LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಸೋರುತಿಹುದು ಶಾಲಾ ಮಾಳಿಗೆ...

ಸಿರುಗುಪ್ಪ :  ತಾಲ್ಲೂಕಿನ ಗಜಗಿನಹಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1-6ನೇ ತರಗತಿಯವರೆಗೆ ಓದುವ ಒಟ್ಟು 52 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಯೋಗ್ಯವಲ್ಲದ 4 ಬೋಧನಾ ಕೊಠಡಿಗಳಿವೆ. ಒಂದು ಕೊಠಡಿಯಲ್ಲಿ ಶಾಲಾ ಶಿಕ್ಷಕರ ಕಾರ್ಯಾಲಯ, ಅದರಲ್ಲಿಯೇ ಗ್ರಂಥಾಲಯ ಇದೆ. ಇನ್ನುಳಿದ ಕೊಠಡಿಗಳು ಶಿಥಿಲಾವಸ್ಥೆಯಲ್ಲಿವೆ. ಯಾವಾಗ ಮೇಲ್ಛಾವಣೆ ಕುಸಿದು ಬೀಳುತ್ತದೆ ಎಂಬ ಭಯ, ಆತಂಕ ಶಿಕ್ಷಕರು ಮತ್ತು ಪಾಲಕರಲ್ಲಿ ಕಾಡುತ್ತದೆ.



ಹೀಗಾಗಿ ಮಳೆಯಲ್ಲಿ ಮಕ್ಕಳಿಗೆ ಶಾಲೆ ರಜೆ ಅನಿವಾರ್ಯ. ಬಿಸಿಯೂಟದ ದವಸ ಧಾನ್ಯಗಳು ನೀರು ಪಾಲಾಗುತ್ತವೆ. ಶಾಲಾ ಸಾಮಗ್ರಿಗಳು, ಮಹತ್ವದ ಶಾಲಾ ದಾಖಲೆಗಳು ಮಳೆಯಿಂದಾಗಿ ನಾಶಗೊಂಡಿವೆ.

ಶಾಲಾ ಕಟ್ಟಡ ನಿರ್ಮಾಣಕ್ಕಾಗಿ, ಶಾಲಾ ಕೊಠಡಿಗಳ ದುರಸ್ತಿಗಾಗಿ ಶಿಕ್ಷಣ ಇಲಾಖೆ, ಮತಕ್ಷೇತ್ರದ ಶಾಸಕರಿಗೆ ಸಾಕಷ್ಟು ಸಲ ಮನವಿ ಮಾಡಿಕೊಂಡಾಗಲೂ ಯಾವುದೇ ಕ್ರಮ ಕೈಗೊಂಡಿಲ್ಲ.



ಇನ್ನಾದರೂ ಎಚ್ಚೆತ್ತುಕೊಂಡು ಶಾಲಾ ಕೊಠಡಿಗಳ ನಿರ್ಮಾಣ, ದುರಸ್ತಿ ಆಗದಿದ್ದರೆ ಶಾಲಾ ಮಕ್ಕಳೊಂದಿಗೆ ಶಾಲಾ ಸುಧಾರಣಾ ಸಮಿತಿ ಸದಸ್ಯರು ಶಿಕ್ಷಣ ಇಲಾಖೆಯ ಕಾರ್ಯಾಲಯದ ಎದುರು ಉಗ್ರ ಪ್ರತಿಭಟನೆ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಈಗಾಗಲೇ ಮನವಿ ಸಲ್ಲಿಸಲಾಗಿದೆ ಎಂದು ಸಮಿತಿ ಸದಸ್ಯರು ಎಚ್ಚರಿಕೆ ನೀಡಿದ್ದಾರೆ. 


" ಇಲ್ಲಿ ಓದುವ ಬಹುತೇಕ ಮಕ್ಕಳು ಮಾದಿಗ ಜನಾಂಗದವರಾಗಿರುವ ಕಾರಣ ಎಲ್ಲಾ ಅಧಿಕಾರಿಗಳು ನಮ್ಮ ಮನವಿಗಳಿಗೂ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಏನಾದರೂ ಅವಘಡ ಸಂಭವಿಸಿದರೆ ಎಲ್ಲರೂ ತಲೆದಂಡ ಕೊಡಬೇಕಾಗುತ್ತದೆ. ಹಾಗಾಗಿ ಮುಂಚೆಯೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಲಿ."

ಮರಿಯಪ್ಪ , ಎಸ್.ಡಿ.ಎಂ.ಸಿ ಅಧ್ಯಕ್ಷ



"ಎರಡು ವರ್ಷಗಳಿಂದ ಹೊಸ ಶಾಲಾ ಕಟ್ಟಡ ನಿರ್ಮಾಣಕ್ಕೆ ಮನವಿಗಳನ್ನು ಸಲ್ಲಿಸಿ, ಕಾಲ ಕಾಲಕ್ಕೆ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ನಿನ್ನೆ ಮತ್ತೆ ಮೇಲ್ಚಾವಣಿಯ ಸಿಮೆಂಟ್ ಕುಸಿದು ಬಿತ್ತು. ಕೂದಲೆಳೆಯಲ್ಲಿ ಅಪಾಯ ತಪ್ಪಿದೆ."

   - ಹನುಮಂತ ರೆಡ್ಡಿ , ಮುಖ್ಯೋಪಾಧ್ಯಾಯ



" ಗಜಗಿನಹಾಳು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮೂರು ಕೊಠಡಿಗಳ ದುರಸ್ತಿಗೆ ಅನುದಾನ ದೊರೆತ ಕೂಡಲೆ ಕೊಠಡಿಗಳನ್ನು ದುರಸ್ತಿ ಮಾಡಲಾಗುವುದು."

ಹೆಚ್.ಗುರಪ್ಪ , ಬಿ.ಇ.ಓ, ಸಿರುಗುಪ್ಪ.


Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ