LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಹೊಸ ವರ್ಷಾಚರಣೆ : ಪೊಲೀಸರು ಫುಲ್ ಅಲರ್ಟ್

ಬೆಂಗಳೂರು: ಹೊಸ ವರ್ಷ ಬರಮಾಡಿಕೊಳ್ಳಲು ಒಂದೇ ದಿನ  ಬಾಕಿ ಉಳಿದಿದೆ. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬೆಂಗಳೂರು ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ.

ನಗರದಾಧ್ಯಂತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಕೋರಮಂಗಲ , ಇಂದಿರಾ ನಗರ, ಎಂ.ಜಿ ರೋಡ್ ಹೀಗೆ ಪಾರ್ಟಿ ಹಾಟ್ಸ್ಪಾಟ್ಗಳಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ. ಈ ಮಧ್ಯೆ ಪಾರ್ಟಿ ಪ್ರಿಯರಿಗೆ ನಮ್ಮ ಮೆಟ್ರೋ ಸಿಹಿ ಸುದ್ದಿ ನೀಡಿದೆ. ಡಿಸೆಂಬರ್ 31 ರಾತ್ರಿ ಮತ್ತು ಜನರವರಿ 1ರ ಬೆಳಗ್ಗೆ ವಿಶೇಷ ವೇಳಾಪಟ್ಟಿಯನ್ನ ಬಿಡುಗಡೆ ಮಾಡಿದೆ. ಹೊಸ ವರ್ಷಾಚರಣೆಯ ವೇಳೆ ಪ್ರಯಾಣಿಕರಿಗೆ ಅನುಕೂಲವಾಗಲು ನೇರಳೆ, ಹಸಿರು ಮತ್ತು ಹಳದಿ ಮಾರ್ಗಗಳಲ್ಲಿ ಸೇವಾ ಸಮಯವನ್ನ ವಿಸ್ತರಿಸಿದೆ.

ಕೆಲವು ಮಾರ್ಗಗಳಲ್ಲಿ ಕೊನೆಯ ರೈಲುಗಳು ಬೆಳಗಿನ ಜಾವ 3.10 ರವರೆಗೆ ಚಲಿಸುತ್ತವೆ. ಎಂಜಿ ರಸ್ತೆ ನಿಲ್ದಾಣವು ರಾತ್ರಿ 10 ರಿಂದ ಮುಚ್ಚಲಿದೆ. ಮೆಜೆಸ್ಟಿಕ್ನಲ್ಲಿ ರಾತ್ರಿ 2.45ಕ್ಕೆ ಕೊನೆಯ ರೈಲು ಇರಲಿದೆ. ಜನ ಹೆಚ್ಚು ಸೇರುವುದರಿಂದ ಡಿಸೆಂಬರ್ 31ರ ರಾತ್ರಿ 11 ಗಂಟೆಯ ನಂತರ ಕೌಂಟರ್ನಲ್ಲಿ ಟಿಕೆಟ್ ಸಿಗುವುದಿಲ್ಲ. ಈ ಸಮಯದಲ್ಲಿ ಟ್ರಿನಿಟಿ ಹಾಗೂ ಕಬ್ಬನ್ ಪಾರ್ಕ್ ಸ್ಟೇಷನ್ನಲ್ಲಿ ಕೌಂಟರ್ ಕ್ಲೋಸ್ ಆಗಲಿದ್ದು, ಕ್ಯೂ ಆರ್ ಕೋಡ್ ಬಳಸಿ ಪ್ರಯಾಣ ಮಾಡಬೇಕು ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ.

ನೇರಳೆ ಮಾರ್ಗ ವೈಟ್ಫೀಲ್ಡ್ನಿಂದ ಚಲ್ಲಘಟ್ಟಕ್ಕೆ ಮತ್ತು ಚಲ್ಲಘಟ್ಟದಿಂದ ವೈಟ್ಫೀಲ್ಡ್ಗೆ ಕೊನೆಯ ರೈಲುಗಳು ಕ್ರಮವಾಗಿ ಬೆಳಿಗ್ಗೆ 1.45 ಮತ್ತು ಬೆಳಿಗ್ಗೆ 2 ಗಂಟೆಗೆ ಹೊರಡುತ್ತವೆ. ಗ್ರೀನ್ ಲೈನ್ನಲ್ಲಿ, ಮಾದಾವರ ಮತ್ತು ಸಿಲ್ಕ್ ಇನ್ಸ್ಟಿಟ್ಯೂಟ್ ನಡುವಿನ ಕೊನೆಯ ಸೇವೆಗಳು ಎರಡೂ ದಿಕ್ಕುಗಳಲ್ಲಿ ಬೆಳಿಗ್ಗೆ 2 ಗಂಟೆಗೆ ಹೊರಡುತ್ತವೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ