LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಒಂದು ದಿನದ ಕಾರ್ಯಾಗಾರ

ದಾವಣಗೆರೆ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆ ಇಲ್ಲಿ ಪರಿಸರ ವಿಜ್ಞಾನ, ಸಸ್ಯಶಾಸ್ತ್ರ ಹಾಗೂ ಪ್ರಾಣಿಶಾಸ್ತ್ರ ವಿಭಾಗಗಳು ಹಾಗೂ ಕಾಲೇಜಿನ ಐ.ಕ್ಯೂ. ಎ. ಸಿ. ವತಿಯಿಂದ ಕ್ಲೈಮೇಟ್ ಚೇಂಜ್ ಅಂಡ್ ಬಯೋ ಡೈವರ್ಸಿಟಿ: ದ ಲೈಫ್ ಸೈನ್ಸ್ ಪರ್ಸ್ ಪೆಕ್ಟೀವ್ ಹೆಸರಿನ  ಒಂದು ದಿನದ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ  ಪ್ರೊ.ಬಸವರಾಜ ಸಿ. ತಹಸಿಲ್ದಾರ್ ಅಧ್ಯಕ್ಷತೆ ವಹಿಸಿದ್ದರು. ದಾವಣಗೆರೆ ವಿಶ್ವವಿದ್ಯಾನಿಲಯದ  ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಎಂ. ಗೋವಿಂದಪ್ಪ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಗಿಡಮರಗಳನ್ನು ನೆಡುವುದರ ಮೂಲಕ ಪರಿಸರದ ಸಮತೋಲನವನ್ನು ಕಾಪಾಡಲು ಪ್ರಮುಖ ಪಾತ್ರವನ್ನು ವಹಿಸಬೇಕೆಂದು ಕರೆ ನೀಡಿದರು. ವಿಶೇಷ ಆಹ್ವಾನಿತರಾಗಿ ದಾವಣಗೆರೆ  ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ಪರಿಸರ ವಿಜ್ಞಾನ ವಿಭಾಗದ ಸಂಯೋಜಕರಾದ ಡಾ. ಪ್ರಮೋದ್ ಎಸ್. ಎನ್. ರವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

ಡಾ. ಗಿರೀಶ್ ಕೆ.ಜಿ. ನಿರ್ದೇಶಕರು ಪ್ರಾಣ ಸಂಸ್ಥೆ  ಸಾಗರ ಹಾಗೂ ಡಾ. ನಿಂಗರಾಜ್ ಮಾಕನೂರು ಸಸ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರು ಆರ್. ಟಿ. ಇ. ಎಸ್. ಕಲಾ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ರಾಣೆಬೆನ್ನೂರು ಇವರು ಸಂಪನ್ಮೂಲ ವ್ಯಕ್ತಿಗಳಾಗಿ ವಿಶೇಷ ಉಪನ್ಯಾಸಗಳನ್ನು ನೀಡಿದರು.

ಪರಿಸರ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ನಾಗೇಂದ್ರ ನಾಯ್ಕ್ ಕೆ., ಪ್ರಾಣಿ ಶಾಸ್ತ್ರ ವಿಭಾಗದ ಸಹ ಪಾಧ್ಯಾಪಕರಾದ ಡಾ. ಉಮಾದೇವಿ ಸಿ.ಜೆ. ಹಾಗೂ ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ತೇಜಸ್ವಿನಿ ರಂಗಪ್ಪ ರೆಡ್ಡಿ ಕಾರ್ಯಗಾರದಲ್ಲಿ  ಹಾಜರಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ