ ಎನ್ನುವ ವಿಶ್ವಾಸ ನನ್ನದಾಗಿದೆ ಎಂದು ಬಸವರಾಜ ಹೊರಟ್ಟಿ ನುಡಿದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ