LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಬಳ್ಳಾರಿ ನಗರ ಕ್ಷೇತ್ರದ ಪೊಲೀಸ್ ಠಾಣೆಗಳ ಸರಹದ್ದು ಮರು ಸೇರ್ಪಡೆ

ಬಳ್ಳಾರಿ : ಬಹು ದಿನಗಳಿಂದ ಸಾರ್ವಜನಿಕರ ಬೇಡಿಕೆಯಾಗಿದ್ದ ಪೊಲೀಸ್ ಠಾಣೆಗಳ ಸರಹದ್ದು ಮರು ಗುರುತಿಸುವಿಕೆಯನ್ನು ಅಂತಿಮಗೊಳಿಸಿ ಸರ್ಕಾರ ಅಧಿಕೃತವಾಗಿ ಕರ್ನಾಟಕ ರಾಜ್ಯಪತ್ರದ ಮೂಲಕ ಅಧಿಸೂಚನೆ ಹೊರಡಿಸಿದೆ.

 

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಹಲವು ಪ್ರದೇಶಗಳು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಪೊಲೀಸ್ ಠಾಣೆಗಳ ಸರಹದ್ದಿನಲ್ಲಿದ್ದವು. ಗ್ರಾಮೀಣ ಠಾಣೆ, ಕೌಲಬಜಾರ್ ಠಾಣೆ ಹಾಗೂ ವಿವಿಧ ಠಾಣೆಗಳ ವ್ಯಾಪ್ತಿಗೆ ನಗರ ಕ್ಷೇತ್ರದ ಪ್ರದೇಶಗಳು ಸೇರಿದ್ದರಿಂದ ಪೊಲೀಸ್ ಇಲಾಖೆಗೆ ಸಂಬಂಧಿಸಿದ ಕೆಲಸಗಳಿಗಾಗಿ ಸಾರ್ವಜನಿಕರು ಪರದಾಡುವಂತಾಗಿತ್ತು.



ಗ್ರಾಮೀಣ ಪೊಲೀಸ್ ವಿಭಾಗಕ್ಕೆ ಸಂಬಂಧಿಸಿ ದಿನನಿತ್ಯದ ಬದುಕಿನ ಇಲಾಖೆಯ ಕೆಲಸಗಳು, ವ್ಯಾಜ್ಯಗಳು, ದೂರುಗಳು ಇದ್ದಾಗ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಬೇಕೆಂದರೆ ಸಾರ್ವಜನಿಕರು ಬಳ್ಳಾರಿ ನಗರದಿಂದ ಸಿರುಗುಪ್ಪಾಕ್ಕೆ ಹೋಗಬೇಕಾದ ಸ್ಥಿತಿ ಇತ್ತು. ಈ ಎಲ್ಲ ವಿಷಯಗಳನ್ನು ಅರಿತು ಕಳೆದ ಹಲವು ತಿಂಗಳುಗಳಿಂದ ನಿರಂತರವಾಗಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪತ್ರ ವ್ಯವಹಾರ ನಡೆಸಿ, ಅವೈಜ್ಞಾನಿಕವಾಗಿ ಇದ್ದ ಪೊಲೀಸ್ ಠಾಣೆಗಳ ಸರಹದ್ದುಗಳ ಮರು ಸೇರ್ಪಡೆ ಕಾರ್ಯ ಸಾಕಾರಗೊಂಡಿದ್ದು, ಸಾರ್ವಜನಿಕರಿಗೆ ಅನುಕೂಲ ಮಾಡಿ ಆಗಲಿದೆ.

ನನ್ನ ಮನವಿಗೆ ಸ್ಪಂದಿಸಿ, ಪೊಲೀಸ್ ಠಾಣೆಗಳ ಸರಹದ್ದು ಮರು ಸೇರ್ಪಡೆಗೊಳಿಸಲು ಪೊಲೀಸ್ ಇಲಾಖೆಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಸಾರ್ವಜನಿಕರ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ