LIVE TV StateNationalPoliticsCrimeEntertainmentSportsEducationFINANCE & TAXATION
Districts Bellary

ಹೂಡಿಕೆ ಮಾಡುವ ಮುನ್ನ ಅರಿವು ಅಗತ್ಯ: ತಜ್ಞರ ಸಲಹೆ

ಶ್ರೀ ಮೇಧಾ ಪದವಿ ಕಾಲೇಜಿನಲ್ಲಿ ICAI ಬಳ್ಳಾರಿ ಶಾಖೆಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

ಬಳ್ಳಾರಿ: ಹೂಡಿಕೆ ಮಾಡುವ ಮುನ್ನ ಅದರ ಸಂಪೂರ್ಣ ಮಾಹಿತಿ ಪಡೆದುಕೊಳ್ಳುವುದು ಅಗತ್ಯ. ಆರ್ಥಿಕ ಲಾಭದ ಆಸೆಗೆ ಒಳಗಾಗಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳದೆ, ತಜ್ಞರ ಸಲಹೆ ಪಡೆದು ಹೂಡಿಕೆ ಮಾಡಬೇಕು ಎಂದು ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯ (ICAI) ಬಳ್ಳಾರಿ ಶಾಖೆಯ ಪದಾಧಿಕಾರಿಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳು ಸಲಹೆ ನೀಡಿದರು.

 

ICAI ಬಳ್ಳಾರಿ ಶಾಖೆಯ ವತಿಯಿಂದ ನಗರದ ಶ್ರೀ ಮೇಧಾ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮದಲ್ಲಿ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಭಾಗವಹಿಸಿ ಹೂಡಿಕೆ, ಉಳಿತಾಯ ಮತ್ತು ಹಣಕಾಸು ನಿರ್ವಹಣೆಯ ಕುರಿತು ಮಾಹಿತಿ ಪಡೆದುಕೊಂಡರು.

 

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕಿರಣ್ ಅವರು ಮಾತನಾಡಿ, ವಿವಿಧ ಹೂಡಿಕೆ ಅವಕಾಶಗಳು, ಹೂಡಿಕೆಯ ಉದ್ದೇಶ, ಸೂಕ್ತ ಹೂಡಿಕೆ ವಿಧಾನಗಳು ಹಾಗೂ ದೀರ್ಘಾವಧಿಯಲ್ಲಿ ಸಂಪತ್ತು ನಿರ್ಮಿಸಿಕೊಳ್ಳುವ ಮಾರ್ಗಗಳ ಕುರಿತು ವಿವರಿಸಿದರು. ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಆರ್ಥಿಕ ಭದ್ರತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಚಿಕ್ಕ ವಯಸ್ಸಿನಿಂದಲೇ ಹೂಡಿಕೆಯ ಬಗ್ಗೆ ಅರಿವು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

 

ICAI ಬಳ್ಳಾರಿ ಶಾಖೆಯ ಅಧ್ಯಕ್ಷರಾದ CA ಪುರುಷೋತ್ತಮ್ ರೆಡ್ಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಹೂಡಿಕೆ ಮಾಡುವ ಆತುರದಲ್ಲಿ ಮೋಸಕ್ಕೆ ಒಳಗಾಗಬಾರದು ಎಂದು ಎಚ್ಚರಿಸಿದರು. ಯಾವುದೇ ಹೂಡಿಕೆ ಮಾಡುವ ಮೊದಲು ಅದರ ಸಾಧಕ-ಬಾಧಕಗಳು, ಅಪಾಯಗಳು ಹಾಗೂ ನಿಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು. ಅಗತ್ಯವಿದ್ದಲ್ಲಿ ತಜ್ಞರು ಅಥವಾ ಮಾರ್ಗದರ್ಶಕರ ಸಲಹೆ ಪಡೆಯಬೇಕು ಎಂದು ಹೇಳಿದರು.

 

ಕಾರ್ಯಕ್ರಮದ ಮುಖ್ಯ ಅತಿಥಿ ರಾಮಕಿರಣ್ ಅವರು ಮಾತನಾಡಿ, ವಿದ್ಯಾರ್ಥಿಗಳು ಇಂದಿನಿಂದಲೇ ಉಳಿತಾಯ ಮತ್ತು ಹೂಡಿಕೆಯ ಅಭ್ಯಾಸ ಬೆಳೆಸಿಕೊಂಡು ಭವಿಷ್ಯದಲ್ಲಿ ಆರ್ಥಿಕವಾಗಿ ಸದೃಢರಾಗಬೇಕು ಎಂದು ಕರೆ ನೀಡಿದರು. ಯುವಜನರಲ್ಲಿ ಹಣಕಾಸಿನ ಅರಿವು ಮೂಡಿಸುವ ನಿಟ್ಟಿನಲ್ಲಿ ICAI ಬಳ್ಳಾರಿ ಶಾಖೆ ಕೈಗೊಳ್ಳುತ್ತಿರುವ ಕಾರ್ಯವನ್ನು ಶ್ಲಾಘಿಸಿ ಧನ್ಯವಾದ ಸಲ್ಲಿಸಿದರು.

 

ಕಾರ್ಯಕ್ರಮದಲ್ಲಿ ಶ್ರೀ ಮೇಧಾ ಪದವಿ ಕಾಲೇಜಿನ ಉಪನ್ಯಾಸಕರು ಸಕ್ರಿಯವಾಗಿ ಭಾಗವಹಿಸಿ ಹಣಕಾಸು ನಿರ್ವಹಣೆ, ಉಳಿತಾಯ ಮತ್ತು ಹೂಡಿಕೆಯ ಕುರಿತು ಮಾಹಿತಿ ಪಡೆದುಕೊಂಡರು.

 

CA ಶರಣ್ ಪಾಟೀಲ್ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಮಾಜಿ ಅಧ್ಯಕ್ಷ CA ಗಜರಾಜ್, ಖಜಾಂಚಿ CA ವಿಶ್ವನಾಥ ಆಚಾರಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ CA ಹನುಮಂತರೆಡ್ಡಿ, ಸಹಸದಸ್ಯರಾದ CA ಜಿತೇಂದ್ರ ಸುತಾರ್ ಹಾಗೂ CA ವೆಂಕಟೇಶ್ ಗುಂಡ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯ ದಶಮಿಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ದಸರಾ ಹಾಗೂ ಆಯುಧ ಪೂಜೆಜಾತಿಭೇದವಿಲ್ಲದೆ ದಲಿತರ ಮನೆಯಲ್ಲಿ ಊಟ ಸವಿದ ಡಾ. ಬಿ. ಯೋಗೇಶ್ ಡಿಸ್ಕವರಿ ವಾಹಿನಿಯಲ್ಲಿ ಕೆಐಐಟಿ ಸಾಧನೆ ಬಣ್ಣನೆ ಕನ್ನಡಿಗರು ವಿಶಾಲತೆ, ಸಾಮರಸ್ಯ ಉಳ್ಳವರಾಗಿರುವುದರಿಂದಲೇ ಕನ್ನಡಕ್ಕೆ ಕಂಟಕ!ಹಾಡಿನ ಚಿತ್ರೀಕರಣದೊಂದಿಗೆ ‘ಚಂದ್ರಗಿರಿ’ ಚಿತ್ರೀಕರಣ ಮುಕ್ತಾಯಸರ್ವೋದಯ ಮಹಾವಿದ್ಯಾಲಯದ ಸೌಕರ್ಯ, ಶೈಕ್ಷಣಿಕ ಸಾಧನೆಗೆ ದಾವಣಗೆರೆ ವಿವಿ ಉಪಕುಲಪತಿ ಮೆಚ್ಚುಗೆಬಡತನ ನಿರ್ಮೂಲನೆಗಾಗಿ ಅಂತರರಾಷ್ಟ್ರೀಯ ದಿನಾಚರಣೆ ಬೆಂಗಳೂರಿನಲ್ಲಿ ಐಸಿಎಸ್ಐ ಇನ್ವೆಸ್ಟ್ ಇಂಡಿಯಾ ಶೃಂಗಸಭೆ ಆಯೋಜನೆಎಚ್.ಡಿ. ಕುಮಾರಸ್ವಾಮಿ ವಿವಾದಾತ್ಮಕ ಮಾತುಗಳಿಗೆ ಖಂಡನೆ, ಕ್ಷಮೆಯಾಚನೆಗೆ ಆಗ್ರಹ: ರಾಷ್ಟ್ರೀಯ ಅಂಬೇಡ್ಕರ್ ಸೇನೆಯ ಅರ್ಜುನ್ ಗೋಪಾಲಯ್ಯ