LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಮೆಟ್ರೋ ನಿಲ್ದಾಣಗಳಲ್ಲಿ ಕೂಡಲೇ ಅಮುಲ್ ಮಳಿಗೆಗಳನ್ನು ತೆರವುಗೊಳಿಸಲು ಆಪ್ ಆಗ್ರಹ

ಬೆಂಗಳೂರು : ಕರ್ನಾಟಕ ರಾಜ್ಯದ  ರೈತರುಗಳ ಹಾಗೂ ಸಮಸ್ತ ಕನ್ನಡಿಗರ ಹೆಮ್ಮೆಯ ನಂದಿನಿ ಉತ್ಪನ್ನಗಳಿಗೆ ಸೆಡ್ಡು ಹೊಡೆಯಲು  ಹಿಂಭಾಗಲಿನಿಂದ ಪ್ರವೇಶ ಮಾಡುತ್ತಿರುವ ಅನ್ಯ ರಾಜ್ಯದ ಅಮುಲ್ ಹಾಲು ಉತ್ಪನ್ನಗಳನ್ನು  ಮೆಟ್ರೋ ನಿಲ್ದಾಣಗಳಲ್ಲಿ ಮಾರಾಟ ಮಾಡಲು ಅನುವು ಮಾಡಿಕೊಟ್ಟಿರುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಕನ್ನಡಿಗರ ಆಕ್ರೋಶಕ್ಕೆ ತುತ್ತಾಗುವ ಮೊದಲೇ ಮೆಟ್ರೋ ನಿಗಮದವರು ಕೂಡಲೇ ಅಮುಲ್ ಉತ್ಪನ್ನಗಳನ್ನು ತೆರವುಗೊಳಿಸಬೇಕೆಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಮಾಧ್ಯಮ ಸಂಚಾಲಕ ಅನಿಲ್ ನಾಚಪ್ಪ ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರವನ್ನು ಆಗ್ರಹ ಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ 1ಕೋಟಿ  ಲೀಟರ್ ಗೆ  ನಂದಿನಿ ಹಾಲಿನ ಮಾರಾಟವನ್ನು ಹೆಚ್ಚಳ ಮಾಡುತ್ತೇವೆಂದು ಒಂದು ಕಡೆ ಹೇಳಿದರೆ ಮತ್ತೊಂದು ಕಡೆ  ಹಿಂಬಾಗಿಲಿನಿಂದ  ಅನ್ಯ ರಾಜ್ಯದ  ಹಾಲು ಹಾಗೂ ಉತ್ಪನ್ನಗಳನ್ನು ಮಾರಾಟ  ಮಾಡಲು ಮುಂದಾಗಿರುವುದು  ಹಾಗೂ ಅನವಶ್ಯಕ  ಪೈಪೋಟಿಗೆ  ಕಾರಣವಾಗಿರುವುದು ಇವರ ದ್ವಂದ್ವ ನೀತಿಗೆ ಹಿಡಿದ ಕನ್ನಡಿ ಯಾಗಿದೆ. ಇದರಿಂದಾಗಿ ರಾಜ್ಯದ ರೈತರಗಳು ಮುಂದಿನ ದಿವಸಗಳಲ್ಲಿ  ರಾಜ್ಯದ ಬಡ ರೈತರು ತಾವು ಪ್ರತಿ ದಿವಸ ಉತ್ಪಾದಿಸುವ ಹಾಲಿನ ಸಮೇತ   ಬೀದಿಗೆ ಬೀಳುವ ಪರಿಸ್ಥಿತಿಗೆ ತಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ.



ಕೂಡಲೇ ಮೆಟ್ರೋ ಅಧಿಕಾರಿಗಳು ತಮ್ಮ ವ್ಯಾಪಾರಿ ಬುದ್ದಿಯನ್ನು ಬದಿಗೊತ್ತಿ ಕನ್ನಡಿಗರ ಹಾಗೂ ರಾಜ್ಯದ ರೈತರುಗಳ ಅಸ್ಮಿತೆಯನ್ನು ಪ್ರಶ್ನಿಸುವಂತಹ  ಇಂತಹ ಕುಕೃತ್ಯಗಳಿಗೆ ಕೈ ಹಾಕಿದಲ್ಲಿ ಆಮ್ ಆದ್ಮಿ ಪಕ್ಷ  ರಾಜ್ಯದ ರೈತರುಗಳ ಸಮೇತ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಅನಿಲ್ ನಾಚಪ್ಪ ಎಚ್ಚರಿಸಿದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ