LIVE TV StateNationalPoliticsInternationalCrimeEntertainmentSportsEducationFINANCE & TAXATION
Districts Chitradurga

ಚಿಂತಾಮಣೀಶ್ವರ ಗ್ರಾಮೀಣ ಪ್ರೌಢಶಾಲೆಯ ಅಭಿವೃದ್ಧಿಗೆ ಆದ್ಯತೆ: ಶಾಸಕ ಎನ್. ವೈ. ಗೋಪಾಲಕೃಷ್ಣ

ನಾಯಕನಹಟ್ಟಿ: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಹಿರೇಹಳ್ಳಿ ಗ್ರಾಮದ ಚಿಂತಾಮಣೀಶ್ವರ ಗ್ರಾಮೀಣ ಪ್ರೌಢಶಾಲೆಗೆ ಇಂದು ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಎನ್. ವೈ. ಗೋಪಾಲಕೃಷ್ಣ ಅವರು ಭೇಟಿ ನೀಡಿ, ಶಾಲೆಯ ಶೈಕ್ಷಣಿಕ ಹಾಗೂ ಮೂಲಸೌಕರ್ಯ ಅಗತ್ಯತೆಗಳನ್ನು ಪರಿಶೀಲಿಸಿದರು.

 

ಈ ಸಂದರ್ಭದಲ್ಲಿ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಶಾಲೆಯ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯವಿರುವ ಅನುದಾನ ಒದಗಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.

 

ಮನವಿಯನ್ನು ಸ್ವೀಕರಿಸಿದ ಶಾಸಕರು, ಶಾಲೆಯ ಅಗತ್ಯತೆಗಳನ್ನು ಪರಿಶೀಲಿಸಿ ಆದ್ಯತೆಯ ಮೇರೆಗೆ ಅಗತ್ಯ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು. ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವುದು ಹಾಗೂ ಗ್ರಾಮೀಣ ಭಾಗದ ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.

 

 

ಈ ಸಂದರ್ಭದಲ್ಲಿ ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು, ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
“ಅಮೋಘ” ಚಲನಚಿತ್ರದ ಹಾಡು ಬಿಡುಗಡೆಬಳ್ಳಾರಿ ಜಿಲ್ಲೆಯ ಎಸ್ಐಆರ್ ಕರಡು ಮತದಾರರ ಪಟ್ಟಿ ಪ್ರಕಟನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿಗಳ ದರ್ಶನ ಪಡೆದ ಮಾಜಿ ಶಾಸಕ ಸುರೇಶ್ ಬಾಬುಅಂಬೇಡ್ಕರ್ ಕೇವಲ ವ್ಯಕ್ತಿಯಲ್ಲ, ಅದೊಂದು ವಿಚಾರಧಾರೆ: ಪ್ರೊ. ಎನ್.ಎಂ. ಸಾಲಿಸಾಂಸಾರಿಕ ಜೀವನ ಪ್ರವೇಶಿಸಿದ ಸ್ಪೈಡರ್ ಮ್ಯಾನ್ನಾಗೇಂದ್ರಗೆ ಮತ್ತೊಂದು ಮಹತ್ವದ ಹೊಣೆ: ಕಲ್ಯಾಣ ಕರ್ನಾಟಕ ಸಚಿವಾಲಯದ ಜವಾಬ್ದಾರಿಸಂಸ್ಕೃತ ವಿಶ್ವವ್ಯಾಪಿ ಜ್ಞಾನಭಾಷೆ, ಸಂಶೋಧನೆಗೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಲಿಕಲ್ಲೂರು- ಶಿಶು ಪಾಲನಾ ಕೇಂದ್ರದಲ್ಲಿ ತಾಯಂದಿರಿಗೆ ಜಾಗೃತಿ. ಹೊನ್ನಳ್ಳಿ ತಾಂಡಾದಲ್ಲಿ ಶ್ರೀಗುರು ಅಜ್ಜಯ್ಯನ ದ್ವಿತೀಯ ದಶಮಾನೋತ್ಸವ ವಿಶೇಷ ಪೂಜಾ ಕಾರ್ಯಕ್ರಮಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ