LIVE TV StateNationalPoliticsCrimeEntertainmentSportsEducationFINANCE & TAXATION
Districts

ಬಳ್ಳಾರಿಯಲ್ಲಿ ವಿಶೇಷಚೇತನರಿಂದ ಎಸ್ಐಆರ್ ಜಾಗೃತಿ ತ್ರಿಚಕ್ರ ವಾಹನ ರ್ಯಾಲಿ

ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಆರಂಭಗೊAಡಿದ್ದು, ಬೂತ್ ಮಟ್ಟದ ಅಧಿಕಾರಿಗಳು ಈಗಾಗಲೇ ನೀಡಿರುವ ಗಣತಿ ನಮೂನೆಗಳನ್ನು ಭರ್ತಿ ಮಾಡಿ ಮರಳಿ ಅವರಿಗೆ ಶೀಘ್ರವೇ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆಗಿರುವ ಮಹಮ್ಮದ್ ಹಾರೀಸ್ ಸುಮೇರ್ ಅವರು ಹೇಳಿದರು.

                ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕನಕದುರ್ಗಮ್ಮ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎಸ್ಐಆರ್ ಜಾಗೃತಿ ಅಂಗವಾಗಿ ತ್ರಿಚಕ್ರ ವಾಹನ ರ್ಯಾಲಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

                ಜುಲೈ 29 ವರೆಗೆ ನಡೆಯುವ ಎಸ್ಐಆರ್ ಗಣತಿ ನಮೂನೆ ವಿತರಣೆ ಪ್ರಕ್ರಿಯೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಎಸ್ಐಆರ್ ಗಣತಿ ನಮೂನೆ ವಿತರಿಸುತ್ತಿದ್ದಾರೆ. ತಮಗೆ ನೀಡಿರುವ ಗಣತಿ ನಮೂನೆ ಫಾರ್ಮ್ ಗಳನ್ನು ಶೀಘ್ರವೇ ಭರ್ತಿ ಮಾಡಿ ನೀಡಬೇಕು. ಕೊನೆಯವರೆಗೂ ಕಾಯುವುದು ಬೇಡ ಎಂದು ತಿಳಿಸಿದರು.

                ಜಿಲ್ಲೆಯ ಯಾವುದೇ ಒಬ್ಬ ವಿಶೇಷಚೇತನರೂ ಎಸ್ಐಆರ್ ಪ್ರಕ್ರಿಯೆಯಿಂದ ವಂಚಿತರಾಗಬಾರದು. ಜಿಲ್ಲೆಯಲ್ಲಿನ ಎಂ.ಆರ್.ಡಬ್ಲ್ಯೂ ಹಾಗೂ ವಿ.ಆರ್.ಡಬ್ಲ್ಯೂ ಕಾರ್ಯಕರ್ತರು ತಮ್ಮ ವ್ಯಾಪ್ತಿಯ ಹಳ್ಳಿಗಳಿಗೆ ಭೇಟಿ ನೀಡಬೇಕು. ಅರ್ಹರ ಪಟ್ಟಿಯ ಆಧಾರದ ಮೇಲೆ ಪ್ರತಿಯೊಬ್ಬರ ಮನೆ ಬಾಗಿಲಿಗೆ ಹೋಗಿ ಎಸ್ಐಆರ್ ಪ್ರಕ್ರಿಯೆ ಕುರಿತು ಅರಿವು ಮೂಡಿಸಬೇಕು ಎಂದು ತಿಳಿಸಿದರು.

                ಎಸ್ಐಆರ್ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು. ಇಲ್ಲದಿದ್ದರೆ 2002 ಮತದಾರರ ಪಟ್ಟಿಯಲ್ಲಿ ಮ್ಯಾಪಿಂಗ್ ಆಗದೇ ಇರುವವರ ಹೆಸರು ಮತದಾರರ ಪಟ್ಟಿಯಲ್ಲಿ ಕೈತಪ್ಪುವ ಸಂಭವವಿರುತ್ತದೆ. ಇದರಿಂದಾಗಿ ಸರ್ಕಾರಿ ಸೌಲಭ್ಯಗಳು ಸಿಗದಂತಾಗುತ್ತದೆ. ಕುರಿತು ಯಾವುದೇ ಸಂಶಯಗಳಿದ್ದಲ್ಲಿ ತಮ್ಮ ವ್ಯಾಪ್ತಿಯ ಬಿಎಲ್ ಅಥವಾ ತಹಶೀಲ್ದಾರರ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಅರಿವು ಮೂಡಿಸಿದರು.

news_1783704549_1_273.webp

 

                ಕುಟುಂಬದ ಹಿರಿಯರು ಅಥವಾ ಪೋಷಕರು ಹಿಂದೆ 2002 ಅವಧಿಯಲ್ಲಿ ಭಾರತದ ಯಾವುದೇ ಭಾಗದಲ್ಲಿ ಮತ ಚಲಾಯಿಸಿದ್ದರೆ, ವಿವರಗಳನ್ನು ಅರ್ಜಿಯ ಎಡಭಾಗದಲ್ಲಿ ಭರ್ತಿ ಮಾಡಬೇಕಾಗುತ್ತದೆ. 2002 ಅವಧಿಯಲ್ಲಿ ಮತ ಚಲಾಯಿಸದೇ ಇರುವವರು ಅರ್ಜಿಯ ಬಲಭಾಗದಲ್ಲಿ ತಮ್ಮ ಪೋಷಕರ (ತಂದೆ, ತಾಯಿ, ಅಜ್ಜ ಅಥವಾ ಅಜ್ಜಿ) ವಿವರಗಳನ್ನು ಭರ್ತಿ ಮಾಡಿ ನೀಡಬೇಕು ಎಂದು ವಿವರಿಸಿದರು.

                ಜಿಪಂ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಅವರು ಮಾತನಾಡಿ, ಪ್ರತಿ ಗ್ರಾಮಗಳಲ್ಲಿ ಕಾರ್ಯನಿರ್ವಹಿಸುವ ವಿ.ಆರ್.ಡಬ್ಲ್ಯೂ ಸಿಬ್ಬಂದಿ ಕಡ್ಡಾಯವಾಗಿ ಪ್ರತಿಯೊಂದು ಮನೆಗೂ ಭೇಟಿ ನೀಡಿ ಮಾಹಿತಿ ಸಂಗ್ರಹಿಸಬೇಕು. ಜಿಲ್ಲೆಯಲ್ಲಿರುವ ಯಾವುದೇ ವಿಶೇಷಚೇತನರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಶೀಲನೆಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ಸಿಬ್ಬಂದಿಯ ಜವಾಬ್ದಾರಿಯಾಗಿದೆ ಎಂದು ಹೇಳಿದರು.

                ಬಳಿಕ ಗಣ್ಯರು ಎಸ್ಐಆರ್ ತ್ರಿಚಕ್ರ ವಾಹನ ರ್ಯಾಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

್ಯಾಲಿಯು ಕನಕ ದುರ್ಗಮ್ಮ ದೇವಸ್ಥಾನದ ಆವರಣದಿಂದ ಆರಂಭಗೊಂಡು ಗಡಿಗಿ ಚೆನ್ನಪ್ಪ ವೃತ್ತದ ಮಾರ್ಗವಾಗಿ ರೈಲ್ವೆ ಸ್ಟೇಶನ್ ರಸ್ತೆ ಮೂಲಕ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ತಲುಪಿ ಮುಕ್ತಾಯಗೊಂಡಿತು. ರ್ಯಾಲಿಯಲ್ಲಿ ವಿಶೇಷ ಚೇತನರ ಕೈಯಲ್ಲಿ ಎಸ್ಐಆರ್ ಕುರಿತ ಜಾಗೃತಿ ಫಲಕಗಳು ಗಮನಸೆಳೆದವು.

                ವೇಳೆ ಜಿಲ್ಲಾ ಪಂಚಾಯತ್ ಸಹಾಯಕ ನಿರ್ದೇಶಕ ಬಸವರಾಜ ಹಿರೇಮಠ್, ಬಳ್ಳಾರಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಬಾರಿಕರ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಸೇರಿಂದತೆ ಜಿಪಂ ಅಧಿಕಾರಿ- ಸಿಬ್ಬಂದಿ ಹಾಗೂ ವಿಶೇಷ ಚೇತನರು, ಸಾರ್ವಜನಿಕರು ಭಾಗವಹಿಸಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ