LIVE TV StateNationalPoliticsCrimeEntertainmentSportsEducationFINANCE & TAXATION
Districts

ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪ್ರತಿಭಟನೆಗೆ ಬೆಂಬಲಿಸಿದ ಶ್ರೀರಾಮುಲು

ಬಳ್ಳಾರಿ: 7ನೇ ವೇತನ ಆಯೋಗದ ಸೌಲಭ್ಯ, ರಾಜ್ಯ ಸರ್ಕಾರಿ ನೌಕರರಿಗೆ ವಿಸ್ತರಿಸಿರುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ, ನೌಕರರಿಗೆ ಯಥಾವತ್ತಾಗಿ ಆರ್ಥಿಕ ಇಲಾಖೆಯಿಂದಲೆ ಅನುದಾನವನ್ನು ಬಿಡುಗಡೆ ಮಾಡಬೇಕು ಎನ್ನುವುದೂ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕಳೆದ 4ದಿನಗಳಿಂದ ಮಹಾನಗರ ಪಾಲಿಕೆ ಕಚೇರಿ ಎದುರು ಪಾಲಿಕೆ ಅಧಿಕಾರಿಗಳು, ಸಿಬ್ಬಂದಿಗಳು ನಡೆಸುತ್ತಿದ್ದ ಪ್ರತಿಭಟನೆಗೆ ಮಾಜಿ ಸಚಿವ ಬಿ.ಶ್ರೀರಾಮುಲು ಹಾಗೂ ಕೆಎಂಎಫ್ ಮಾಜಿ ಅಧ್ಯಕ್ಷ, ಮಾಜಿ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಅವರು ಬೆಂಬಲ ಸೂಚಿಸಿದರು. 

ಬಿಜೆಪಿ ಜಿಲ್ಲಾ ಸಮಿತಿ ಪದಾಧಿಕಾರಿಗಳು, ನೂರಾರು ಕಾರ್ಯಕರ್ತರು ಧರಣಿಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಶ್ರೀರಾಮುಲು ಅವರು ಮಾತನಾಡಿ, ಮಹಾನಗರ ಪಾಲಿಕೆ ಅಧಿಕಾರಿಗಳು, ನೌಕರರು ತಮ್ಮ ನ್ಯಾಯಯುತ ನಾನಾ ಬೇಡಿಕೆಗಳನ್ನು ಮುಂದಿಟ್ಟುಕೊAಡು ಕಳೆದ ೪ ದಿನಗಳಿಂದ ಧರಣಿ ನಡೆಸುತ್ತಿದ್ದು, ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಕೂಡಲೇ ಸರ್ಕಾರ ನೌಕರರ, ಅಧಿಕಾರಿಗಳ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.



ಸರ್ಕಾರಕ್ಕೆ ಕಣ್ಣು ಇಲ್ಲ, ಕಿವಿಯೂ ಇಲ್ಲದಾಗಿದೆ. ರಾಜ್ಯದ ಜನರು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಡವರ ನೆಮ್ಮದಿ ಹಾಳಾಗಿದೆ. ಬೆಲೆ ಏರಿಕೆಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿಲ್ಲ. ಅಧಿಕಾರಕ್ಕಾಗಿ ತಮ್ಮ ತಮ್ಮ ಒಳ ಜಗಳದಲ್ಲೇ ನಿರತರಾಗಿದ್ದಾರೆ, ಬಡವರ ಕಷ್ಟ, ಸುಖಗಳನ್ನು ಆಲಿಸಲು ಸರ್ಕಾರ ಮುಂದಾಗುತ್ತಿಲ್ಲ. ಅವರಿಗೆ ಸಮಯವು ಇಲ್ಲದಾಗಿದೆ.  ೫ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ನಿತ್ಯ ರಾಜ್ಯ ಕಾಂಗ್ರೆಸ್ ಸರ್ಕಾರ ಕಸರತ್ತು ಪಡುತ್ತಿದ್ದು, ಬಡಜನರ, ರೈತರ, ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಲು ಮುಂದಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ಕೆಎಂಎಫ್ ಮಾಜಿ ಅಧ್ಯಕ್ಷರು, ಮಾಜಿ ಶಾಸಕರಾದ ಜಿ. ಸೋಮಶೇಖರ್ ರೆಡ್ಡಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಪಾಲಿಕೆ ವಿರೋಧ ಪಕ್ಷದ ನಾಯಕ ಇಬ್ರಾಹಿಂ ಬಾಬು, ಸಫಾಯಿ ಕರ್ಮಚಾರಿಗಳ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಹನುಮಂತಪ್ಪ, ಬಿಜೆಪಿ ನಗರ ಘಟಕದ ನೂತನ ಅಧ್ಯಕ್ಷ ವೆಂಕಟರಮಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೀರಶೇಖರ್ ರೆಡ್ಡಿ, ರಾಜ್ಯ ಕಾರ್ಯದರ್ಶಿ ಕೆ.ಎಸ್.ದಿವಾಕರ್, ಮಹಾನಗರ ಪಾಲಿಕೆ ಸದಸ್ಯರಾದ ಕೆ. ಹನುಮಂತ, ಹನುಮಂತಪ್ಪ, ಸುರೇಖಾ ಮಲ್ಲನಗೌಡ, ಚೇತನ ವೇಮಣ್ಣ, ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಸುಗುಣ ಸೇರಿದಂತೆ ಇತರರು ಇದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ