LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಬಾಕಿ ವೇತನ ಪಾವತಿಸಲು ಆಗ್ರಹಿಸಿ ಪ್ರತಿಭಟನೆ

ಕಾರಟಗಿ ತಾಲೂಕು ಪಂಚಾಯತ ಕಛೇರಿಯ ಆವರಣದಲ್ಲಿ ನರೇಗಾ ನೌಕರರ ಅಸಹಕಾರ ಪ್ರತಿಭಟನೆ

ಕಾರಟಗಿ: ಬಾಕಿ 6 ತಿಂಗಳ ವೇತನ ಪಾವತಿ, ನರೇಗಾ ಎಲ್ಲ ನೌಕರರಿಗೆ ಸೇವಾ ಭದ್ರತೆ, ಆರೋಗ್ಯ ವಿಮೆ ಸೇರಿ ಇನ್ನಿತರ ಬೇಡಿಕೆಗಳಿಗೆ ಒತ್ತಾಯಿಸಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ, ಬೇರ್ ಫೂಟ್ ಟೆಕ್ನಿಷಿಯನ್ ಸಂಘದಿಂದ ತಾ.ಪಂ ಕಛೇರಿ ಆವರಣದಲ್ಲಿ ಮಂಗಳವಾರದಂದು  ಅನಿರ್ಧಿಷ್ಟಾವದಿ ಅಸಹಕಾರ ಚಳುವಳಿ ಪ್ರತಿಭಟನೆ ನಡೆಸಲಾಯಿತು.



ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಘಟಕದ ಪದಾಧಿಕಾರಿಗಳಾದ ತಾಂತ್ರಿಕ ಸಂಯೋಜಕ ವಿಶ್ವನಾಥ ಜಿನ್ನೂರು ಅವರು ಮಾತನಾಡಿ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ 06 ತಿಂಗಳಿಂದ ವೇತನ ಪಾವತಿಯಾಗಿಲ್ಲ, ಇದರಿಂದ ಎಲ್ಲಾ ನೌಕರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುತ್ತಾರೆ. ಕುಟುಂಬ ನಿರ್ವಹಣೆ, ದಿನಸಿ ಖರೀದಿ, ಮಕ್ಕಳ ಶಾಲಾ ಪ್ರವೇಶಾತಿ, ಕುಟುಂಬ ಸದಸ್ಯರ ವೈದ್ಯಕೀಯ ವೆಚ್ಚಗಳು, ಪ್ರಯಾಣ ವೆಚ್ಚಗಳು, ಸಾಲಗಳ ಮರುವಾವತಿ, ಇ.ಎಂ.ಐ. ಸೇರಿ ಅನೇಕ ರೀತಿಯ ಖರ್ಚುವೆಚ್ಚಗಳನ್ನು ನಿಭಾಯಿಸಲು ತೀವ್ರ ತೊಂದರೆಯುಂಟಾಗುತ್ತಿದ್ದು, ತ್ವರಿತವಾಗಿ ವೇತನ ಪಾವತಿಸಲು ವಿಫಲವಾಗಿದೆ ತ್ವರಿತವಾಗಿ ಮುಂದಾಗಬೇಕು ಎಂದರು.

ತಾ.ಪಂ ಐಇಸಿ ಸಂಯೋಜಕ ಸೋಮನಾಥ ಗೌಡರ್ ಅವರು ಮಾತನಾಡಿ ಈಗಾಗಲೇ ಬೇಡಿಕೆಗಳ ಈಡೇರಿಕೆಗಾಗಿ ಜು.7 ರಿಂದ ರಾಜ್ಯದ್ಯಂತ ನೌಕರರು ಅಸಹಕಾರ ಚಳುವಳಿ ಮಾಡುತ್ತಿದ್ದು, ಕೂಡಲೇ ಬಾಕಿ ವೇತನ ಪಾವತಿಸಿ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು. ನೌಕರರಿಗೆ ಸೇವಾ ಭದ್ರತೆ, ಆರೋಗ್ಯ ವಿಮೆ ಹಾಗೂ  ಬಾಕಿ 6 ತಿಂಗಳ ವೇತನ ಪಾವತಿ ಆಗುವವರೆಗೂ ಅಸಹಕಾರ ಚಳುವಳಿ ಮಾಡುತ್ತೇವೆ ಎಂದರು.



ಈ ವೇಳೆ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಘಟಕದ ಸದಸ್ಯರಾದ ಅಭಿಷೇಕ್ ,  ಚೇತನ್, ಶರಣಬಸವ, ಯೋಗೇಶ್, ವಿರೂಪಾಕ್ಷ, ನೂರುಪಾಷ, ಅನಿತಾ, ಜಯಶ್ರೀ, ಬೇರ್ ಫೂಟ್ ಟೆಕ್ನಿಷಿಯನ್ ಸಂಘದ ಸದಸ್ಯರಾದ ಅನಿಲ್ ಕುಮಾರ್, ಸೋಮನಾಥ, ಇಮಾಂಬಿ, ವಿರೇಶ್, ಮುದುಕಪ್ಪ, ಯಮನೂರು, ಕಾಶೀನಾಥ್, ಬಸವರಾಜ್ ಸೇರಿದಂತೆ ಇತರರಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ