LIVE TV StateNationalPoliticsCrimeEntertainmentSportsEducationFINANCE & TAXATION
Districts

ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ

ಯಾರದ್ದೋ ಹೇಳಿಕೆ ಮೇಲೆ ಸುರೇಶ್ ಅವರನ್ನು ವಿಚಾರಣೆಗೆ ಕರೆದಿದ್ದಾರೆ, ಇದನ್ನು ವೈಭವೀಕರಿಸುವ ಅಗತ್ಯವಿಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು :  “ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ. ಯಾರದ್ದೋ ಹೇಳಿಕೆ ಮೇಲೆ ಡಿ.ಕೆ. ಸುರೇಶ್ ಅವರನ್ನು ವಿಚಾರಣೆಗೆ ಕರೆದಿದ್ದಾರೆ. ಇದನ್ನು ಮಾಧ್ಯಮಗಳು ವೈಭವೀಕರಿಸುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯಿಸಿದರು.

ಐಶ್ವರ್ಯಾ ಗೌಡ ಅವರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ ಸುರೇಶ್ ಅವರನ್ನು ಇಡಿ ವಿಚಾರಣೆ ಕರೆದಿರುವ ಬಗ್ಗೆ ಕೇಳಿದಾಗ, “ಈ ಹಿಂದೆ ನನ್ನ ಮೇಲೂ ಇಡಿ ಪ್ರಕರಣ ದಾಖಲಿಸಿತ್ತು. ಅದು ಏನಾಯ್ತು? ನಮ್ಮ ರಕ್ಷಣೆಗೆ ಯಾರೂ ಬರಲಿಲ್ಲ. ಕೊನೆಗೆ ನಮಗೆ ರಕ್ಷಣೆ ನೀಡಿದ್ದು ನ್ಯಾಯಾಂಗ ವ್ಯವಸ್ಥೆ. ಜನಪ್ರತಿನಿಧಿಗಳು ತಮ್ಮ ಕ್ಷೇತ್ರದ ಜನ ಬಂದಾಗ ಅವರನ್ನು ಭೇಟಿ ಮಾಡುವು ಸಹಜ. ಇಡಿ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡಲು ಸುರೇಶ್ ತಯಾರಿದ್ದಾರೆ. ಮಾಧ್ಯಮಗಳು ಹೆಚ್ಚು ಆದ್ಯತೆ ನೀಡಬೇಕಾದ ಪ್ರಕರಣಗಳನ್ನು ಬಿಟ್ಟು, ಇದನ್ನು ಹೆಚ್ಚು ಬಿಂಬಿಸಲು ಮುಂದಾಗಿದ್ದೀರಿ. ಇದರ ಅಗತ್ಯವಿಲ್ಲ” ಎಂದು ತಿಳಿಸಿದರು.



ಶಾಸಕ ಬಿ.ಆರ್ ಪಾಟೀಲ್ ಅವರು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯ್ತಿ ಸದಸ್ಯರು ಕೂಡ ಅಧಿಕಾರಿಗಳು ಹಣ ಪಡೆದಿದ್ದಾರೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಈ ವಿಚಾರವಾಗಿ ಏನು ಹೇಳಬೇಕೋ ಹೇಳಿದ್ದೇನೆ.  ಉಳಿದಂತೆ ಈ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ವಸತಿ ಸಚಿವರು ಸ್ಪಷ್ಟನೆ ನೀಡುತ್ತಾರೆ” ಎಂದು ಹೇಳಿದರು.

ಶಾಸಕರ ಗಮನಕ್ಕೆ ಬಾರದೇ ಅನುದಾನ ತೆಗೆದುಕೊಂಡು ಹೋಗಲಾಗುತ್ತಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಯಾರು ಏನು ಹೇಳಿದ್ದಾರೆ ಎಂದು ನನಗೆ ಮಾಹಿತಿ ಇಲ್ಲ” ಎಂದು ತಿಳಿಸಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ