LIVE TV StateNationalPoliticsCrimeEntertainmentSportsEducationFINANCE & TAXATION
Districts

ಅಕ್ರಮ ಚಟುವಟಿಕೆಗಳ ನಿಯಂತ್ರಣಕ್ಕೆ ಸಿಬ್ಬಂದಿಗೆ ಎಸ್ಪಿ ಖಡಕ್ ಎಚ್ಚರಿಕೆ

ಬಳ್ಳಾರಿ : ಪ್ರತಿಪಕ್ಷಗಳ ಆರೋಪದಂತೆ, ಮಾಧ್ಯಮಗಳ ವರದಿಯಂತೆ ನಗರದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಮಟ್ಕಾ, ಇಸ್ಪೀಟ್, ಅಕ್ರಮ ಮರಳು ಸಾಗಾಣೆ, ಗಾಂಜಾ ಮಾರಾಟ, ಎಲ್ಲಂದರಲ್ಲಿ ಮದ್ಯಪಾನ ಮಾಡುತ್ತಿರುವುದು ಸೇರಿದಂತೆ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಇದಕ್ಕೆ ಯಾರ ಮುಲಾಜಿಗೆ ಒಳಗಾಗಬೇಕಿಲ್ಲ. ಅಕ್ರಮ ತಡೆಯದಿದ್ದರೆ. ಅದರಲ್ಲಿ ನಿಮ್ಮ ಪಾತ್ರ ಕಂಡು ಬಂದರೆ ನಾನು ಸಹ ಮುಲಾಜಿಲ್ಲದೆ ನಿಮ್ಮ ಮೇಲೆ ಕ್ರಮ ತೆಗೆದುಕೊಳ್ಳುವುದಾಗಿ ನೂತನ ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್ ತಮ್ಮ ಕೆಳ ಸಿಬ್ಬಂದಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ನಗರದ ಬಿಡಿಎಎ ಸಭಾಂಗಣದಲ್ಲಿ ಕೆಳ ಹಂತದ ಅಧಿಕಾರಿಗಳ ಮತ್ತು ಸಿಬ್ಬಂದಿಯ ಸಭೆ ನಡೆಸಿದ ಅವರು ಇಲ್ಲಿ ವರೆಗೆ ಏನಾಗಿದಿಯೋ ಗೊತ್ತಿಲ್ಲ. ಯಾರ ರಕ್ಷಣೆಯಿಂದ ಹೀಗಾಗಿದೆಯೋ ಗೊತ್ತಿಲ್ಲ. ಇನ್ನು ಮುಂದೆ ನಡೆದರೆ ನಿಮ್ಮನ್ನು ಯಾರೂ ರಕ್ಷಣೆ ಮಾಡಲ್ಲ. ನಾನು ಯಾರನ್ನು  ರಕ್ಷಣೆ ಮಾಡಲ್ಲ. ನಗರದಲ್ಲಿ ಕಾನೂನು ಸುವ್ಯವಸ್ಥೆ ಇರಬೇಕು. ಎಲ್ಲಿ ಏನು ನಡೆಯುತ್ತದೆ ಎಂಬುದು ನಿಮಗೆಲ್ಲ ಅರಿವಿರುತ್ತದೆ. ಅದನ್ನು ನೀವೇ ಇಂದಿನಿಂದ ನಿಲ್ಲಿಸಲು ಮುಂದಾಗಬೇಕು. ನಾನು ಪರಿಶೀಲನೆ ನಡೆಸಿದಾಗ ಅಕ್ರಮ ದಂಧೆ ಕಂಡು ಬಂದರೆ ಅಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿ ಹೊಣೆಗಾರರಾಗಬೇಕಾಗುತ್ತದೆಂದು ಎಚ್ಚರಿಕೆ ನೀಡಿ ಕಳಿಸಿದ್ದಾರಂತೆ.

ಈ ಎಚ್ಚರಿಕೆ ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತದೆ ಎಂದು ಕಾದು ನೋಡಬೇಕಿದೆ. ಅಕ್ರಮ ಚಟುವಟಿಕೆಗಳ ಬಗ್ಗೆ ಸಾಕ್ಷಿ ಸಮೇತ ನೀಡಿದರೆ ತಕ್ಷಣ ಕ್ರಮ ಜರುಗಲಿದೆಂದು ಮಾಧ್ಯಮಗಳಿಗೆ ಹೇಳಿದ್ದಾರೆ. ಇನ್ನು ಪ್ರೆಸ್ ಎಂದು ಮಾಧ್ಯಮ ಕ್ಷೇತ್ರದಲ್ಲಿ ಇಲ್ಲದವರೂ ತಮ್ಮ ಬೈಕ್ ಗಳಿಗೆ ಬರೆಸಿಕೊಂಡು ಅಕ್ರಮ ಚಟುವಟೆಕೆ ನಡೆಸುವ ಬಗ್ಗೆಯೂ ಮಾಹಿತಿ ಬರುತ್ತಿದೆ. ಯಾರೇ ಆಗಲಿ ಅವರ ಮೇಲೆ ಕ್ರಮ ಜರುಗಿಸುವುದು ನಿಶ್ಚಿತ ಎಂದಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ