LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಅತ್ಯಾಚಾರದ ಸಂತ್ರಸ್ಥೆ ಹೆಸರು ಉಲ್ಲೇಖ : ಮಾಜಿ ಸಚಿವ ಶ್ರಿರಾಮುಲು ವಿರುದ್ದ ಕೇಸು

ಬಳ್ಳಾರಿ : ಕಳೆದ ಸೆಪ್ಟಂಬರ್ ನಲ್ಲಿ ನಗರದ ಖಾಸಗೀ ಶಾಲೆಯೊಂದರಲ್ಲಿ 9 ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಸಂತ್ರಸ್ಥೆಯ ಹೆಸರನ್ನು ಬಹಿರಂಗವಾಗಿ ಉಲ್ಲೇಖ ಮಾಡಿದ್ದರಿಂದ ಮಾಜಿ ಸಚಿವ ಬಿ.ಶ್ರೀರಾಮುಲು ಮೇಲೆ ಇಲ್ಲಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮೊನ್ನೆ ಜ.17 ರಂದು ನಗರದ ಎಪಿಎಂಸಿ ಆವರಣದಲ್ಲಿ ನಡೆದ ಬಿಜೆಪಿಯ ಪ್ರತಿಭಟನಾ ಸಮಾವೇಶದಲ್ಲಿ ಶ್ರೀರಾಮುಲು ಅವರು ನಗರದಲ್ಲಿ ಗಾಂಜಾ ಮಾರಾಟ ಬಹಿರಂಗವಾಗಿ ನಡೆಯಿತ್ತಿದ್ದು. ಅದನ್ನು ಸೇವಿಸಿದ ವಿದ್ಯಾರ್ಥಿಗಳು ತನ್ನ ಸಹಪಾಠಿಯನ್ನು ಅತ್ಯಾಚಾರ ಮಾಡಿದ್ದಾರೆ ಎಂದು ಹೇಳುವಾಗ ಸಂತ್ರಸ್ಥೆಯ ಹೆಸರು, ಜಾತಿ, ಶಾಲೆ, ತರಗತಿಯನ್ನ ಉಲ್ಲೇಖಿಸಿದ್ದರು.ಇದು ಪೋಕ್ಸೋ ಕಾಯ್ದೆಯಡಿ ಅಪರಾಧವಾಗಿರುತ್ತದೆ.

ಅಂದು ಅಲ್ಲಿ ಸಾರ್ವಜನಿಕರು, ಮಾಧ್ಯಮಗಳು ಇರುವಾಗಲೇ ಶ್ರೀರಾಮುಲು ಅವರು ಕಾಯ್ದೆ ಉಲ್ಲಂಘನೆ ಮಾಡಿ ಮಾತನಾಡಿದ್ದಾರೆ ಎಂದು ಕಲಂ: 23 ಪೋಕ್ಸ್‌ ಕಾಯ್ದೆ ಅಡಿಯಲ್ಲಿ ಮತ್ತು ಕಲಂ: 74 ಜೆ.ಜೆ. ಅಕ್ಟ್ ಅಡಿಯಲ್ಲಿ ಎಪಿಎಂಸಿ ಇನ್ಸ್ ಫೆಕ್ಟರ್ ಮಹಮ್ಮದ್ ರಫಿ ಅವರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಎಸ್ಪಿ ಡಾ ಸುಮನ್ ಡಿ.ಪೆನ್ನೇಕರ್ ಇದು ಏಳು ವರ್ಷದೊಳಗಿನ ಶಿಕ್ಷೆ ಪ್ರಮಾಣದ ಕೇಸಾಗಿದ್ದು. ಜಮೀನು ನೀಡುವಂತಹದ್ದಾಗಿದೆ. ಪ್ರಕರಣದ ತನಿಖೆ ನಡೆಸಿ ಮುಂದಿನ ಕ್ರಮ ಜರುಗಿಸಲಿದೆಂದು ಹೇಳಿದ್ದಾರೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ