LIVE TV StateNationalPoliticsCrimeEntertainmentSportsEducationFINANCE & TAXATION
Districts Bellary

ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

ಪ್ರಜಾಸೇವೆ ಆಂದೋಲನ’ಕ್ಕೆ ಚಾಲನೆ ನೀಡಿ ಶಾಸಕಿ ಈ.ಅನ್ನಪೂರ್ಣ ಅಭಿಮತ

ಬಳ್ಳಾರಿ : ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳನ್ನು ನೇರವಾಗಿ ಜನರ ಮನೆಬಾಗಿಲಿಗೆ ತಲುಪಿಸುವ ಹಾಗೂ ಸಾರ್ವಜನಿಕರ ಕುಂದುಕೊರತೆಗಳಿಗೆ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ಸಂಡೂರು ತಾಲ್ಲೂಕಿನ ವಿಠಲಾಪುರ ಗ್ರಾಮದಲ್ಲಿ ತಾಲ್ಲೂಕು ಮಟ್ಟದ ‘ಪ್ರಜಾಸೇವೆ ಆಂದೋಲನ’ ಕಾರ್ಯಕ್ರಮ ನಡೆಯಿತು.

            ತೋರಣಗಲ್ಲು ಹೋಬಳಿ ವ್ಯಾಪ್ತಿಯ ವಿಠಲಾಪುರದಲ್ಲಿ ಸಂಡೂರು ತಾಲ್ಲೂಕು ಆಡಳಿತ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಸಂಡೂರು ಶಾಸಕರಾದ ಈ.ಅನ್ನಪೂರ್ಣ ಅವರು ಚಾಲನೆ ನೀಡಿದರು.

news_1789880702_0_304.webp

 

            

ಬಳಿಕ ಮಾತನಾಡಿದ ಅವರು, ಸರ್ಕಾರ ಮತ್ತು ಸಾರ್ವಜನಿಕರ ನಡುವಿನ ಅಂತರವನ್ನು ಕಡಿಮೆ ಮಾಡಲು ಈ ಆಂದೋಲನ ಆರಂಭಿಸಲಾಗಿದೆ. ಮಾಹಿತಿ ಕೊರತೆಯಿಂದಾಗಿ ಹಲವು ಅರ್ಹ ಫಲಾನುಭವಿಗಳು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಕೆಲವರು ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲು ಹಿಂಜರಿಯುತ್ತಾರೆ. ಅಂತಹವರಿಗೆ ನೆರವಾಗಲು ಮತ್ತು ನಾಗರಿಕರೊಂದಿಗೆ ನೇರ ಸಂಪರ್ಕ ಸಾಧಿಸಲು ಪ್ರಜಾಸೇವೆ ಆಂದೋಲನ ಪರಿಣಾಮಕಾರಿ ವೇದಿಕೆಯಾಗಿದೆ ಎಂದರು.

            ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಮಾತನಾಡಿ, ಸಾರ್ವಜನಿಕರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಶೀಘ್ರವಾಗಿ ಬಗೆಹರಿಸುವುದೇ ಈ ಆಂದೋಲನದ ಪ್ರಮುಖ ಉದ್ದೇಶ. ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಇದ್ದು ಜನರ ಅಹವಾಲುಗಳನ್ನು ಸ್ವೀಕರಿಸಿ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

            ಇದೇ ಸಂದರ್ಭದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ವಿಠಲಾಪುರ ಮತ್ತು ಸುತ್ತಮುತ್ತಲಿನ ಗ್ರಾಮಗಳ ನೂರಾರು ಸಾರ್ವಜನಿಕರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಶಾಸಕರು ಹಾಗೂ ಅಧಿಕಾರಿಗಳ ಮುಂದಿಟ್ಟರು.

news_1789880702_2_345.webp

 

            ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಪ್ರತ್ಯೇಕ ಕೌಂಟರ್‌ಗಳನ್ನು ತೆರೆದು, ಸಾರ್ವಜನಿಕರಿಗೆ ಯೋಜನೆಗಳು, ಸೌಲಭ್ಯಗಳು ಹಾಗೂ ಅರ್ಜಿ ಸಲ್ಲಿಕೆ ಕುರಿತು ಮಾಹಿತಿ ನೀಡಲಾಯಿತು. ಸ್ಥಳದಲ್ಲೇ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಹಲವು ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣವೇ ಪರಿಹಾರ ಒದಗಿಸಿದರು.

            ಈ ವೇಳೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಸಂಡೂರು ತಹಶೀಲ್ದಾರ್ ಜಿ. ಅನಿಲ್‌ಕುಮಾರ್, ಸಂಡೂರು ತಾಪಂ ಇಒ ಮಡಗಿನ ಬಸಪ್ಪ ಸೇರಿಂದತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿ- ಸಿಬ್ಬಂದಿ ಹಾಗೂ ಸಾರ್ವಜನಿಕರು, ಇನ್ನೀತರರು ಹಾಜರಿದ್ದರು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆಆರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ತಡೆಗಟ್ಟಬಹುದು-ಡಾ. ನಿಗ್ಗುಡಗಿವಿಜಯರಾಘವೆಂದ್ರ ಅಭಿನಯದ “ರುದ್ರಾಭಿಷೇಕಂ’ ಚಿತ್ರದ ಟ್ರೈಲರ್ ಬಿಡುಗಡೆ ಪಠ್ಯದ ಜೊತೆಗೆ ಮೌಲ್ಯವರ್ಧಿತ ಕೋರ್ಸಗಳ ಆಯ್ಕೆ ಬಹುಮುಖ್ಯ-ಯಡ್ರಾಮಿ