LIVE TV StateNationalPoliticsInternationalCrimeEntertainmentSportsEducationFINANCE & TAXATION
Districts Bellary

ಬಳ್ಳಾರಿಯಲ್ಲಿ ರಾಜ್ಯ ಮಟ್ಟದ ಪರಿಷತ್ ಸಭೆ ಹಾಗೂ ನಶಾಮುಕ್ತ ಭಾರತ ಅಭಿಯಾನ

ಬಳ್ಳಾರಿ : ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ, ಜಿಲ್ಲಾ ಶಾಖೆ, ಬಳ್ಳಾರಿ ವತಿಯಿಂದ ಬಳ್ಳಾರಿ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ “ರಾಜ್ಯ ಮಟ್ಟದ ಪರಿಷತ್ ಸಭೆ” ನಡೆಯಿತು.

ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಿದ್ದಲಿಂಗ ಪ್ರಭು ಅವರು ಉದ್ಘಾಟಿಸಿ ಮಾತನಾಡಿ, ನಿವೃತ್ತ ನೌಕರರು ತಮ್ಮ ನಿವೃತ್ತಿ ಜೀವನವನ್ನು ಸುಖ-ಸಂತೋಷದಿAದ ಬಾಳಲಿ ಎಂದು ಶುಶ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ರಾಜ್ಯಾಧ್ಯಕ್ಷ ಡಾ.ಎಲ್. ಬೈರಪ್ಪ ಅವರು ಮಾತನಾಡಿ, ‘ಸಂಧ್ಯಾ ಸುರಕ್ಷಾ’ ಯೋಜನೆ ಜಾರಿ, 70 ವರ್ಷ ಪೂರೈಸಿದ ಪಿಂಚಣಿದಾರರಿಗೆ ಶೇ.10ರಷ್ಟು ಪಿಂಚಣಿ ಹೆಚ್ಚಳ ಹಾಗೂ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ನಿವೃತ್ತ ನೌಕರರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರಮಿಸುವುದಾಗಿ ತಿಳಿಸಿದರು.

ನಶಾಮುಕ್ತ ಭಾರತ ಅಭಿಯಾನ ಪ್ರತಿಜ್ಞಾವಿಧಿ:

ಕಾರ್ಯಕ್ರಮದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದೇಶದಂತೆ ‘ನಶಾಮುಕ್ತ ಭಾರತ ಅಭಿಯಾನ’ದಡಿ ಮಾದಕ ದ್ರವ್ಯ ವಿರೋಧಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಶಾಲಾ-ಕಾಲೇಜುಗಳಲ್ಲಿ ಕ್ರೀಡಾ ಚಟುವಟಿಕೆ, ಸಸಿ ನೆಡುವ ಕಾರ್ಯಕ್ರಮ ಮತ್ತು ಜಿಲ್ಲೆಯಾದ್ಯಂತ ಪ್ರತಿಜ್ಞಾವಿಧಿ ಸ್ವೀಕರಿಸುವ ಕುರಿತು ನಿರ್ಣಯಿಸಲಾಯಿತು.

news_1787227343_1_537.webp

 

ಪುಸ್ತಕ ಬಿಡುಗಡೆ:

ಮಾಜಿ ಖಜಾಂಚಿ ಚೌಡಯ್ಯ ಅವರು ರಚಿಸಿದ “ಕಿತ್ತೂರು ಕಿಡಿ” ಹಾಗೂ “ಬೆಳವಡಿ ಯಲ್ಲಯ್ಯ” ಕೃತಿಗಳನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.

ಸನ್ಮಾನ ಮತ್ತು ಸಾಂಸ್ಕೃತಿಕ ವೈಭವ:

75 ವರ್ಷ ಪೂರೈಸಿದ ಬಳ್ಳಾರಿ ಜಿಲ್ಲೆಯ ನಿವೃತ್ತ ನೌಕರರನ್ನು ಹಾಗೂ ಕಾರ್ಯಕ್ರಮಕ್ಕೆ ಸಹಕರಿಸಿದ ದಾನಿಗಳನ್ನು ಸತ್ಕರಿಸಲಾಯಿತು. ಲಕ್ಷಿö್ಮ ಕಲಾ ಕ್ಷೇತ್ರದ ಮಕ್ಕಳಿಂದ ಸಾಂಸ್ಕೃತಿಕ ನೃತ್ಯ, ಜನಪದ ಗಾಯಕರಾದ ಎಮ್ಮಿಗನೂರು ಜಡೇಶ್, ನಾಗೇಂದ್ರ ಬೆಂಗಳೂರು ಮತ್ತು ದತ್ತ ಗುರುನಾಥ್ ರವರಿಂದ ಗೀತೆಗಳ ಗಾಯನ ಜರುಗಿತು.

ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನು ಜಿಲ್ಲಾಧ್ಯಕ್ಷ ಡಾ. ಎಂ.ಟಿ. ಮಲ್ಲೇಶ್ ಅವರು ನುಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನೆ, ನಿವೃತ್ತ ನ್ಯಾಯಾಧೀಶ ಹೆಚ್. ರಾಮು, ಸಂಘದ ಪ್ರಧಾನ ಕಾರ್ಯದರ್ಶಿ ರಂಗೇಗೌಡ, ಖಜಾಂಚಿ ಎಸ್.ಎಂ. ಆನಂದಪ್ಪ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಕೇಂದ್ರ ಹಾಗೂ ಜಿಲ್ಲಾ ಸಂಘದ ಪದಾಧಿಕಾರಿಗಳು, 500ಕ್ಕೂ ಹೆಚ್ಚು ನಿವೃತ್ತ ನೌಕರರು ಭಾಗವಹಿಸಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ನಿವೃತ್ತ ಹಿರಿಯ ಮುಖ್ಯ ಗುರುಗಳಾದ ಮೆಹತಾಬ್ ಹಾಗೂ ಎಂ. ಶಿವಾಜಿರಾವ್ ಸ್ವಾಗತಿಸಿದರು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗೇಂದ್ರಗೆ ಮತ್ತೊಂದು ಮಹತ್ವದ ಹೊಣೆ: ಕಲ್ಯಾಣ ಕರ್ನಾಟಕ ಸಚಿವಾಲಯದ ಜವಾಬ್ದಾರಿಸಂಸ್ಕೃತ ವಿಶ್ವವ್ಯಾಪಿ ಜ್ಞಾನಭಾಷೆ, ಸಂಶೋಧನೆಗೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಲಿಕಲ್ಲೂರು- ಶಿಶು ಪಾಲನಾ ಕೇಂದ್ರದಲ್ಲಿ ತಾಯಂದಿರಿಗೆ ಜಾಗೃತಿ. ಹೊನ್ನಳ್ಳಿ ತಾಂಡಾದಲ್ಲಿ ಶ್ರೀಗುರು ಅಜ್ಜಯ್ಯನ ದ್ವಿತೀಯ ದಶಮಾನೋತ್ಸವ ವಿಶೇಷ ಪೂಜಾ ಕಾರ್ಯಕ್ರಮಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆಬಳ್ಳಾರಿಯಲ್ಲಿ ದಿವಂಗತ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆಬಳ್ಳಾರಿಯಲ್ಲಿ ರಾಜ್ಯ ಮಟ್ಟದ ಪರಿಷತ್ ಸಭೆ ಹಾಗೂ ನಶಾಮುಕ್ತ ಭಾರತ ಅಭಿಯಾನಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡಿ: ಸಿಎಂ ಡಿ ಕೆ ಶಿವಕುಮಾರ್ ಒತ್ತಾಯಯಾರಿಗೆ ಒಲೆಯುತ್ತೆ ಬಿಜೆಪಿ ಟಿಕೆಟ್ ರಾಜೀವ್ ಗಾಂಧಿ ಹಾದಿಯಲ್ಲಿ ರಾಹುಲ್ ಗಾಂಧಿ