LIVE TV StateNationalPoliticsCrimeEntertainmentSportsEducationFINANCE & TAXATION
Crime News

ಬೈಕ್ ಗೆ ಟಚ್ ಆಗಿದ್ದಕ್ಕೆ ಸಾರಿಗೆ ಬಸ್ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಪೊಲೀಸ್

ಕೂಡ್ಲಿಗಿ: ಓವರ್ ಟೇಕ್ ಮಾಡುವಾಗ ಬೈಕ್ ಗೆ ಟಚ್ ಆಗಿದೆ ಎಂದು ಆರೋಪಿಸಿ ಪೋಲಿಸ್  ಓರ್ವ ಕರ್ತವ್ಯ ನಿರತ ಸಾರಿಗೆ ಬಸ್ ಚಾಲಕನ ಮೇಲೆ ಚಪ್ಪಲಿ, ಹೆಲ್ಮೆಟ್ ನಿಂದ ಹಲ್ಲೆ ನಡೆಸಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿಯಲ್ಲಿ ನಡೆದಿದೆ.

 

ಹರಿಹರ ಘಟಕಕ್ಕೆ ಸೇರಿದ ಸಾರಿಗೆ ಬಸ್ ಬಳ್ಳಾರಿಗೆ ಹೋಗುತ್ತಿತ್ತು. ಕೊಟ್ಟೂರಿನಿಂದ ಕೂಡ್ಲಿಗಿಗೆ ಬರುವ ರಸ್ತೆಯಲ್ಲಿನ ಮಲ್ಲನಾಯಕಹಳ್ಳಿ ಬಳಿ ಬಸ್ ಚಾಲಕ ರಾಮಲಿಂಗಪ್ಪ ಕೂಡ್ಲಿಗಿ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಮಂಜುನಾಥ ಹಾಗೂ ಇನ್ನೊಬ್ಬ ಕಾನ್‌ಸ್ಟೆಬಲ್ ಇದ್ದ ಬೈಕ್‌ನ್ನು ಹಿಂದಿಕ್ಕಿದ್ದಾರೆ. ಇನ್ನೇನು ಬೈಕ್ ಅನ್ನು ಹಿಂದಿಕ್ಕಬೇಕು ಅನ್ನುವಷ್ಟರಲ್ಲಿ ಎದುರಿನಿಂದ ಕಾರೊಂದು ಬಂದಿದೆ. ಕೂಡಲೇ ಎಚ್ಚೆತ್ತ ಸಾರಿಗೆ ಚಾಲಕ ರಾಮಲಿಂಗಪ್ಪ ಬಸ್ ಅನ್ನು ಎಡಕ್ಕೆ ಎಳೆದುಕೊಂಡಿದ್ದಾರೆ. ಈ ವೇಳೆ ಬಸ್ ನ ಹಿಂಭಾಗ ಬೈಕ್ ನ ಹ್ಯಾಂಡಲ್ ಗೆ ಚೂರು ಟಚ್ ಆಗಿದೆ.



ಈ ವೇಳೆ ಏನಾಯ್ತು ಎಂದು ಚಾಲಕ ಮಿರರ್ ಮೂಲಕ ವೀಕ್ಷಿಸಿದ್ದಾರೆ, ಆದರೆ ಏನು ಕಾಣದ ಹಿನ್ನಲೆ ಮುಂದೆ ಸಾಗಿದ್ದಾರೆ. ಇದರಿಂದ ಸಿಟ್ಟಾದ ಕೂಡ್ಲಿಗಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಸ್ಟೇಬಲ್ ಮಂಜುನಾಥ್ ಗಜಾಪೂರ ಬಳಿ ಬಸ್ ಅನ್ನು ನಿಲ್ಲಿಸಿದ್ದಾರೆ. ಬಳಿಕ ಬಸ್ ಒಳಗೆ ಬಂದ ಮಂಜುನಾಥ್ ಏನನ್ನು ಪ್ರಶ್ನೆ ಮಾಡದೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾನೆ, ಅಲ್ಲದೇ ಕಾಲಿನಲ್ಲಿದ್ದ ಚಪ್ಪಲಿ ತೆಗೆದು ಚಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ. ಜೊತೆಗೆ ಚಾಲಕನ ಜೇಬಿನಲ್ಲಿದ್ದ ಮೊಬೈಲ್ ಅನ್ನು ಕಿತ್ತುಕೊಂಡು ಸ್ಟೇಷನ್ ಗೆ ಬಾ ಎಂದು ಹೇಳಿ ಬಸ್ ನಿಂದ ಇಳಿದು ಹೋಗಿದ್ದಾನೆ.

 

ನಂತರ ಬಸ್ಸಿನಿಂದ ಇಳಿದು ನಾನೇನು ತಪ್ಪು ಮಾಡಿಲ್ಲ. ದಯವಿಟ್ಟು ಮೊಬೈಲ್ ನೀಡುವಂತೆ ರಾಮಲಿಂಗಪ್ಪ ಕೇಳಿದ್ದಾರೆ. ಇದರಿಂದ ಮತ್ತಷ್ಟು ಕೆರಳಿದ ಮಂಜುನಾಥ ತನ್ನ ಕೈಯಲ್ಲಿದ್ದ ಹೆಲೈಟ್ ನಿಂದ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ. ಇನ್ನು ಈ ಘಟನೆಗೆ ಸಂಬAಧಪಟ್ಟAತೆ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಹೆಡ್ ಕಾನ್ಸ್ ಸ್ಟೇಬಲ್ ಮಂಜುನಾಥ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವರದಿಯ ಪ್ರಕಾರ, ಮಂಜುನಾಥ್ ಕರ್ತವ್ಯದಲ್ಲಿ ಇರಲಿಲ್ಲ, ಹೀಗಿರುವ ಕರ್ತವ್ಯ ನಿರತ ಅಧಿಕಾರಿಯ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಸಾರ್ವಜನಿಕರು ಕಿಡಿಕಾರಿದ್ದಾರೆ.

 

ಸದ್ಯ ಕರ್ತವ್ಯ ನಿರತ ಸಿಬ್ಬಂದಿಯ ಮೇಲೆ ಹಲ್ಲೆ ಮಾಡುವುದು ಕಾನೂನು ಬಾಹಿರ ಎಂದು ತಿಳಿದಿದ್ದರೂ ಕೂಡ ಹಲ್ಲೆ ನಡೆಸಿರುವುದು ಖಂಡನೀಯ, ಈ ಕೂಡಲೇ ಪೊಲೀಸ್ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ ಕೆಲಸದಿಂದ ವಜಾ ಮಾಡಬೇಕು ಎಂದು ಸಾರಿಗೆ ನೌಕರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ