ನವ ದೆಹಲಿ : ರಾಜ್ಯ ರಾಜಕರಾಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಒಪ್ಪಿಗೆ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಹೈಕಮಾಂಡ್ ಬುಲಾವ್ ಹಿನ್ನೆಲೆ ದೆಹಲಿ ತೆರಳಿದ್ದ ಸಿಎಂ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಅವರು ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎನ್ನುವ ಮಾಹಿತಿ ಸಿದ್ದರಾಮಯ್ಯ ಆಪ್ತರ ಬಲ್ಲ ಮೂಲಗಳಿಂದ ಲಭ್ಯವಾಗಿದೆ.
ಕಳೆದ ಆರು ತಿಂಗಳಿಂದ ಸಿಎಂ ಕುರ್ಚಿಗಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸರ್ಕಸ್ ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅಂತಿಮ ತೀರ್ಪು ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ಅವರು ರಾಜೀನಾಮೆ ನೀಡಲು ಸೂಚಿಸಿದ್ದಾರೆ ಎನ್ನಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ಸಹ ಒಪ್ಪಿದ್ದು, ನಾಲ್ಕು ಡಿಸಿಎಂ ಹಾಗೂ ಆಪ್ತ ಶಿಷ್ಯಂದಿರಿಗೆ ಸಚಿವ ಸ್ಥಾನ ನೀಡಲು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ.
ನಾಳೆ ಗುರುವಾರ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದ್ದು, ಅಧಿಕಾರ ಹಸ್ತಾಂತರ ಆಗಲಿದೆ ಎನ್ನುವುದು ಸದ್ಯದ ಚರ್ಚೆ ಹಾಗಾಗಿ ರಾಜ್ಯ ಉಸ್ತುವಾರಿ ಸುರ್ಜೇವಾಲ ಬೆಂಗಳೂರಿಗೆ ಬರಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.