LIVE TV StateNationalPoliticsCrimeEntertainmentSportsEducationFINANCE & TAXATION
Districts Bangalore

ನವ ಪ್ರವೇಶಿತ ಪ್ರಥಮ ಪದವಿ ವಿದ್ಯಾರ್ಥಿನಿಯರಿಗೆ ಅಭಿಶಿಕ್ಷಣ ಕಾರ್ಯಕ್ರಮ ಆಯೋಜನೆ

 

ಬೆಂಗಳೂರು : ನಗರದ ಮಹಾರಾಣಿ ಕ್ಲಸ್ಟ‌ರ್ ವಿಶ್ವವಿದ್ಯಾಲಯದ ನವ ಪ್ರವೇಶಿತ ಪ್ರಥಮ ಪದವಿ ವಿದ್ಯಾರ್ಥಿನಿಯರಿಗೆ ಅಭಿಶಿಕ್ಷಣ ಕಾರ್ಯಕ್ರಮವನ್ನು ನಾಳೆ ಬೆಳಗ್ಗೆ ಶುಕ್ರವಾರದಂದು 10.30ಕ್ಕೆ  ಮಹಾರಾಣಿ ಕಲಾ ಮಹಾವಿದ್ಯಾಲಯದ ಪ್ರಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕುಲಸಚಿವರು (ಮೌಲ್ಯಮಾಪನ) ಪ್ರೊ. ವೈ. ರಮೇಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ನಂತರ ಮಾತನಾಡಿ ಅವರು ಅಭಿಶಿಕ್ಷಣ ಕಾರ್ಯಕ್ರಮವು ಮಹಾರಾಣಿ ಕ್ಲಸ್ಟರ್ ವಿವಿಯ ಹೊಸದಾಗಿ ಪ್ರವೇಶ ಪಡೆದ ಪ್ರಥಮ ಪದವಿ ವಿದ್ಯಾರ್ಥಿನಿಯರನ್ನು ವಿಶ್ವವಿದ್ಯಾಲಯದ ಶೈಕ್ಷಣಿಕ ವಾತಾವರಣಕ್ಕೆ ಪರಿಚಯಿಸುವ ಪರಿಚಯ ಮತ್ತು ಮಾರ್ಗದರ್ಶನ ಮಾಡುವ ಕಾರ್ಯಕ್ರಮವಾಗಿದೆ ಎಂದರು.

 

ಪ್ರಮುಖವಾಗಿ ವಿದ್ಯಾರ್ಥಿನಿಯರಿಗೆ ವಿವಿಯ ಶೈಕ್ಷಣಿಕ ವ್ಯವಸ್ಥೆ ಮತ್ತು ನಿಯಮಾವಳಿಗಳ ಪರಿಚಯ, ವಿವಿಧ ವಿಭಾಗಗಳು, ಪಠ್ಯಕ್ರಮಗಳು, ಪರೀಕ್ಷಾ ಪದ್ಧತಿ ಹಾಗೂ ಗ್ರಂಥಾಲಯ, ಪ್ರಯೋಗಾಲಯ, ಕ್ರೀಡೆ ಹಾಗೂ ಇತರ ಸೌಲಭ್ಯಗಳ ಬಳಕೆಯ

ಪರಿಚಯಿಸುವುದು, ಹಾಗೆ ವಿದ್ಯಾರ್ಥಿನಿಯರಲ್ಲಿ ಆತ್ಮವಿಶ್ವಾಸ, ನಾಯಕತ್ವ ಮತ್ತು ಸಂವಹನ ಕೌಶಲ್ಯ ಬೆಳೆಸುವುದು. ಉನ್ನತ ಶಿಕ್ಷಣ ಮತ್ತು ಉದ್ಯೋಗಾವಕಾಶಗಳ ಕುರಿತು ಮಾರ್ಗದರ್ಶನ ಇನ್ನು ವಿವಿಯ ಶಿಸ್ತು, ಮೌಲ್ಯಗಳು ಮತ್ತು ಸಂಸ್ಕೃತಿಯನ್ನು

ವಿದ್ಯಾರ್ಥಿನಿಯರ ಸುರಕ್ಷತೆ, ಸಮಾನತೆ, ಮಹಿಳಾ ಸಬಲೀಕರಣ ಮತ್ತಿತರರು ವಿಷಯಗಳ ಬಗ್ಗೆ ಅರಿವು ಮೂಡಿಸುವುದಾಗಿದೆ.

 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌರವಾನ್ವಿತ ಕುಲಪತಿಗಳಾದ ಡಾ. ಅಶೋಕ ಎಸ್.ಬಿ. ವಹಿಸಲಿದ್ದು, ಘನ ಉಪಸ್ಥಿತಿಯಲ್ಲಿ ಆಡಳಿತ ಕುಲಸಚಿವೆ ಶ್ರೀಮತಿ ಸೀಮಾ ಬಿ. ನಾಯಕ್, ಮೌಲ್ಯಮಾಪನ ಕುಲಸಚಿವ ಪ್ರೊ. ವೈ. ರಮೇಶ್, ವಿತ್ತಾಧಿಕಾರಿ ಎಂ.ಎಸ್. ಚೇತನ್ ಕುಮಾರ್, ಆಡಳಿತ ಉಪ ಕುಲಸಚಿವರಾದ ಪ್ರೊ. ಎಲ್.ಎಚ್. ಶಿವಶಂಕರಪ್ಪ, ಪ್ರೊ. ಎಸ್.ಡಿ. ನಾಗೇಂದ್ರ, ಮೌಲ್ಯಮಾಪನ ಉಪಕುಲಸಚಿವ ಶ್ರೀನಾಥ್ ರಾಜ್ ಮತ್ತು ಸ್ಕೂಲ್ ಆಫ್ ಹೋಂ ಸೈನ್ಸ್ ನ  ನಿರ್ದೇಶಕಿ ಪ್ರೊ. ಮಮತಾ ಬಿ, ಸ್ಕೂಲ್ ಆಫ್ ಕಾಮರ್ಸ್ ಅಂಡ್ ಮೇನೇಜ್‌ಮೆಂಟ್ ನ ನಿರ್ದೇಶಕ ಪ್ರೊ. ಮುನಿವೆಂಕಟಪ್ಪ, ಸ್ಕೂಲ್ ಆಫ್ ಸೈನ್ಸ್ ನ ನಿರ್ದೇಶಕಿ ಪ್ರೊ. ಅರುಣ್ ಜ್ಯೋತಿ ಮಥಾಯಸ್ ಹಾಗೂ ಮಹಾರಾಣಿ ಮಹಿಳಾ ಕಲಾ, ವಾಣಿಜ್ಯ ಮತ್ತು ನಿರ್ವಹಣಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಕುಶಲ, ಮಹಾರಾಣಿ ಮಹಿಳಾ ವಿಜ್ಞಾನ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ. ಆರ್.ಕೆ. ವಾಣಿಶ್ರೀ, ವಿ.ಎಚ್.ಡಿ ಗೃಹ ವಿಜ್ಞಾನ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ. ವಜೀಹಾ ಸುಲ್ತಾನ ಹಾಗೂ ವಿವಿಧ ವಿಷಯಗಳ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು, ಹಿರಿಯ- ಕಿರಿಯ ವಿದ್ಯಾರ್ಥಿನಿಯರು ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿಲಿದ್ದಾರೆ.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ