22 Nov 2026, 06:13:28 PM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
LIVE TV StateNationalPoliticsCrimeEntertainmentSportsEducationFINANCE & TAXATION
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Districts

ತುಮಕೂರಿನ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಡಿಸಿಎಂ

ತುಮಕೂರು : "ಬೆಂಗಳೂರಿನಂತೆ ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಅನೇಕ ಯೋಜನೆ ರೂಪಿಸುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಶನಿವಾರ ನಡೆದ ಸಚಿವ ಕೆ.ಎನ್. ರಾಜಣ್ಣ ಅವರ 75ನೇ ಜನ್ಮದಿನ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು.

"ತುಮಕೂರಿಗೆ ಹೆಚ್ಚಿನ ಶಕ್ತಿ ತುಂಬಲು, ಸ್ಯಾಟಲೈಟ್ ಟೌನ್ ಜತೆಗೆ, ಅಂತರನಗರ ರೈಲು ಹಾಗೂ ಮೆಟ್ರೋ ರೈಲು ನೀಡಲು ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ಕಲ್ಪತರು ನಾಡು ತುಮಕೂರು ಜಿಲ್ಲೆಗೆ ತನ್ನದೇ ಆದ ಇತಿಹಾಸವಿದೆ. ಧಾರ್ಮಿಕವಾಗಿ, ಶೈಕ್ಷಣಿಕವಾಗಿ ದೊಡ್ಡ ಪರಂಪರೆ ಇದೆ" ಎಂದರು.



"ನೀವೆಲ್ಲರೂ ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿ, ಅತಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಿಸಿ, ನಿಮ್ಮೆಲ್ಲರ ಸೇವೆ ಮುಂದುವರಿಸಲು ಆಶೀರ್ವಾದ ಮಾಡಬೇಕು" ಎಂದು ಮನವಿ ಮಾಡಿದರು.

ರಾಜಣ್ಣ ನೇರ ನುಡಿ ಸ್ವಾಭಿಮಾನದ ನಾಯಕ

"ಇದು ಐತಿಹಾಸಿಕ ಜನ್ಮದಿನ ಕಾರ್ಯಕ್ರಮ. ನೇರ ನುಡಿ ಸ್ವಾಭಿಮಾನದ ನಾಯಕ ರೈತಾಪಿ ಜನರ ಬದುಕು ಸುಧಾರಣೆಯ ಗುರಿ ಹೊಂದಿರುವ, ಆತ್ಮೀಯ ಸ್ನೇಹಿತನ ಜನ್ಮದಿನವನ್ನು ಬಹಳ ಸಂಭ್ರಮದಿಂದ ಆಚರಿಸುತ್ತಿದ್ದೇವೆ. ರಾಜಣ್ಣ ಅವರಿಗೆ ಹಾಗೂ ಅವರ ಕುಟುಂಬಕ್ಕೆ ಜನರ ಸೇವೆ ಮಾಡಲು ಹೆಚ್ಚಿನ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

        "ರೈತನಿಗೆ ಲಂಚ, ಬಡ್ತಿ, ನಿವೃತ್ತಿ, ಪಿಂಚಣಿ ಇಲ್ಲ. ರೈತರ ಹಿತಕ್ಕಾಗಿ ಸಹಕಾರ ಕ್ಷೇತ್ರಕ್ಕೆ ಹೆಚ್ಚು ಶಕ್ತಿ ನೀಡಿತ್ತಿದ್ದೇವೆ. ರಾಜಣ್ಣ ಅವರು ಬಹಳ ಆಸಕ್ತಿಯಿಂದ ಈ ಸರ್ಕಾರದಲ್ಲಿ ಸಹಕಾರ ಸಚಿವರಾಗಿದ್ದಾರೆ. ನಾನು ಕೂಡ ಎಸ್.ಎಂ ಕೃಷ್ಣ ಅವರ ಅವಧಿಯಲ್ಲಿ ಸಹಕಾರ ಸಚಿವನಾಗಿದ್ದಾಗ, ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ಹಾಗೂ ಷಡಕ್ಷರಿ ಅವರನ್ನು ಎಸ್ ಎಲ್ ಡಿ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡುವ ಅವಕಾಶ ನನಗೆ ಸಿಕ್ಕಿತ್ತು" ಎಂದು ಸ್ಮರಿಸಿದರು.

"ತುಳಿತಕ್ಕೆ ಒಳಗಾದ ಸಮಾಜದ ಧೀಮಂತ ನಾಯಕನಿಗೆ ಶುಭ ಹಾರೈಸಲು ನಾವು ಇಲ್ಲಿ ಸೇರಿದ್ದೇವೆ. ನಾನು ಹಾಗೂ ರಾಜಣ್ಣ ಅವರು ಸಿಯೋಲ್, ಜಪಾನ್ ಹಾಗೂ ದಕ್ಷಿಣ ಕೊರಿಯಾ ಇತರೆ ದೇಶಗಳಲ್ಲಿ ನಡೆದ ಅಂತಾರಾಷ್ಟ್ರೀಯ ಸಹಕಾರ ಸಹಭಾಗಿತ್ವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆವು. ಆಮೂಲಕ ಸಹಕಾರ ಕ್ಷೇತ್ರದ ಬಗ್ಗೆ ಹೆಚ್ಚು ಅಧ್ಯಯನ ಮಾಡಿದ್ದೆವು. ಈಗ ನಾವು ಸರ್ಕಾರದಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು.



ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಈ ಮಟ್ಟಕ್ಕೆ ಬೆಳೆದಿದ್ದಾರೆ. ಪಕ್ಷದ ಬೆಳವಣಿಗೆಗೆ ಶ್ರಮಿಸಿದ್ದಾರೆ. ಅವರು ತಮ್ಮ ಕೆಲಸವನ್ನು ಹೀಗೆ ಮುಂದುವರಿಸಿಕೊಂಡು ಹೋಗಲಿ. ದೇವರು ಅವರಿಗೆ ಹೆಚ್ಚಿನ ಶಕ್ತಿ ನೀಡಲಿ" ಎಂದು ಶುಭ ಕೋರಿದರು.

"ಸರ್ವರಿಗೂ ಸಮಬಾಳು, ಸಮಪಾಲು ಎಂಬ ತತ್ವದ ಮೇಲೆ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು.

ನಾವು ಯಾವುದೇ ಜಾತಿ, ಧರ್ಮದಲ್ಲಿ ಹುಟ್ಟಿದ್ದರೂ ಎಲ್ಲರೂ ಒಟ್ಟಾಗಿ ಕೆಲಸ ಮಾಡಿಕೊಂಡು ಹೋಗಬೇಕು. ಮೇಲ್ಜಾತಿ, ಕೆಳ ಜಾತಿ ಎಂಬ ತಾರತಮ್ಯ ಬೇಡ. ಎಲ್ಲ ವರ್ಗಕ್ಕೆ ನಾವು ಶಕ್ತಿಯಾಗಿ ನಿಲ್ಲಬೇಕು. ಇದೇ ಕಾಂಗ್ರೆಸ್ ಪಕ್ಷದ ಸಿದ್ಧಾಂತ. ಅದರಂತೆ ರಾಜಣ್ಣ ಅವರ ಕುಟುಂಬ ಕೆಲಸ ಮಾಡುತ್ತಿದೆ" ಎಂದು ತಿಳಿಸಿದರು.



ಕೊಟ್ಟ ಮಾತಿನಂತೆ ನಡೆದಿದ್ದೇವೆ

"ರೈತರ ಬದುಕು ಬದಲಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ನಾವು ಕೊಟ್ಟ ಮಾತಿನಂತೆ ನಡೆದು ಜನರ ಆಶೋತ್ತರ ಈಡೇರಿಸಿದ್ದೇವೆ. 2027ರ ಒಳಗಾಗಿ ಎತ್ತಿನ ಹೊಳೆ ನೀರನ್ನು ತುಮಕೂರು ಮಾರ್ಗವಾಗಿ ಹರಿಸಲು ತೀರ್ಮಾನಿಸಿದ್ದೇವೆ.

ಕುಡಿಯುವ ನೀರು ಪೂರೈಸಿದ ನಂತರ ಕೆರೆ ತುಂಬಿಸಲಾಗುವುದು" ಎಂದು ಭರವಸೆ ನೀಡಿದರು.

"ನಾವು ನಿಮಗೆ ನುಡಿದಂತೆ ನಡೆದಿದ್ದು, ನಮಗೆ ನಿಮ್ಮ ಆಶೀರ್ವಾದ ಬೇಕು. ನೀವು ಎಲ್ಲಿಯವರೆಗೂ ಆಶೀರ್ವಾದ ಮಾಡುತ್ತೀರೋ ಅಲ್ಲಿಯವರೆಗೆ ನಿಮ್ಮ ಪರವಾಗಿ ಕೆಲಸ ಮಾಡುತ್ತೇವೆ. ನಾವು ಪರಮೇಶ್ವರ್ ಅವರ ನೇತೃತ್ವದಲ್ಲಿ ಪ್ರಣಾಳಿಕೆ ಸಮಿತಿ ರಚಿಸಿದ್ದೆವು. ನಮ್ಮ ಸರ್ಕಾರ 2 ವರ್ಷದಲ್ಲೇ 70% ಪ್ರಣಾಳಿಕೆಯಲ್ಲಿರುವ ಭರವಸೆ ಪೂರ್ಣಗೊಳಿಸಿದ್ದೇವೆ. ನಮ್ಮ ಈ ಹಿಂದಿನ ಸರ್ಕಾರದಲ್ಲಿ 165 ಭರವಸೆಗಳ ಪೈಕಿ 145ಕ್ಕೂ ಹೆಚ್ಚಿನ ಭರವಸೆ ಈಡೇರಿಸಿದ್ದೆವು" ಎಂದು ಹೇಳಿದರು.



"ನಮ್ಮ ಗ್ಯಾರಂಟಿ ಹಾಗೂ ಎಲ್ಲಾ ಇಲಾಖೆಗಳಲ್ಲಿನ ಅಭಿವೃದ್ಧಿ ಯೋಜನೆ ದೇಶಕ್ಕೆ ಮಾದರಿಯಾಗಿದೆ. 4 ಲಕ್ಷ ಕೋಟಿಗೂ ಹೆಚ್ಚಿನ ಬಜೆಟ್ ಮಂಡಿಸಿ ಎಲ್ಲಾ ಇಲಾಖೆಗಳಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ. ಇತ್ತೀಚೆಗೆ ವಿಜಯನಗರದಲ್ಲಿ 1,11,111 ಮಂದಿ ತಾಂಡಾ, ಬುಡಕಟ್ಟು ಜನರಿಗೆ, ಆರನೇ ಗ್ಯಾರಂಟಿ ಭೂ ಗ್ಯಾರಂಟಿ ಮೂಲಕ ಭೂಮಿ ದಾಖಲೆ ಉಚಿತವಾಗಿ ಹಂಚಿದ್ದೇವೆ" ಎಂದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೀಪಗಳ ಹಬ್ಬದ ಮಹತ್ವ, ಆಚರಣೆಯ ವಿಧಿ ವಿಧಾನ ಇಲ್ಲಿದೆಕೋಡಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಇಟಲಿಯ ಹೈಡ್ರೋನಿಕ್' ಸಂಸ್ಥೆ ಹಾಗೂ 'ಲಿಫ್ಟ್ ಎಕ್ಸ್ಪೋಗೆ' ಡಾ. ಬಿ.ಎಂ. ಉಮೇಶ್ ಕುಮಾರ್ ಭೇಟಿಮಕ್ಕಳನ್ನು ಮೊಬೈಲ್ನಿಂದ ದೂರವಿಟ್ಟು ಕ್ರೀಡೆಗಳಲ್ಲಿ ತೊಡಗಿಸಿ: ಬಸವರಾಜ್ ಶೀಲವಂತರ್ ಕರೆನಕಲಿ ಮತದಾರರಿಗೆ ರಕ್ಷಣೆ ನೀಡುವುದೇ ಎಸ್ಐಆರ್ ವಿರೋಧಿಗಳ ಅಜೆಂಡಾ ಅಲ್ಲವೇ?” – ಪ್ರಭಾಕರ್ ರಾಗಿ ಅಂಗಡಿಗೆ ಬಂದವರನ್ನು ಪ್ರೀತಿಯಿಂದ ಮಾತನಾಡಿಸುತ್ತಾರೆಹಳ್ಳಿ-ಹಳ್ಳಿಗೆ ತೆರಳಿ ಕಾಂಗ್ರೆಸ್ ಭದ್ರಕೋಟೆ ನಿರ್ಮಿಸುತ್ತಿರುವ ಡಾ. ಯೋಗೇಶ್ ಬಾಬುವಾಲ್ಮೀಕಿನಾಯಕ ಸಮಾಜದವರು ಖಡ್ಗದ ಬದಲಾಗಿ ಶಿಕ್ಷಣದ ಅಸ್ತ್ರಹಿಡಿಯಿರಿಚಲನಚಿತ್ರ ನಟ, ನಿರ್ದೇಶಕ ಚಂದ್ರಹಾಸ ಆಳ್ವರಿಗೆ ಸನ್ಮಾನಶ್ರೀ ಕೃಷ್ಣ ರುಕ್ಮಿಣಿ ಸ್ಕೂಲ್ ಆಫ್ ಲಾದಲ್ಲಿ ಫ್ರೆಷರ್ಸ್ ಡೇ ಹಾಗೂ ಕನ್ನಡ ರಾಜ್ಯೋತ್ಸವ