LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಒಳಮೀಸಲಾತಿ ವರದಿ ಸರ್ಕಾರಕ್ಕೆ ಶೀಘ್ರ ಸಲ್ಲಿಸಿ

ಜಾತಿಗಣತಿ ಸಮೀಕ್ಷೆ ಯಶಸ್ವಿ ದೇಶಕ್ಕೆ ಮಾದರಿ

ನ್ಯಾ.ನಾಗಮೋಹನ್ ದಾಸ್ ಅವರಿಗೆ ಅಭಿನಂದನೆ

ಮಾಜಿ ಸಚಿವ ಆಂಜನೇಯ ನೇತೃತ್ವದ ನಿಯೋಗ

ಚಿತ್ರದುರ್ಗ : ಪರಿಶಿಷ್ಟ ಜಾತಿಗೆ ಸೀಮಿತಗೊಳಿಸಿ ನಡೆಸಿರುವ ಜಾತಿಗಣತಿ ಸಮೀಕ್ಷೆ ವರದಿಯನ್ನು ಶೀಘ್ರ ರಾಜ್ಯ ಸರ್ಕಾರಕ್ಕೆ ಸಲ್ಲಿಸುವಂತೆ ಮಾದಿಗ ಮುಖಂಡರು ಮನವಿ‌ ಮಾಡಿದರು.

ಬೆಂಗಳೂರಿನಲ್ಲಿ ನ್ಯಾ.ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದ ಕಚೇರಿಗೆ ಮಾಜಿ ಸಚಿವ ಎಚ್.ಆಂಜನೇಯ ನೇತೃತ್ವದಲ್ಲಿ ಮಾದಿಗ ಮುಖಂಡರ ನಿಯೋಗ ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿತು.

 

ರಾಜ್ಯದಲ್ಲಿ ಮಾದಿಗ ಮತ್ತು ಛಲವಾದಿ ಸಮುದಾಯ ಎಕೆ, ಎಡಿ, ಆದಿಆಂಧ್ರ ಹೆಸರಿನಲ್ಲಿ ಗುರುತಿಸಿಕೊಂಡು ಗೊಂದಲದ ಕಾರಣ ಒಳಮೀಸಲಾತಿ ಜಾರಿಗೆ ತಾಂತ್ರಿಕ ಅಡಚಣೆ ಆಗಿತ್ತು.

ಈ ನಿಟ್ಟಿನಲ್ಲಿ ಎಸ್ಸಿಯಲ್ಲಿನ ಎಲ್ಲ ಜಾತಿಗಳ ಮೂಲ ಜಾತಿ ಜೊತೆಗೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಹಿಂದುಳಿಯುವಿಕೆ ಗುರುತಿಸಲು ರಾಜ್ಯ ಸರ್ಕಾರ ತಮ್ಮ ನೇತೃತ್ವದಲ್ಲಿ ನಡೆಸಿದ ಜಾತಿಗಣತಿ ಸಮೀಕ್ಷೆ ಕಾರ್ಯ ಯಶಸ್ವಿಗೊಂಡಿದ್ದು, ದೇಶಕ್ಕೆ ಮಾದರಿ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

 

ಮೇ 5ರಂದು ಆರಂಭಗೊಂಡ ಸಮೀಕ್ಷೆ ಕಾರ್ಯ  ರಾಜ್ಯಾದ್ಯಂತ ಜೂನ್ 30 ಹಾಗೂ ಬೆಂಗಳೂರು ಮಹಾನಗರ ಪಾಲಿಕೆಗೆ ಸೀಮಿತಗೊಳಿಸಿ ಜುಲೈ 6ರ ವರೆಗೆ ನಡೆಸಲಾಗಿದೆ. ಈ ಮೂಲಕ ಜಾತಿಗಣತಿ ಸಮೀಕ್ಷೆ ಕಾರ್ಯದಲ್ಲಿ ನೋಂದಣಿ ಮಾಡಿಕೊಳ್ಳಲು ಬಹಳಷ್ಟು ಅವಕಾಶವನ್ನು ಆಯೋಗ ಕಲ್ಪಿಸಿದೆ. ಈಗ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದ್ದು, ತಕ್ಷಣ ಆಯೋಗ ದತ್ತಾಂಶದ ಸಮಗ್ರ ವರದಿಯನ್ನು ಶೀಘ್ರ ರಾಜ್ಯ ಸರ್ಕಾರಕ್ಕೆ ಸಲ್ಲಿಸುವ ಮೂಲಕ ಪರಿಶಿಷ್ಟ ಜಾತಿಯಲ್ಲಿನ ಎಲ್ಲ ವರ್ಗಗಳಿಗೆ ಮೀಸಲಾತಿ ಸೌಲಭ್ಯ ಹಂಚಿಕೆ ಮಾಡಲು ಸಹಕರಿಸಬೇಕೆಂದು ಕೋರಿದರು.

ಈ ವೇಳೆ ನ್ಯಾ.ನಾಗಮೋಹನ್ ದಾಸ್ ಅವರನ್ನು ನಿಯೋಗದ ಸದಸ್ಯರು ಹೂಮಾಲೆ ಹಾಕಿ ಅಭಿನಂದಿಸಿದರು.

ಮಾಜಿ ಸಂಸದ ಬಿ.ಎಂ.ಚಂದ್ರಪ್ಪ, ಸಮುದಾಯದ ಮುಖಂಡರಾದ ಕೆ.ಜೆ.ಜಗದೀಶ್, ಕೋಗಿಲು ವೆಂಕಟೇಶ್,  ಮುತ್ತುರಾಜು,  ದೊಡ್ಡಗುಬ್ಬಿ ಸತೀಶ್,  ಅನಿಲ್ ಕೋಟಿ, ದೇವದಾಸ್,  ಎಂ.ಶ್ರೀನಿವಾಸ್ ನ್ಯಾಯವಾದಿಗಳಾದ ಮೋಹನ್ ರಾಜ್, ಶ್ರೀ ಮಂಜುನಾಥ, ತುಳಸಿರಾಮ್, ಆದಿನಾರಾಯಣಪ್ಪ ಮುಂತಾದವರು ಇದ್ದರು..
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ