LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಪೊಲೀಸ್–ಸಾರ್ವಜನಿಕರ ಸಮನ್ವಯ ಸಭೆ: ಸುರಕ್ಷಿತ ಸಂಚಾರಕ್ಕೆ ಜಾಗೃತಿ

ಬಳ್ಳಾರಿ :  ನಗರದ ಗಾಂಧಿನಗರ ಪೊಲೀಸ್ ಠಾಣೆ ವತಿಯಿಂದ ಪೊಲೀಸ್ಸಾರ್ವಜನಿಕರ ಸಮನ್ವಯ ಸಭೆಯನ್ನು ಆಯೋಜಿಸಿ ಸಾರ್ವಜನಿಕರ ಸಮಸ್ಯೆಗಳು ಹಾಗೂ ಸ್ಥಳೀಯ ಕುಂದುಕೊರತೆಗಳ ಕುರಿತು ಚರ್ಚಿಸಲಾಯಿತು.

 

ಸಿದ್ಧಾರ್ಥ ಕಾಲೋನಿಯ ಎಸ್ಸಿ/ಎಸ್ಟಿ ಮುಖಂಡರನ್ನು ಆಹ್ವಾನಿಸಿ ನಡೆದ ಸಭೆಯಲ್ಲಿ ಪ್ರದೇಶದ ಮೂಲಭೂತ ಸೌಲಭ್ಯಗಳು, ಸಾರ್ವಜನಿಕ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಸಂಬಂಧಿಸಿದ ವಿಷಯಗಳ ಬಗ್ಗೆ ಅಭಿಪ್ರಾಯ ವಿನಿಮಯ ನಡೆಯಿತು. ಸಾರ್ವಜನಿಕರು ತಮ್ಮ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದರು.

ಸಭೆಯಲ್ಲಿ ಮಾತನಾಡಿದ ಗಾಂಧಿನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ರವಿಚಂದ್ರ, ರಸ್ತೆ ಅಪಘಾತಗಳನ್ನು ತಡೆಗಟ್ಟಲು ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ತಿಳಿಸಿದರು. ಸುರಕ್ಷಿತ ವಾಹನ ಚಾಲನೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ಅಮೂಲ್ಯ ಜೀವಗಳನ್ನು ರಕ್ಷಿಸಬಹುದು ಎಂದು ಹೇಳಿದರು.

ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರ ನಡುವೆ ಉತ್ತಮ ಬಾಂಧವ್ಯ ಬೆಳೆಸುವ ಉದ್ದೇಶದಿಂದ ಇಂತಹ ಸಮನ್ವಯ ಸಭೆಗಳು ಅಗತ್ಯವಾಗಿದ್ದು, ಜನರು ಯಾವುದೇ ಸಮಸ್ಯೆಗಳಿದ್ದರೂ ನಿರ್ಭಯವಾಗಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು ಎಂದು ಅವರು ಮನವಿ ಮಾಡಿದರು.

ಸಭೆಯಲ್ಲಿ ಸ್ಥಳೀಯ ಮುಖಂಡರು, ಸಾರ್ವಜನಿಕರು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

Author
Rakesh V
is Digital online news channel, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ