LIVE TV StateNationalPoliticsCrimeEntertainmentSportsEducationFINANCE & TAXATION
State News

ರಾಜಾಜಿನಗರದ ಇಎಸ್ಐಸಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

ಬೆಂಗಳೂರು: ಇಎಸ್‌ಐಸಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ರಾಜಾಜಿನಗರ, ಬೆಂಗಳೂರಿನಲ್ಲಿ “ಮುಖವಾಡದ ಹಿಂದೆ: ವೈದ್ಯರಿಗೆ ಆರೈಕೆ ನೀಡುವವರು ಯಾರು?” ಎಂಬ ರಾಷ್ಟ್ರೀಯ ಧ್ಯೇಯವಾಕ್ಯದಡಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಸಾಂಸ್ಕೃತಿಕ ಸಮಿತಿಯಿಂದ ಆಯೋಜಿಸಲಾದ ಈ ಕಾರ್ಯಕ್ರಮ ಸಮಾಜ ಸೇವೆಯಲ್ಲಿ ವೈದ್ಯರು ನೀಡುತ್ತಿರುವ ಅಮೂಲ್ಯ ಕೊಡುಗೆಯನ್ನು ಗೌರವಿಸುವ ಜೊತೆಗೆ, ವೈದ್ಯರ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಆರೋಗ್ಯದ ಮಹತ್ವವನ್ನು ಒತ್ತಿಹೇಳಿತು.

ಈ ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ವೈದ್ಯರು, ಅಧ್ಯಾಪಕರು, ಹಿರಿಯ, ಕಿರಿಯ ರೆಸಿಡೆಂಟ್‌ಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು, ವೈದ್ಯಾಧಿಕಾರಿಗಳು ಹಾಗೂ ಇತರ ಆರೋಗ್ಯ ವೃತ್ತಿಪರರು ಉಪಸ್ಥಿತರಿದ್ದರು. ಮನಮೋಹಕ ಸಾಂಸ್ಕೃತಿಕ ನೃತ್ಯ ಪ್ರದರ್ಶನ ಕಾರ್ಯಕ್ರಮಕ್ಕೆ ಸೊಗಸಾದ ಹಾಗೂ ಉತ್ಸಾಹಭರಿತ ಆರಂಭವನ್ನು ನೀಡಿತು.

news_1783234520_1_857.webp

 

ಇಎಸ್‌ಐಸಿ ದಕ್ಷಿಣ ವಲಯದ ವಲಯ ವೈದ್ಯಕೀಯ ಆಯುಕ್ತರಾದ ಡಾ. ಅಶಿತ್ ಮುಲ್ಲಿಕ್ ಮಾತನಾಡಿ,  ವೈದ್ಯರು ಸಮರ್ಪಣೆಯಿಂದ ಸೇವೆ ಸಲ್ಲಿಸುತ್ತಾರೆ. ಕರುಣೆ, ಸ್ಥೈರ್ಯ ಮತ್ತು ಮಾನವಸೇವೆಯತ್ತ ಅವರ ಅಚಲ ಬದ್ಧತೆ ಪ್ರಸಂಶನೀಯ. ವೈದ್ಯಕೀಯ ವೃತ್ತಿಯು ಸೇವಾ ಮನೋಭಾವ, ಸಹಾನುಭೂತಿ, ನೈತಿಕತೆ ಹಾಗೂ ನಿರಂತರ ಕಲಿಕೆಯ ತತ್ವಗಳ ಮೇಲೆ ನಿರ್ಮಿತವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿಯಾಗಿ ಆಯೋಜಿಸಲಾದ ಪ್ರಬಂಧ, ಗಾಯನ ಸ್ಪರ್ಧೆ ಹಾಗೂ ಕ್ರೀಡೆಗಳ ವಿಜೇತರನ್ನು ಸನ್ಮಾನಿಸಲಾಯಿತು.

ಡೀನ್‌ ಡಾ. ಜೀತೇಂದ್ರ ಕುಮಾರ್, ವೈದ್ಯಕೀಯ ಅಧೀಕ್ಷಕರಾದ ಡಾ. ವಿಜಯಕುಮಾರಿ ವಿ., ಉಪ ನಿರ್ದೇಶಕರಾದ ಬೃಜೇಶ್ ಮೀನಾ, ಹಾಗೂ ಶೈಕ್ಷಣಿಕ ನೋಂದಣಾಧಿಕಾರಿ ಡಾ. ಸುಚಿತ್ರ ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆಆರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ತಡೆಗಟ್ಟಬಹುದು-ಡಾ. ನಿಗ್ಗುಡಗಿವಿಜಯರಾಘವೆಂದ್ರ ಅಭಿನಯದ “ರುದ್ರಾಭಿಷೇಕಂ’ ಚಿತ್ರದ ಟ್ರೈಲರ್ ಬಿಡುಗಡೆ ಪಠ್ಯದ ಜೊತೆಗೆ ಮೌಲ್ಯವರ್ಧಿತ ಕೋರ್ಸಗಳ ಆಯ್ಕೆ ಬಹುಮುಖ್ಯ-ಯಡ್ರಾಮಿ